ETV Bharat / state

ಫೋನ್ ಕದ್ದಾಲಿಕೆ ಪ್ರಕರಣ: ಬಿಜೆಪಿ ವಿರುದ್ಧ ಗರಂ ಆದ ದೇವೇಗೌಡ್ರು

ಯಾರ ಕಾಲದಲ್ಲಿ ಏನಾಗಿದೆ, ಯಾರು ಏನೇನು ಮಾಡಿದ್ದಾರೆ ಅನ್ನೋದು ಗೊತ್ತಿದೆ. ಪೋನ್ ಟ್ರ್ಯಾಪ್​ ಆರೋಪದ ಕುರಿತು ಮಾಜಿ ಪ್ರಧಾನಿ ದೇವೇಗೌಡ ಬಿಜೆಪಿಗರ ವಿರುದ್ಧ ಗುಡುಗಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು
author img

By

Published : Aug 15, 2019, 12:25 PM IST

ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರಿರುವ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಬಿಜೆಪಿಯವರಿಗೆ ಮಾನ ಮರ್ಯಾದೆ ಇದೆಯಾ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಫೋನ್ ಕದ್ದಾಲಿಕೆ ವಿಚಾರದಲ್ಲಿ ನಾನು ತುಂಬಾ ಮಾತಾಡಬಲ್ಲೆ ಎಂದು ಗುಡುಗಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ 73 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರ ಉಳಿಸಿಕೊಳ್ಳಲು ಹೆಚ್ ಡಿ ಕುಮಾರಸ್ವಾಮಿ ಫೋನ್ ಕದ್ದಾಲಿಕೆ ಮಾಡಿದ್ದಾರೆ ಅನ್ನೋ ಬಿಜೆಪಿ ಆರೋಪ ವಿಚಾರಕ್ಕೆ ಗರಂ ಆದ್ರು. ಬಿಜೆಪಿಯವರಿಗೆ ಬೇರೆ ಕೆಲಸ ಇಲ್ಲ ಅಲ್ವಾ? ಅವರು ಏನೇನು ಮಾಡಿದ್ದಾರೆ ಗೊತ್ತಿದೆ. ಕದ್ದಾಲಿಕೆ ಯಾಕೆ, ನೇರವಾಗಿ ಶಾಸಕರನ್ನೇ ಹೊತ್ತುಕೊಂಡು ಹೋದ ಜನ ಅವರು ಎಂದು ಸಿಟ್ಟಿನಿಂದಲೇ ಮಾತನಾಡಿದ್ರು.

ಇದೇ ವೇಳೆ ನಾಡಿನ ಜನತೆಗೆ 73 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದ ದೇವೇಗೌಡರು, ಕರ್ನಾಟಕ ಸೇರಿದಂತೆ ದೇಶದ ಅನೇಕ ರಾಜ್ಯಗಳಲ್ಲಿ ಪ್ರವಾಹ ಉಂಟಾಗಿದೆ. ಹಿಂದೆಂದೂ ಕಂಡರಿಯದ ಪ್ರವಾಹ ರಾಜ್ಯದಲ್ಲಿ ಬಂದಿದೆ. ರೈತರು ಸೇರಿದಂತೆ ಅನೇಕ ಜನರು ಸಾವನ್ನಪ್ಪಿದ್ದಾರೆ. ಸರ್ಕಾರ ಕೂಡಾ ಅಗತ್ಯ ಕ್ರಮ ತೆಗೆದುಕೊಳ್ಳುತ್ತಿದೆ. ನಾವೆಲ್ಲರೂ ಒಗ್ಗಟ್ಟಾಗಿ ಈ ಸಮಯದಲ್ಲಿ ಕೆಲಸ ಮಾಡಬೇಕು. ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ನೆರೆ ಪರಿಹಾರಕ್ಕೆ ಅನುದಾನ ನೀಡದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ದೇವೇಗೌಡರು, ಮೋದಿ ಅವರು ಒಂದು ಸಭೆ ಮಾಡಿ ಹಣ ಕೊಡದೇ ಇರೋದು ದುರಂತ. ಅವರಿಗೆ ಏನು ಕಷ್ಟ ಇದೆಯೋ?. ಇಲ್ಲಿವರೆಗೂ ಒಂದು ರೂಪಾಯಿ ಸಹ ರಾಜ್ಯಕ್ಕೆ ಬಂದಿಲ್ಲ ಎಂದರು.

