ETV Bharat / state

ನಿಯಮ ಗಾಳಿಗೆ ತೂರಿ ಕಾರ್ಯಕ್ರಮ ಮಾಡಿದವರನ್ನು ಬಂಧಿಸಬೇಕಿತ್ತು: ಹೆಚ್​ಡಿಕೆ ಗರಂ

ಚನ್ನಪಟ್ಟಣದ ಕಲ್ಲು ಮತ್ತು ಮೊಟ್ಟೆ ತೂರಾಟದ ವಿಚಾರವಾಗಿ ಪಕ್ಷದ ರಾಜ್ಯ ಕಚೇರಿ ಜೆ ಪಿ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಸರ್ಕಾರದ ನಿಯಮವನ್ನು ಗಾಳಿಗೆ ತೂರಿ ಶಂಕುಸ್ಥಾಪನೆ ಕಾರ್ಯಕ್ರಮ ಮಾಡಲಾಗಿದೆ. ನಿಯಮ ಮೀರಿದವರನ್ನು ಬಂಧಿಸಬೇಕು ಎಂದು ಹೆಚ್​ಡಿಕೆ ಆಗ್ರಹಿಸಿದ್ದಾರೆ.

h-d-kumaraswamy-reaction-on-channapatna-incident
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
author img

By

Published : Oct 1, 2022, 8:28 PM IST

ಬೆಂಗಳೂರು : ಇವತ್ತಿನ ದಿನ ನನ್ನ ಕ್ಷೇತ್ರ ಚನ್ನಪಟ್ಟಣದಲ್ಲಿ ಸರ್ಕಾರದ ಅನುದಾನ ಕಾರ್ಯಕ್ರಮದ ಶಂಕುಸ್ಥಾಪನೆ ಇತ್ತು. ಆದರೆ, ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿ ರಾಜಕೀಯಕ್ಕೊಸ್ಕರ ಇವತ್ತು ಕಾರ್ಯಕ್ರಮ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಸಿ ಪಿ ಯೋಗೇಶ್ವರ್ ವಿರುದ್ಧ ಕಿಡಿಕಾರಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆ ಪಿ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕ್ಷೇತ್ರದ ಶಾಸಕರ ಉಪಸ್ಥಿತಿಯಲ್ಲಿ ಸರ್ಕಾರದ ಅನುದಾನ ಕಾರ್ಯಕ್ರಮ ಮಾಡಬೇಕು ಎಂದು ಮುಖ್ಯಮಂತ್ರಿಗಳು ಸದನದಲ್ಲೇ ಹೇಳಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಆಯೋಜಿಸುವ ಸರ್ಕಾರ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಕಟ್ಟುನಿಟ್ಟಾಗಿ ಪಾಲಿಸಬೇಕು ತಪ್ಪಿದ್ದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಿಎಂ ಹೇಳಿದ್ದಾರೆ ಎಂದರು.

ಇತ್ತೀಚೆಗೆ ಕೆಐಎಡಿಬಿ ಸಭೆಯಲ್ಲೂ ಉಸ್ತುವಾರಿ ಸಚಿವರಾಗಿ ನಾನೇ ಎಲ್ಲ ಉದ್ಘಾಟನೆಗೆ ಬರುತ್ತೇನೆ ಎಂದು ರಾಮನಗರ ಉಸ್ತುವಾರಿ ಸಚಿವರು ಹೇಳಿದ್ದಾರೆ. ಮೊನ್ನೆ ಹೊರಡಿಸಿದ ಆಹ್ವಾನದಲ್ಲಿ ಮುದ್ರಣ ಆಗಿರುವುದು ನಾನು ಯಾವತ್ತೂ ನೋಡಿಲ್ಲ. ವಿಧಾನಪರಿಷತ್ ಸದಸ್ಯರ ಕೋರಿಕೆ ಮೇರೆಗೆ 50 ಕೋಟಿ ರೂ. ಬಿಡುಗಡೆ ಮಾಡಿದ್ದಾರೆಂದು ಸಿ.ಪಿ. ಯೋಗೇಶ್ವರ್ ಹೆಸರು ಹಾಕಿದ್ದಾರೆ.

