ETV Bharat / state

ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ್ ನಿಧನಕ್ಕೆ ಹೆಚ್​​ಡಿಕೆ, ಸಿದ್ದರಾಮಯ್ಯ ಸಂತಾಪ - ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ್ ನಿಧನಕ್ಕೆ ಹೆಚ್​​ಡಿಕೆ ಸಂತಾಪ

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರದ ಮಾಜಿ ಸಚಿವ ಹಾಗೂ ರೈತ ಸಮುದಾಯದ ಪ್ರಭಾವಿ ನಾಯಕ ಬಾಬಾಗೌಡ ಪಾಟೀಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ್ ನಿಧನ
ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ್ ನಿಧನ
author img

By

Published : May 21, 2021, 12:21 PM IST

Updated : May 21, 2021, 1:50 PM IST

ಬೆಂಗಳೂರು: ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಸಚಿವರಾಗಿದ್ದ ಬಾಬಾಗೌಡ ಪಾಟೀಲ್, ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ, ರೈತರಿಗೆ ಸದಾ ಸ್ಪಂದಿಸುತ್ತಿದ್ದ ಅಪರೂಪದ ಜನಪರ ಕಾಳಜಿಯುಳ್ಳ ನಾಯಕ ಎಂದು ಕುಮಾರಸ್ವಾಮಿ ಬಣ್ಣಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯಿಂದ ದೇಶದ ಅನ್ನದಾತರು ಕವಲುದಾರಿಯಲ್ಲಿ ಇರುವಾಗಲೇ, ರೈತ ಪರ ನಾಯಕನೊಬ್ಬ ಅಗಲಿರುವುದು ನಿಜಕ್ಕೂ ಆಘಾತ ತಂದಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಿ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಅವರು ಶೋಕ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ: ರೈತ ಚಳವಳಿಯ ಮುಂಚೂಣಿ ನಾಯಕ ಬಾಬಾಗೌಡ ಪಾಟೀಲ್ ಶಾಸಕರಾಗಿ, ಕೇಂದ್ರ ಸಚಿವರಾಗಿ ಬದ್ಧತೆಯಿಂದ ಕಾರ್ಯನಿರ್ವಹಿಸಿದವರು. ಸಂಕಷ್ಟದಲ್ಲಿರುವ ರೈತ‌ಸಮುದಾಯಕ್ಕೆ ಪಾಟೀಲರಂತಹ ನಾಯಕರ ಅಗತ್ಯವಿರುವಾಗಲೇ ಅವರು ಅಗಲಿರುವುದು ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ‌ ಕೋರುವೆ. ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಟ್ವೀಟ್​ ಮಾಡಿದ್ದಾರೆ.

  • ಕೇಂದ್ರದ ಮಾಜಿ ಸಚಿವ ಹಾಗೂ ಪ್ರಭಾವಿ ರೈತ ಮುಖಂಡರಾಗಿದ್ದ ಶ್ರೀ ಬಾಬಗೌಡ ಪಾಟೀಲ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಘಾಸಿಯಾಗಿದೆ. ಅವರ ನಿಧನ ರೈತಾಪಿ ವರ್ಗಕ್ಕೆ ತುಂಬಲಾರದ ನಷ್ಟ. ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬ, ಹಿತೈಷಿಗಳಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

    — H D Devegowda (@H_D_Devegowda) May 21, 2021 " class="align-text-top noRightClick twitterSection" data=" ">

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸಂತಾಪ : ಕೇಂದ್ರದ ಮಾಜಿ ಸಚಿವ ಹಾಗೂ ಪ್ರಭಾವಿ ರೈತ ಮುಖಂಡರಾಗಿದ್ದ ಬಾಬಾಗೌಡ ಪಾಟೀಲ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಘಾಸಿಯಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ನಿಧನ ರೈತಾಪಿ ವರ್ಗಕ್ಕೆ ತುಂಬಲಾರದ ನಷ್ಟ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬ, ಹಿತೈಷಿಗಳಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಕುರುಬೂರು ಸಂತಾಪ: ರಾಜ್ಯ ರೈತ ಸಂಘದ ಪ್ರಭಾವಿ ಮುಖಂಡರು ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್​ ಸಾವು ರಾಜ್ಯದ ರೈತರ ಹೋರಾಟಕ್ಕೆ ತುಂಬಲಾರದ ನಷ್ಟವಾಗಿದೆ. ಕಳೆದ ವಾರ ರಾಜ್ಯದ ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸರ್ಕಾರಕ್ಕೆ ಪತ್ರ ಬರೆಯುವ ಬಗ್ಗೆ ಅವರ ಒಪ್ಪಿಗೆಯನ್ನು ಪಡೆಯಲು ದೂರವಾಣಿಯಲ್ಲಿ ಮಾತನಾಡಿದ್ದೆ. ಆಗಲೇ ಅವರು ನನಗೆ ಸ್ವಲ್ಪ ಆರೋಗ್ಯ ಸರಿ ಇಲ್ಲ ಎಂದು ಹೇಳಿದ್ದರು. ಅನಾರೋಗ್ಯದಲ್ಲೂ ಕೆಲವು ಸಲಹೆಗಳನ್ನು ನೀಡಿದ್ದರು, ಇದು ಅವರ ರೈತ ಪರ ಕಾಳಜಿಗೆ ನಿದರ್ಶನವಾಗಿದೆ. ಆದರೆ ಇಂದು ಅವರ ಸಾವಿನ ಸುದ್ದಿ ಕೇಳಿ ನನಗೆ ಬರಸಿಡಿಲು ಬಡಿದಂತಾಯಿತು. ಪಾಟೀಲ್​ರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ ವರ್ಗಕ್ಕೆ ಸಾವಿನ ದುಃಖವನ್ನು ಭರಿಸುವ ಶಕ್ತಿ ಬರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ರಾಜ್ಯ ಕಬ್ಬು ಬೆಳೆಗಾರರ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Last Updated : May 21, 2021, 1:50 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.