ನೀರು ಕಡಿಮೆ ಆದ ಮೇಲೆ ನಾನು ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ಕೊಡುತ್ತೇನೆ. ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳದೇ ಹೋದರೆ ನಾನೇ ಪ್ರಧಾನಿ ಅವರನ್ನು ಭೇಟಿಯಾಗುತ್ತೇನೆ. ರಾಜ್ಯ ಸರ್ಕಾರ ನಿಯೋಗ ಹೋದರು ಅದರೊಂದಿಗೆ ಹೋಗುತ್ತೇನೆ. ಇಲ್ಲ ಅಂದ್ರೆ ನಾನೇ ಹೋಗಿ ಮೋದಿ ಅವರಿಗೆ ಮನವಿ ಮಾಡುತ್ತೇನೆ. ಅಗತ್ಯ ಬಿದ್ದರೆ ಪ್ರಧಾನಿ ಮೋದಿ ಅವರಿಗೆ ಇನ್ನೊಂದು‌ ಪತ್ರ ಬರೆಯುತ್ತೇನೆ ಎಂದು ಹೇಳಿದ್ರು.

ಇನ್ನು ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ 370 ವಿಧಿ ರದ್ದಾದ ವಿಚಾರಕ್ಕೆ ಪ್ರತಿಕ್ರಿಯಿಸಿದ ದೇವೇಗೌಡರು, 370 ತೆಗೆದಿರುವುದರಿಂದ ಸ್ವಲ್ಪ ಬಿಕ್ಕಟ್ಟು ಉಂಟಾಗಿದೆ. ಕಾಶ್ಮೀರ ಜನತೆಯ ವಿಶ್ವಾಸ ತೆಗೆದುಕೊಳ್ಳದೇ ಹೋದರೆ ಈ ಬಿಕ್ಕಟ್ಟು ಮುಂದುವರೆಯುತ್ತದೆ. ಹಾಗಾಗಿ, ಕೇಂದ್ರ ಸರ್ಕಾರ ಕಾಶ್ಮೀರ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಕೇಂದ್ರಕ್ಕೆ ಮಾಜಿ ಪ್ರಧಾನಿ ಮನವಿ ಮಾಡಿದ್ರು.

ಕಾಶ್ಮೀರದಲ್ಲಿ ಹೆಚ್ಚು ಸೈನ್ಯ ಇಟ್ಟು ನಿರ್ಬಂಧದಲ್ಲಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗಿದೆ. ಬಂಧನದಲ್ಲಿ ಇರೋರನ್ನ ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕು. ಕಾಶ್ಮೀರಿ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಸಹಬಾಳ್ವೆಯಿಂದ ಬಾಳಲು ಅನುವು ಮಾಡಿಕೊಡಬೇಕು. ಹಿಂದು-ಮುಸ್ಲಿಂ ಅನ್ನುವ ಒಡಕು ಮೂಡದಂತೆ ಕ್ರಮವಹಿಸಬೇಕು. ಇಂತಹ ಬಿಕ್ಕಟ್ಟನ್ನ ಹೆಚ್ಚು ದಿನ ಕೇಂದ್ರ ಸರ್ಕಾರ ಮುಂದುವರೆಸಬಾರದು ಎಂದು ಹೇಳಿದರು.

ದೇಶದಲ್ಲಿ ಹಲವು ಸಮಸ್ಯೆಗಳು ಇವೆ. 3 ತಿಂಗಳಲ್ಲಿ 5 ಲಕ್ಷ ಯುವಕರು ಉದ್ಯೋಗ ಕಳೆದುಕೊಂಡಿದ್ದಾರೆ. ಬೇಸಾಯದ ಬಗ್ಗೆ ಸರಿಯಾದ ಕ್ರಮ ಆಗಿಲ್ಲ. ಅಪೌಷ್ಠಿಕತೆಯಿಂದ ಮಕ್ಕಳು ಸಾಯುತ್ತಿದ್ದಾರೆ. ಕೇಂದ್ರ ಸರ್ಕಾರ ಹೇಳೊದೊಂದು ಮಾಡೋದೊಂದು ಆಗಿದೆ‌. ರೈತರು ಸಂಕಷ್ಟದಲ್ಲಿದ್ದಾರೆ. ಇದನ್ನು ಕೇಂದ್ರ ಸರಿಪಡಿಸಬೇಕು ಎಂದು ಹೆಚ್​ ಡಿ ದೇವೇಗೌಡ್ರು ಒತ್ತಾಯಿಸಿದರು.

