ಬೆಂಗಳೂರು: ಸುಳ್ಳು ಸ್ಲೋಗನ್ಗಳ ಸೃಷ್ಟಿಕರ್ತ, ಟರ್ಮಿನೇಟರ್, ಸಿದ್ಧಕಲೆಯ ನಿಪುಣಾಗ್ರೇಸರು ಈಗ ಜೆಡಿಎಫ್ ಎಂಬ ಹೊಸ ಜಪ ಮಾಡಿಕೊಂಡು ತಮ್ಮ ಜಾತ್ಯತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳುನೀರು ಬಿಟ್ಟಿದ್ದಾರೆ. ಸಹಕಾರ ಸಚಿವರ ಸಹಾಯಕನನ್ನು ಗೆಲ್ಲಿಸಿಕೊಳ್ಳಲು ಜಾತಿ ಸಹಕಾರಕ್ಕೆ ಮೊರೆ ಹೋಗಿದ್ದಾರೆ. ಅಯ್ಯೋ, ಎಂಥಾ ದುರ್ವಿಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಹೆಚ್ಡಿಕೆ, ಮತ ಫಸಲಿಗಾಗಿ ಜಾತಿ ರಾಜಕೀಯ ಮಾಡುತ್ತಿರುವ ನಕಲಿ ಜಾತ್ಯತೀತ ಶೂರನ ಅಸಲಿರೂಪ ಕಳಚಿದೆ. ಸಮುದಾಯದ ಅಧ್ಯಕ್ಷರೊಬ್ಬರು, ನೀವು ಮತ ಹಾಕುವುದು ಕಾಂಗ್ರೆಸ್ ಪಕ್ಷಕ್ಕಲ್ಲ, ನಮ್ಮ ಸಮುದಾಯದ ವ್ಯಕ್ತಿಗೆ ಎಂದು ಮನೆಮನೆಗೂ ಹೋಗಿ ಪ್ರಚಾರ ಮಾಡುತ್ತಿರುವುದು ಮಂಡ್ಯದಲ್ಲಿ ಮಜಬೂತಾಗಿ ನಡೆಯುತ್ತಿದೆ. ಹೇಳುವುದು ಒಂದು, ಮಾಡುವುದು ಇನ್ನೊಂದು. ಅವರಿಗೆ ಜೆಡಿಎಸ್ ಫೋಬಿಯಾ ಕಾಡುತ್ತಿದೆ. ಚುನಾವಣೆ ಬಂದರೆ ಜೆಡಿಎಸ್ ಚಳಿ-ಜ್ವರ ಹತ್ತುತ್ತದೆ. ಈ ಜ್ವರ ಬಿಡಿಸಿಕೊಳ್ಳಲು ಸಿದ್ದಸೂತ್ರದಾರ ಬಳಸುವ ಹೊಸ ಔಷಧವೇ JDF. ಅವರನ್ನು ಉಳಿಸುವ ಟಾನಿಕ್ನ ಹೆಸರೇ ಜೆಡಿಎಸ್ ಕುಟುಂಬ ರಾಜಕಾರಣ ಎಂದಿದ್ದಾರೆ.
-
ʼಸುಳ್ಳು ಸ್ಲೋಗನ್ʼಗಳ ಸೃಷ್ಟಿಕರ್ತ, ಟರ್ಮಿನೇಟರ್, ಸಿದ್ದಕಲೆಯ ನಿಪುಣಾಗ್ರೇಸರು ಈಗ ʼJDFʼ ಎಂಬ ಹೊಸ ಜಪ ಮಾಡಿಕೊಂಡು ತಮ್ಮ ಜಾತ್ಯತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳೂನೀರು ಬಿಟ್ಟಿದ್ದಾರೆ. ಸಹಕಾರ ಸಚಿವರ ಸಹಾಯಕನನ್ನು ಗೆಲ್ಲಿಸಿಕೊಳ್ಳಲು ʼಜಾತಿ ಸಹಕಾರʼಕ್ಕೆ ಮೊರೆ ಹೋಗಿದ್ದಾರೆ!! ಅಯ್ಯೋ, ಎಂಥಾ ದುರ್ವಿಧಿ. 1/6
— H D Kumaraswamy (@hd_kumaraswamy) December 8, 2021 " class="align-text-top noRightClick twitterSection" data="
