ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಗುಲಾಬ್ ಚಂಡಮಾರುತ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ವಾಯುಭಾರ ಕುಸಿತದಿಂದ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಮತ್ತು ರಾಯಚೂರಿನಲ್ಲಿ ಇಂದು ಹಾಗೂ ನಾಳೆ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ ಎಂದು ಹೇಳಿದೆ.
ಬೆಂಗಳೂರು ನಗರದಲ್ಲಿ ಮಳೆ:
ಬೆಂಗಳೂರಿನಲ್ಲಿ ಎರಡು ದಿನ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ ಮಳೆ ಬೀಳಲಿದೆ.
ಮುಂಗಾರು ಇನ್ನೂ 3 ದಿನ:
ರಾಜ್ಯದಲ್ಲಿ ಸುರಿಯುತ್ತಿರುವ ಮುಂಗಾರು ಮಾನ್ಸೂನ್ ಮುಗಿಯಲು 3 ದಿನ ಬಾಕಿಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: Bank Holiday: ಗ್ರಾಹಕರೇ ಗಮನಿಸಿ... ಅಕ್ಟೋಬರ್ ತಿಂಗಳಲ್ಲಿ 21 ದಿನ ಬ್ಯಾಂಕ್ ರಜೆ