Intro:ಬೆಂಗಳೂರು : ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ
ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಬಿಜೆಪಿ ಅವರಿಗೆ ಮಾನ ಮರ್ಯಾದೆ ಇದೆಯಾ ?. ಫೋನ್ ಕದ್ದಾಲಿಕೆ ವಿಚಾರದಲ್ಲಿ ನಾನು ತುಂಬಾ ಮಾತಾಡಬಲ್ಲೆ. ನನಗೆ ಎಲ್ಲಾ ಗೊತ್ತಿದೆ. ಎಂದು ವಾಗ್ದಾಳಿ ನಡೆಸಿದರು.Body:ಜೆಡಿಎಸ್ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ 73 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಾವ ಮುಖ್ಯಮಂತ್ರಿ ಕಾಲದಲ್ಲಿ ಏನಾಗಿದೆ. ಯಾವ ರಾಜ್ಯದಲ್ಲಿ ಫೋನ್ ಕದ್ದಾಲಿಕೆ ಆಗಿದೆ ಎಂಬುದು ಎಲ್ಲಾ ನನಗೆ ಗೊತ್ತಿದೆ. ಕೇಂದ್ರದಲ್ಲಿ ಏನು ನಡೆಯುತ್ತಿದೆ ಎಂಬುದೂ ಗೊತ್ತಿದೆ. ಯಾವ ಕಾಲದಲ್ಲಿ ಏನು ಆಗಿದೆ ಗೊತ್ತಿದೆ. ಈ ಬಗ್ಗೆ ಚರ್ಚೆ ಬೇಕಿಲ್ಲ ಎಂದರು.
ಸರ್ಕಾರ ಉಳಿಸಿಕೊಳ್ಳಲು ಕುಮಾರಸ್ವಾಮಿ ಫೋನ್ ಕದ್ದಾಲಿಕೆ ಮಾಡಿದ್ದಾರೆ ಅನ್ನೋ ಬಿಜೆಪಿ ಆರೋಪ ವಿಚಾರಕ್ಕೆ ಗರಂ ಆದ ಗೌಡರು, ಬಿಜೆಪಿ ಅವರಿಗೆ ಬೇರೆ ಕೆಲಸ ಇಲ್ಲ ಅಲ್ವಾ?. ಅವರು ಏನೇನು ಮಾಡಿದ್ದಾರೆ ಗೊತ್ತಿದೆ. ಕದ್ದಾಲಿಕೆ ಯಾಕೆ, ನೇರವಾಗಿ ಹೊತ್ತುಕೊಂಡು ಹೋದ ಜನ ಅವರು. ಮಾನ ಮಾರ್ಯಾದೆ ಇದೆಯಾ ಅವರಿಗೆ ಎಂದು ಸಿಟ್ಟಿನಿಂದಲೇ ಮಾತನಾಡಿದರು.
ನಾಡಿನ ಜನತೆಗೆ 73 ನೇ ವರ್ಷದ ಶುಭಾಶಯ ಕೋರಿದ ದೇವೇಗೌಡರು, ಕರ್ನಾಟಕ ಸೇರಿದಂತೆ ದೇಶದ ಅನೇಕ ರಾಜ್ಯಗಳಲ್ಲಿ ಪ್ರವಾಹ ಉಂಟಾಗಿದೆ. ಇಂದೆಂದೂ ಕಂಡರಯದೆ ಪ್ರವಾಹ ರಾಜ್ಯದಲ್ಲಿ ಬಂದಿದೆ. ರೈತರು ಸೇರಿದಂತೆ ಅನೇಕ ಜನರು ಸಾವನ್ನಪ್ಪಿದ್ದಾರೆ. ಸರ್ಕಾರ ಕೂಡಾ ಅಗತ್ಯ ಕ್ರಮ ತೆಗೆದುಕೊಳ್ಳುತ್ತಿದೆ. ನಾವೆಲ್ಲರೂ ಒಗ್ಗಟ್ಟಾಗಿ ಈ ಸಮಯದಲ್ಲಿ ಕೆಲಸ ಮಾಡಬೇಕು. ಸರ್ಕಾರ ಸೂಕ್ತ ಕ್ರಮ ನೆರೆಗೆ ತೆಗೆದುಕೊಳ್ಳಬೇಕು ಎಂದು ಹೇಳಿದರು.
ನೆರೆ ಪರಿಹಾರಕ್ಕೆ ಅನುದಾನ ನೀಡದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ದೇವೇಗೌಡರು,
ಮೋದಿ ಅವರು ಒಂದು ಸಭೆ ಮಾಡಿ ಹಣ ಕೊಡದೇ ಇರೋದು ದುರಂತ. ಅವರಿಗೆ ಏನು ಕಷ್ಟ ಇದೆಯೋ?. ಇಲ್ಲಿವರೆಗೂ ಒಂದು ರೂಪಾಯಿ ರಾಜ್ಯಕ್ಕೆ ಬಂದಿಲ್ಲ ಎಂದರು.
