ETV Bharat / state

ಜನರು ವಿದ್ಯುತ್, ಕ್ಷಾಮ, ಬರದಿಂದ ಬೇಯುತ್ತಿದ್ದರೆ ನೀವು ದಿನಪೂರ್ತಿ ಕ್ರಿಕೆಟ್ ನೋಡುವ ಶೋಕಿದಾರ: ಸಿದ್ದರಾಮಯ್ಯಗೆ ಟಕ್ಕರ್ ಕೊಟ್ಟ ಹೆಚ್​ಡಿಕೆ - ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ

ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ ನಂತರ ಇಂ'ಧನ' ಇಲಾಖೆಯಲ್ಲೂ ನೀವು ನಗದೀಕರಣಕ್ಕೆ ನಾಂದಿ ಹಾಡಿದ್ದೀರಿ. ಖರೀದಿ ಖುಷಿಯಲ್ಲಿ ಪರ್ಸೆಂಟೇಜ್ ಪಟಾಲಂ ಸಂಭ್ರಮಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್​ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

kumaraswamy
ಹೆಚ್​ ಡಿ ಕುಮಾರಸ್ವಾಮಿ
author img

By ETV Bharat Karnataka Team

Published : Oct 22, 2023, 2:36 PM IST

ಬೆಂಗಳೂರು: ವೆಸ್ಟೆಂಡ್​ನಲ್ಲಿ ಆಡಳಿತ ನಡೆಸಿಲ್ಲ ಎನ್ನುವ ಗಿಲೀಟು ಗಿರಾಕಿ, ಆವತ್ತು ಮುಖ್ಯಮಂತ್ರಿ ನಿವಾಸವನ್ನೇಕೆ ತೆರವು ಮಾಡಲಿಲ್ಲ?. ಐದು ವರ್ಷ ಸರ್ಕಾರ ಕೊಟ್ಟ ಸಿದ್ದಪುರುಷ ಇನ್ನೊಬ್ಬರ ಹೆಸರಿನಲ್ಲಿ ಭಂಗಲೆ ಪಡೆದು ಸಾಸಿವೆ ಕಾಳಷ್ಟೂ ಸಂಕೋಚವಿಲ್ಲದೆ ಅದೇ ಜಾಗದಲ್ಲಿ ಹೆಗ್ಗಣವಾಗಿ ಮೈತ್ರಿ ಸರ್ಕಾರಕ್ಕೆ ಕನ್ನ ಕೊರೆದಿದ್ದನ್ನು ಕನ್ನಡಿಗರು ಮರೆತಿಲ್ಲ. ಒಂದು ವೆಸ್ಟೆಂಡ್ ಮತ್ತೊಂದು ಬಿಜೆಪಿ ಬಿ ಟೀಂ ಎಂದು ಹೆಚ್​ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿಗಳು, ನಾವು ವೆಸ್ಟೆಂಡ್ ಹೋಟೆಲ್​ನಲ್ಲಿ ಕೂತು ಸರ್ಕಾರ ನಡೆಸುತ್ತಿಲ್ಲ, ಜನರ ನಡುವೆ ಇದ್ದು ಅವರ ಕಷ್ಟಕ್ಕೆ ಹೆಗಲಾಗಿ ನಿಂತಿದ್ದೇವೆ ಎಂದು ತಮ್ಮ ವಿರುದ್ಧ ಟೀಕೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ಕೊಟ್ಟಿರುವ ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರನ್ನು ಕರ್ನಾಟಕದ ʼನೀರೋʼ ಎಂದು ಕುಟುಕಿದ್ದಾರೆ. ರೋಮ್ ನಗರ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ!, ಜನ ಸಂಕಷ್ಟದಲ್ಲಿದ್ದರೆ ಕರ್ನಾಟಕದ ನೀರೋ ಕ್ರಿಕೆಟ್ ಮ್ಯಾಚ್ ನೋಡುತ್ತಿದ್ದ ಎಂದು ನೇರವಾಗಿ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.

