ಬೆಂಗಳೂರು : ಠೇವಣಿದಾರರ ಹಣ ದುರ್ಬಳಕೆ ಪ್ರಕರಣ ಹಿನ್ನೆಲೆ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿಮಿಟೆಡ್‌ಗೆ ಕೆನರಾ ಬ್ಯಾಂಕಿನ ನಿವೃತ್ತ ಡೆಪ್ಯೂಟಿ ಜನರಲ್ ಮ್ಯಾನೇಜರ್ ಕೆ. ಎಸ್. ಶ್ಯಾಮ್ ಪ್ರಸಾದ್ರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಹೈಕೋರ್ಟ್ ಆದೇಶಿಸಿದೆ.
ಈ ಕುರಿತು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಆಡಳಿತಾಧಿಕಾರಿಗಳಿಗೆ ಸಂಬಂಧಿಸಿದಂತೆ ಆರ್‌ಬಿಐ ಸಲ್ಲಿಸಿದ ಪ್ರಸ್ತಾವನೆ ಪರಿಶೀಲಿಸಿದ ಪೀಠ, ಶ್ಯಾಮ್ ಪ್ರಸಾದ್ರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿತು.
ಕೋರ್ಟ್ ಅದೇಶ ಅಧಿಕೃತವಾಗಿ ಹೊರಬಿದ್ದ ಒಂದು ವಾರದಲ್ಲಿ ಆಡಳಿತಾಧಿಕಾರಿಯನ್ನು ನೇಮಿಸಿರುವ ಸಂಬಂಧ ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ಸೂಚಿಸಿತು.
ಅಲ್ಲದೇ, ಆಡಳಿತಾಧಿಕಾರಿ ಅಧಿಕಾರ ವಹಿಸಿಕೊಂಡ ಬಳಿಕ ದಾಖಲೆಗಳನ್ನು ಪರಿಶೀಲಿಸಿ, ಠೇವಣಿದಾರರ ಹಿತ ಕಾಪಾಡಲು ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಎಂಬ ಬಗ್ಗೆ ಎರಡು ವಾರದಲ್ಲಿ ಕೋರ್ಟ್ಗೆ ವರದಿ ಸಲ್ಲಿಸಬೇಕು. ಅದಕ್ಕಾಗಿ ಆಡಳಿತಾಧಿಕಾರಿ ತಮ್ಮೆಲ್ಲಾ ಅಧಿಕಾರ ಚಲಾಯಿಸಬಹುದು ಎಂದು ತಿಳಿಸಿ ವಿಚಾರಣೆಯನ್ನು ಮಾ.24ಕ್ಕೆ ಮುಂದೂಡಿತು.