ನೀರು ಕಡಿಮೆ ಆದ ಮೇಲೆ ನಾನು ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ಕೊಡುತ್ತೇನೆ.
ರಾಜ್ಯ ಸರ್ಕಾರ ವರದಿ ಕೊಡುತ್ತದೆ. ಕೇಂದ್ರ ತಂಡ ಕೂಡಾ ಬಂದು ಹೋಗುತ್ತದೆ. ಆಗಲು ಅವರು ಕ್ರಮ ತೆಗೆದುಕೊಳ್ಳದೇ ಹೋದರೆ ನಾನೇ ಪ್ರಧಾನಿ ಅವರನ್ನು ಭೇಟಿಯಾಗುತ್ತೇನೆ.
ರಾಜ್ಯ ಸರ್ಕಾರ ನಿಯೋಗ ಹೋದರು ಹೋಗುತ್ತೇನೆ. ಇಲ್ಲ ಅಂದರೆ ನಾನೇ ಹೋಗಿ ಮೋದಿ ಅವರಿಗೆ ಮನವಿ ಮಾಡುತ್ತೇನೆ. ಅಗತ್ಯ ಬಿದ್ದರೆ ಪ್ರಧಾನಿ ಮೋದಿ ಅವರಿಗೆ ಇನ್ನೊಂದು‌ ಪತ್ರ ಬರೆಯುತ್ತೇನೆ ಎಂದು ಹೇಳಿದರು.
ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ 370 ವಿಧಿ ರದ್ದಾದ ವಿಚಾರಕ್ಕೆ ಪ್ರತಿಕ್ರಿಯಿಸಿದ ಗೌಡರು, 370 ತೆಗೆದಿರುವುದರಿಂದ ಸ್ವಲ್ಪ ಬಿಕ್ಕಟ್ಟು ಉಂಟಾಗಿದೆ. ಕಾಶ್ಮೀರ ಜನತೆಯ ವಿಶ್ವಾಸ ತೆಗೆದುಕೊಳ್ಳದೇ ಹೋದರೆ ಈ ಬಿಕ್ಕಟ್ಟು ಮುಂದುವರೆಯುತ್ತದೆ. ಹಾಗಾಗಿ, ಕೇಂದ್ರ ಸರ್ಕಾರ ಕಾಶ್ಮೀರ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಕೇಂದ್ರಕ್ಕೆ ಮನವಿ ಮಾಡಿದರು.
ಕಾಶ್ಮೀರದಲ್ಲಿ ಹೆಚ್ಚು ಸೈನ್ಯ ಇಟ್ಟು ನಿರ್ಬಂಧದಲ್ಲಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗಿದೆ. ಬಂಧನದಲ್ಲಿ ಇರೋರನ್ನ ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕು. ಕಾಶ್ಮೀರಿ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಸಹಬಾಳ್ವೆಯಿಂದ ಬಾಳಲು ಅನುವು ಮಾಡಿಕೊಡಬೇಕು. ಹಿಂದು-ಮುಸ್ಲಿ ಅನ್ನುವ ಒಡಕು ಮೂಡದಂತೆ ಕ್ರಮವಹಿಸಬೇಕು. ಸುಮಧುರ ಭಾವನೆ ಮೂಡುವ ವಾತಾವರಣ ಸೃಷ್ಟಿ ಮಾಡಬೇಕು. ಇಂತಹ ಬಿಕ್ಕಟ್ಟಯನ್ನ ಹೆಚ್ಚು ದಿನ ಕೇಂದ್ರ ಸರ್ಕಾರ ಮುಂದುವರೆಸಬಾರದು ಎಂದು ಹೇಳಿದರು.
ದೇಶದಲ್ಲಿ ಹಲವು ಸಮಸ್ಯೆಗಳು ಇವೆ. 3 ತಿಂಗಳಲ್ಲಿ 5 ಲಕ್ಷ ಯುವಕರು ಉದ್ಯೋಗ ಕಳೆದುಕೊಂಡಿದ್ದಾರೆ. ಬೇಸಾಯದ ಬಗ್ಗೆ ಸರಿಯಾದ ಕ್ರಮ ಆಗಿಲ್ಲ. ಅಪೌಷ್ಠಿಕತೆಯಿಂದ ಮಕ್ಕಳು ಸಾಯುತ್ತಿದ್ದಾರೆ. ಕೇಂದ್ರ ಸರ್ಕಾರ ಹೇಳೊದೊಂದು ಮಾಡೋದೊಂದು ಆಗಿದೆ‌. ರೈತರು ಸಂಕಷ್ಟದಲ್ಲಿದ್ದಾರೆ. ಇದನ್ನು ಕೇಂದ್ರ ಸರಿಪಡಿಸಬೇಕು ಎಂದು ಒತ್ತಾಯಿಸಿದರು.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.