ಒಬ್ಬ ಮಾಜಿ ಸಿಎಂ ಕ್ಷೇತ್ರದಲ್ಲೇ ಈ ರೀತಿ ದಬ್ಬಾಳಿಕೆ ಅಂದರೆ ನೀವೇ ಯೋಚನೆ ಮಾಡಿ. ಇದರ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಮಾತಾಡಿದ್ದೇನೆ ಅವರು ನನ್ನ ಗಮನಕ್ಕೆ ಬಂದಿಲ್ಲ ಅಂತಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ಉತ್ತರ ಕೊಡುತ್ತಿಲ್ಲ. ನಾನು ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ ಎಂದು ಹೇಳಿದರು.

ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರ ಕೆಡುವುದರಲ್ಲಿ ಸಿ.ಪಿ.ಯೋಗೇಶ್ವರ್ ಪಾತ್ರ ಏನು?. ಯಾವ ಪಾಪದ ಹಣ ಅನ್ನುವುದನ್ನು ನಾನು ಈಗ ಮಾತನಾಡುವುದಿಲ್ಲ. ಮುಂದಿನ ಆರು ತಿಂಗಳಲ್ಲಿ ವಿಧಾನಸಭೆ ಚುನಾವಣೆ ಇರುವುದರಿಂದ ಹಣ ಮಾಡಲು ಯೋಗೇಶ್ವರ್ ಹೀಗೆಲ್ಲಾ ಮಾಡುತ್ತಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದಾಗ, ನೀರಾವರಿ ಯೋಜನೆ ನೀಡುವಂತೆ ಸಿ.ಪಿ. ಯೋಗೇಶ್ವರ್ ಕೇಳಿದ್ದರು. ಆಗ 1,700 ಕೋಟಿ ರೂ. ಹಣ ಕೊಟ್ಟಿದ್ದೇನೆ ಎಂದರು.

ನನ್ನ ಶಕ್ತಿ ಕುಂದಿಸಲು ಸಾಧ್ಯವಿಲ್ಲ : ಪೊಲೀಸ್ ಬೆಟಾಲಿಯನ್ ಮೂಲಕ ಶಂಕುಸ್ಥಾಪನೆ ಮಾಡಿದ್ದಾರೆ. ಇದರಿಂದ ನನ್ನ ಶಕ್ತಿಯನ್ನು ಕುಂದಿಸಲು ಸಾಧ್ಯವಿಲ್ಲ. ರಾಮನಗರ ಜನತೆಯೊಂದಿಗೆ ನನ್ನ ಒಡನಾಟ ಯಾವ ರೀತಿ ಇದೆ ಅಂತ ಎಲ್ಲರಿಗೂ ಗೊತ್ತು. ವೀಕ್ನೆಸ್ ಅಂದುಕೊಂಡರೆ ಮುಂದಿನ ದಿನಗಳಲ್ಲಿ ನೋಡಬೇಕಾಗುತ್ತದೆ ಎಂದು ಮಾರ್ಮಿಕವಾಗಿ ನುಡಿದರು.