">ʼಸುಳ್ಳು ಸ್ಲೋಗನ್ʼಗಳ ಸೃಷ್ಟಿಕರ್ತ, ಟರ್ಮಿನೇಟರ್, ಸಿದ್ದಕಲೆಯ ನಿಪುಣಾಗ್ರೇಸರು ಈಗ ʼJDFʼ ಎಂಬ ಹೊಸ ಜಪ ಮಾಡಿಕೊಂಡು ತಮ್ಮ ಜಾತ್ಯತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳೂನೀರು ಬಿಟ್ಟಿದ್ದಾರೆ. ಸಹಕಾರ ಸಚಿವರ ಸಹಾಯಕನನ್ನು ಗೆಲ್ಲಿಸಿಕೊಳ್ಳಲು ʼಜಾತಿ ಸಹಕಾರʼಕ್ಕೆ ಮೊರೆ ಹೋಗಿದ್ದಾರೆ!! ಅಯ್ಯೋ, ಎಂಥಾ ದುರ್ವಿಧಿ. 1/6
— H D Kumaraswamy (@hd_kumaraswamy) December 8, 2021ʼಸುಳ್ಳು ಸ್ಲೋಗನ್ʼಗಳ ಸೃಷ್ಟಿಕರ್ತ, ಟರ್ಮಿನೇಟರ್, ಸಿದ್ದಕಲೆಯ ನಿಪುಣಾಗ್ರೇಸರು ಈಗ ʼJDFʼ ಎಂಬ ಹೊಸ ಜಪ ಮಾಡಿಕೊಂಡು ತಮ್ಮ ಜಾತ್ಯತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳೂನೀರು ಬಿಟ್ಟಿದ್ದಾರೆ. ಸಹಕಾರ ಸಚಿವರ ಸಹಾಯಕನನ್ನು ಗೆಲ್ಲಿಸಿಕೊಳ್ಳಲು ʼಜಾತಿ ಸಹಕಾರʼಕ್ಕೆ ಮೊರೆ ಹೋಗಿದ್ದಾರೆ!! ಅಯ್ಯೋ, ಎಂಥಾ ದುರ್ವಿಧಿ. 1/6
— H D Kumaraswamy (@hd_kumaraswamy) December 8, 2021
ಜೆಡಿಎಸ್, ಬಿಜೆಪಿ ಬಿ ಟೀಂ ಎಂದು ಭಜನೆ ಮಾಡುವವರು ಸಹಕಾರ ಸಚಿವರ ಸಹಾಯಕನನ್ನು ಅಭ್ಯರ್ಥಿ ಮಾಡಿದ್ದು ಯಾರಿಗೆ ಸಹಕಾರ ನೀಡಲಿಕ್ಕೆ? ಜಾತ್ಯತೀತತೆಯ ಮುಖವಾಡ ಹಾಕಿಕೊಂಡು ಬಿಜೆಪಿಯನ್ನು ಬೈಯ್ಯುವವರು ಅದೇ ಪಕ್ಷದ ಸಚಿವರ ಪಿಎಗೆ ಟಿಕೆಟ್ ಕೊಟ್ಟಿದ್ದರ ಒಳಲೆಕ್ಕ ಏನು? ಇದು ಯಾರ ಲೆಕ್ಕ ಚುಕ್ತಾ ಮಾಡಲಿಕ್ಕೆ? ಇದೆಂಥಾ ಒಳ ಒಪ್ಪಂದ? ಎಂದು ಟೀಕಿಸಿದ್ದಾರೆ.
ಜಾತ್ಯತೀತತೆಯ ಜಗಜಟ್ಟಿ ಮೈಸೂರಿನಲ್ಲಿ ಮಾಡಿದ ಜಾತಿ ರಾಜಕಾರಣ ಗೊತ್ತಿದೆ. ಸಂದೇಶ ಸನ್ನಿಧಿಯಲ್ಲಿ ಕೂತು ಕಾಂಗ್ರೆಸ್ ಮತದಾರರ 2ನೇ ಪ್ರಾಶಸ್ತ್ಯದ ಮತಗಳು ಬಿಜೆಪಿಗೇ ಹೋಗಬೇಕು, ಜೆಡಿಎಸ್ಗಲ್ಲ ಎಂದು ಫರ್ಮಾನು ಹೊರಡಿಸಿದ ಚಾಮುಂಡೇಶ್ವರಿ ಕ್ಷೇತ್ರ ತಿರಸ್ಕೃತ, ಸುಳ್ಳು ಸ್ಲೋಗನ್ಗಳ ಸೃಷ್ಟಿಕರ್ತನ ನಾಟಕದ ಪರದೆ ಜಾರಿಬಿದ್ದಿದೆ ಎಂದು ಹರಿಹಾಯ್ದಿದ್ದಾರೆ.
ರಾಜಕೀಯ ಆರಂಭಿಸಿದ ಮಾತೃಪಕ್ಷವನ್ನೇ ಕ್ರೂರವಾಗಿ ಮುಳುಗಿಸಲು ಹೊರಟ ಆ ನಾಯಕರು, ಕೈ ಹಿಡಿದ ಸ್ವಪಕ್ಷವನ್ನೂ ಸ್ವಾಹಾ ಮಾಡುತ್ತಿದ್ದಾರೆ. ವಿನಾಶಕಾಲೇ ವಿಪರೀತ ಸುಳ್ಳು. ಆ ಸುಳ್ಳುಗಳೇ ಅವರನ್ನು ಸುಡುತ್ತವೆ. ಆಟ ಈಗ ಆರಂಭ ಎಂದು ಕುಮಾರಸ್ವಾಮಿ ಗುಡುಗಿದ್ದಾರೆ.