ETV Bharat / state

ಉಪನಗರ ರೈಲು ಯೋಜನೆ ರೂಪಿಸಿದ್ದು ನಾನು, ಮೋದಿಯಿಂದ ಪುಕ್ಕಟೆ ಪ್ರಚಾರ: ಹೆಚ್‌ಡಿಕೆ - ಮೋದಿ ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ ಎಂದ ಕುಮಾರಸ್ವಾಮಿ

ನಾನು 2018ರಲ್ಲಿ ಅಧಿಕಾರಕ್ಕೆ ಬರುವವರೆಗೆ ಈ ಯೋಜನೆ ಧೂಳು ಕುಡಿಯುತ್ತಿತ್ತು. 14 ತಿಂಗಳು ಸಿಎಂ ಆಗಿದ್ದಾಗ ರೈಲ್ವೆ ಸಚಿವ ಪಿಯೂಷ್ ಗೋಯಲ್​ರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೆ. ಈ ಮೂಲಕ 23,000 ಕೋಟಿ ರೂಪಾಯಿ ಮೊತ್ತದ ಯೋಜನೆ ಸಿದ್ಧಪಡಿಸಲಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು.

H D Kumaraswamy reaction about sub urban railway inauguration
ಕುಮಾರಸ್ವಾಮಿ
author img

By

Published : Jun 21, 2022, 9:59 PM IST

ಬೆಂಗಳೂರು: ಬೇರೊಬ್ಬರು ಮಾಡಿದ ಕೆಲಸವನ್ನು ತಮ್ಮದೆಂದು ಬಿಂಬಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದರು.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು 2018ರಲ್ಲಿ ಅಧಿಕಾರಕ್ಕೆ ಬರುವವರೆಗೆ ಈ ಯೋಜನೆ ಧೂಳು ಕುಡಿಯುತ್ತಿತ್ತು. 14 ತಿಂಗಳು ಸಿಎಂ ಆಗಿದ್ದಾಗ ರೈಲ್ವೆ ಸಚಿವ ಪಿಯೂಷ್ ಗೋಯಲ್​ರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೆ. ಈ ಮೂಲಕ 23,000 ಕೋಟಿ ರೂಪಾಯಿ ಮೊತ್ತದ ಯೋಜನೆಯನ್ನು ಸಿದ್ಧಪಡಿಸಲಾಗಿತ್ತು. ಆದರೆ ಅಂದು ಅಡಿಪಾಯ ಹಾಕಲು ಬಿಡಲಿಲ್ಲ ಎಂದು ಹೇಳಿದರು.

ಆಗಲೇ ಕಾಲಮಿತಿಯಲ್ಲಿ ಉಪನಗರ ರೈಲು ಯೋಜನೆ ಮುಗಿಸಲು ಸಂಪುಟದ ಒಪ್ಪಿಗೆ ತೆಗೆದುಕೊಂಡಿದ್ದೆ. ಅದಕ್ಕೆ ಕೇಂದ್ರ ಸರಕಾರ 19 ಷರತ್ತುಗಳನ್ನು ವಿಧಿಸಿತ್ತು. ಆ ಷರತ್ತುಗಳನ್ನು ನನ್ನ ಸರಕಾರ ಪೂರೈಸಿತ್ತು. ಆದರೆ, ಈಗ ಚುನಾವಣೆ ಬರುತ್ತಿದೆ ಎನ್ನುವ ಕಾರಣಕ್ಕೆ ಬಂದು ಯೋಜನೆಗೆ ಚಾಲನೆ ಕೊಟ್ಟಿದ್ದು ಕೇವಲ ಚುನಾವಣೆ ಗಿಮಿಕ್ ಅಷ್ಟೇ ಎಂದರು.

ಬಿಜೆಪಿಯವರಿಗೆ ಫೇಸ್ ವ್ಯಾಲ್ಯೂ ಇಲ್ಲ: ರಾಜ್ಯ ಬಿಜೆಪಿ ನಾಯಕರಿಗೆ ಫೇಸ್ ವ್ಯಾಲ್ಯೂ ಇಲ್ಲ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಂದಿಟ್ಟುಕೊಂಡು ಅವರ ಹೆಸರಿನಲ್ಲಿ ಚುನಾವಣೆಗೆ ಹೋಗುತ್ತಿದ್ದಾರೆ ಎಂದು ಹೇಳಿದರು.

ಆಪರೇಶನ್ ಕಮಲದ ರಾಷ್ಟ್ರೀಕರಣ: ಕರ್ನಾಟಕದಲ್ಲಿ ಪ್ರಾರಂಭವಾದ ಆಪರೇಶನ್ ಕಮಲ ಈಗ ರಾಷ್ಟ್ರದಾದ್ಯಂತ ಮಾಡಲಾಗುತ್ತಿದೆ. ರಾಜ್ಯದಲ್ಲಿ ಆಪರೇಶನ್ ಕಮಲ ನಡೆಸಿದಾಗ ನಾನು ಸಹನೆಯಿಂದ ನಡೆದುಕೊಂಡೆ. ಯಾವುದೇ ಗಲಭೆ, ಗಲಾಟೆಗೆ ಅವಕಾಶ ನೀಡಲಿಲ್ಲ. ಆದರೆ, ಮಹಾರಾಷ್ಟ್ರದಲ್ಲಿ ಶಿವಸೇನೆ ಸುಮ್ಮನಿರಲಾರದು. ಆ ಪಕ್ಷದ ಕಾರ್ಯಕರ್ತರು, ಆ ರಾಜ್ಯದ ಜನರು ತಾಳ್ಮೆಯಿಂದ ವರ್ತಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: 'ಜನತಾ ಮಿತ್ರ' ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಿದ ಹೆಚ್​ಡಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.