ನಿಯಮ ಗಾಳಿಗೆ ತೂರಿ ಕಾರ್ಯಕ್ರಮ ಮಾಡಿದವರನ್ನು ಬಂಧಿಸಬೇಕಿತ್ತು

ಬಿಎಂಎಸ್ ಟ್ರಸ್ಟ್ ಹಗರಣ ತನಿಖೆಯಾದರೆ ಯಾರ ತಲೆ ಉರುಳುತ್ತದೆ ಎಂಬುದು ಗೊತ್ತಿಲ್ಲ. ತನಿಖೆಯಾದರೆ ಒಬ್ಬೊಬ್ಬರ ಇತಿಹಾಸವೂ ಹೊರಬರುತ್ತದೆ ಎಂದು ಗುಡುಗಿದ ಹೆಚ್ ಡಿ ಕೆ, ಚನ್ನಪಟ್ಟಣದಲ್ಲಿ ಈ ರೀತಿಯ ದೌರ್ಜನ್ಯಕ್ಕೆ ನಾನು ಹೆದರುವುದಿಲ್ಲ. ಶಂಕುಸ್ಥಾಪನೆಗೆ ಜಿಲ್ಲಾ ಉಸ್ತುವಾರಿ ಸಚಿವರು ಯಾಕೆ ಹೋಗಿಲ್ಲ. ವಿಧಾನಪರಿಷತ್​ನ ನಾಲ್ಕು ಚೇಲಾಗಳನ್ನು ಇಟ್ಟುಕೊಂಡು ಶಂಕುಸ್ಥಾಪನೆ ಮಾಡುತ್ತೀರಾ? ನಿಯಮ ಉಲ್ಲಂಘನೆ ಮಾಡಿರುವ ಅವರನ್ನು ಬಂಧಿಸಬೇಕು. ಅದು ಬಿಟ್ಟು ಧರಣಿ ಮಾಡುವವರನ್ನು ಬಂಧಿಸುತ್ತೀರಾ ಎಂದು ಕಿಡಿಕಾರಿದರು.

ಹಕ್ಕುಚ್ಯುತಿ ಮಂಡಿಸುತ್ತೇನೆ : ಪ್ರೀತಿ, ಕಾನೂನಿಗೆ ತಲೆಬಾಗುತ್ತೇನೆ. ನೀವು ಧಮ್ ತಾಖತ್ತು ಹೇಳಿದರೆ ತೋರಿಸುವುದಕ್ಕೆ ನಾವೂ ರೆಡಿ ಇದ್ದೇವೆ. ಹಿಂದಿನ ಮುಖ್ಯಮಂತ್ರಿ ಹೆಚ್.ಡಿ. ದೇವೇಗೌಡರ ಕುಟುಂಬವನ್ನು ಕೆಣಕಿ ಏನಾದರು. ನನ್ನ ಕಾರ್ಯಕರ್ತರನ್ನು ಕೆರಳಿಸೋಕೆ ಹೋಗಬೇಡಿ. ಮಂಡ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ನನ್ನ ಮುಗಿಸಬೇಕು ಅಂತಾ ಕಾಂಗ್ರೆಸ್, ಬಿಜೆಪಿ ಒಂದಾಗಿತ್ತು. ಈಗ ರಾಮನಗರದಲ್ಲಿ ಒಬ್ಬನನ್ನು ತಯಾರಿ ಮಾಡಿಬಿಟ್ಟಿದ್ದಾರೆ. ಈಗ ಚನ್ನಪಟ್ಟಣಕ್ಕೆ ವಿಧಾನ ಸಭೆಯಲ್ಲಿ ಕಟ್ಟಿಹಾಕಲು ಬಿಜೆಪಿ, ಕಾಂಗ್ರೆಸ್ ಒಂದಾಗಿದ್ದಾರೆ ಅನ್ನುವುದರ ಬಗ್ಗೆ ನನಗೆ ಗೊತ್ತಿದೆ.

ಆದರೆ, ನಾನು ಅಲ್ಲಿ ಜನರ ಮನೆಯ ಮಗನಾಗಿದ್ದೇನೆ. ಅವರು ಏನು ಮಾಡುವುದಕ್ಕೆ ಆಗುವುದಿಲ್ಲ. ವಿಧಾನ ಸಭೆಯಲ್ಲಿ ಇದನ್ನ ಹಕ್ಕುಚ್ಯುತಿ ಮಂಡಿಸುತ್ತೇನೆ. ಇದು ಆಹ್ವಾನ ಪತ್ರಿಕೆ ಎಂದು ತೋರಿಸಿದ ಕುಮಾರಸ್ವಾಮಿ ಅವರು, ಈ ರೀತಿ ಆಳ್ವಿಕೆ ನಡೆಸಲೆಂದು ಆರ್​ಎಸ್​ಎಸ್​ನವರು ಇದನ್ನೇ ಕಲಿಸಿಕೊಟ್ಟಿರುವುದಾ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ : ಸಿಪಿವೈ ಕಾರಿಗೆ ಕಲ್ಲು ತೂರಾಟ ಸಿಎಂ ಬೊಮ್ಮಾಯಿ‌, ಸಚಿವ ಅಶ್ವತ್ಥ್ ನಾರಾಯಣ್ ಖಂಡನೆ

ಯೋಗೇಶ್ವರ್ ಉದ್ಧಟತನ : ಇತಿಹಾಸದಲ್ಲಿ ಇದೇ ಮೊದಲು ಸಾವಿರಾರು ಪೊಲೀಸ್ ಬ್ಯಟಾಲಿಯನ್ ಹಾಕಿ ಶಂಕುಸ್ಥಾಪನೆ ಮಾಡಿರುವುದು. ಯೋಗೇಶ್ವರ್ ಎಂಎಲ್​ಸಿ ಆಗಿರುವುದು ಕಲಾವಿದರ ಕೋಟಾದಲ್ಲಿ. ಅಧಿಕಾರಿಗಳ ಉದ್ದಟತನ ಹೆಚ್ಚಾಗಿದ್ದು, ಮಾಜಿ ಸಿಎಂ ಅನ್ನು ಲಘುವಾಗಿ ಪರಿಗಣಿಸಿದ್ದಾರೆ. ಶಾಸಕರ ಅನುಪಸ್ಥಿತಿಯಲ್ಲಿ ನನ್ನ ಗಮನಕ್ಕೂ ತರದೇ ಕಾರ್ಯಕ್ರಮ ಮಾಡಿದ್ದಾರೆ. ಈ ಬಗ್ಗೆ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿದ್ದೇನೆ. ದೂರವಾಣಿ ಮೂಲಕ ಕೂಡ ಹೇಳಿದ್ದೇನೆ ಎಂದರು.

ಒಂದು ಕಡೆ ಕಾರ್ಯಕ್ರಮ ಮುಂದೂಡಿಕೆ ಮಾಡಲಾಗಿದೆ ಎನ್ನುತ್ತಾರೆ. ಇನ್ನೊಬ್ಬ ಇಲ್ಲ ಎಲ್ಲರೂ ಕಾರ್ಯಕ್ರಮ ಸ್ಥಳದಲ್ಲಿ ಇದ್ದಾರೆ ಎಂದು ಹೇಳುತ್ತಾರೆ. ಸರ್ಕಾರ ಅವರದೇ ಇದೆ ಯೋಗೇಶ್ವರ್ ಹೇಳಿರುವ ಗುತ್ತಿಗೆದಾರ ಯಾರು ಅಂತ ಗೊತ್ತಾಗಲಿ. ಇಬ್ಬರು ಗುತ್ತಿಗೆದಾರರು ಹಿಂದೆ ಕಾಂಗ್ರೆಸ್, ಬಿಜೆಪಿ ಅವಧಿಯಲ್ಲಿ ಎಷ್ಟು ಕೆಲಸ ಮಾಡಿದ್ದಾರೆ ಎಂದು ಗೊತ್ತಾಗಲಿ. ನನ್ನ ಪಕ್ಷದಲ್ಲಿ ಗೂಂಡಾಗಳು ಇಲ್ಲ ಕಾರ್ಯಕರ್ತರು ಇರುವುದು. ಅಂತಹ ಸ್ಥಿತಿ ಬಂದಿಲ್ಲ ಎಂದರು.

ಬ್ಲಾಕ್ ಮೇಲ್ ರಾಜಕೀಯ ಮಾಡುತ್ತಿದ್ದಾರೆ ಎಂಬ ಯೋಗೇಶ್ವರ್ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್ ಡಿಕೆ, ಅಯ್ಯೋ ರಾಮ ನಾನು ಯಾಕೆ ಬ್ಲಾಕ್ ಮೇಲ್ ಮಾಡಲಿ, ನಾನು ಇರುವುದು ಬ್ಲಾಕ್ ಅಷ್ಟೇ ನನಗೆ ಅದ್ಯಾವ ಬ್ಲಾಕ್ ಮೇಲ್ ಎನ್ನೊದೇ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ : ಸಿ ಪಿ ಯೋಗೇಶ್ವರ್ ಮೇಲೆ ಮೊಟ್ಟೆ, ಕಲ್ಲು ಎಸೆದ ಜೆಡಿಎಸ್ ಕಾರ್ಯಕರ್ತರು.. ಪೊಲೀಸರಿಂದ ಲಾಠಿಚಾರ್ಜ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.