ಡೋಂಗಿ ಸಮಾಜವಾದಿಗೆ ವೆಸ್ಟೆಂಡ್ ಸೋಂಕು ಮತ್ತೆ ತಗುಲಿದೆ. I.N.D.I.A. ಕೂಟದ ಸಭೆಯನ್ನು ಇದೇ ವೆಸ್ಟೆಂಡ್ ಬದಲಿಗೆ, ತಮ್ಮ ಸುತ್ತ ಕೆನೆಪದರ, ಒಳಪದರ, ತೆಳುಪದರದಂತೆ ತಲೆ ಎತ್ತಿರುವ ʼಪರ್ಸೆಂಟೇಜ್ ಪಟಾಲಂʼ ಏಳುಸುತ್ತಿನ ಕೋಟೆಯ ವಠಾರದಲ್ಲಿಯೇ ನಡೆಸಬೇಕಿತ್ತು. ಏಕೆ ನಡೆಸಲಿಲ್ಲ? ಎಂದು ಮುಖ್ಯಮಂತ್ರಿಗಳನ್ನು ಅವರು ನೇರವಾಗಿ ಪ್ರಶ್ನಿಸಿದ್ದಾರೆ.

ಆಧುನಿಕ ಭಾರತದ ಈಸ್ಟ್ ಇಂಡಿಯಾ ಕಂಪನಿ ಕಾಂಗ್ರೆಸ್​ಗೆ ಕರ್ನಾಟಕ ಪೊಗರ್​ ದಸ್ತು ಹುಲ್ಲುಗಾವಲು. ಸಿದ್ದಪುರುಷ ಅಲಿಯಾಸ್ ಶೋಕಿಪುರುಷನೇ ಈ ಹುಲ್ಲುಗಾವಲಿನ ಮೇಟಿ. ವಿದ್ಯುತ್ ಕ್ಷಾಮ ಮತ್ತು ಬರದಲ್ಲಿ ಜನರು ಬೇಯುತ್ತಿದ್ದರೆ ದಿನಪೂರ್ತಿ ಕೂತು ಕ್ರಿಕೆಟ್ ನೋಡುವಷ್ಟು ಶೋಕಿದಾರ!. ಐದು ತಿಂಗಳಿಂದ ವಿದ್ಯುತ್ ಉತ್ಪಾದನೆ ಅಲಕ್ಷಿಸಿದ್ದೇಕೆ?, ಹಾಹಾಕಾರ ಎದ್ದ ಮೇಲೆ ಅದು ಮಾಡಿದ್ದೇವೆ, ಇದು ಮಾಡಿದ್ದೇವೆ ಎಂದರೆ ಲೋಡ್ ಶೆಡ್ಡಿಂಗ್ ಏಕೆ ಬಂತು?. 2013-2018ರಲ್ಲಿ 12,000 ಮೆ.ವ್ಯಾ. ಉತ್ಪಾದಿಸಿದ್ದೇವೆ ಎಂದು ನೀವೇ ಹೇಳಿದ್ದೀರಿ, ಸರಿ. ಈಗ ಮಳೆ ಕಡಿಮೆಯಾಗಿ ಜಲವಿದ್ಯುತ್ ಉತ್ಪಾದನೆ ಕುಸಿದಿದೆ, ನನಗೂ ಗೊತ್ತಿದೆ. ಅದರಲ್ಲಿ 3,000 ಮೆ.ವ್ಯಾ. ಇಲ್ಲ ಎಂದರೂ ಸಾರ್ವಜನಿಕ ಮತ್ತು ಖಾಸಗಿ ವಲಯ ಸೇರಿ ಒಟ್ಟು 29,000 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಆಗಲೇಬೇಕಿತ್ತು, ಆಗಿಲ್ಲವೇಕೆ?. ಏಕಾಎಕಿ ಉತ್ಪಾದನೆ ನಿಲ್ಲಿಸಿದ್ದೇಕೆ? ಜಲವಿದ್ಯುತ್ ಕೈಕೊಡುತ್ತದೆ ಎಂದು ಗೊತ್ತಿದ್ದರೂ ಕಲ್ಲಿದ್ದಲು ಸಂಗ್ರಹ ಇಟ್ಟುಕೊಳ್ಳಲಿಲ್ಲವಲ್ಲ ಏಕೆ? ಎಂದು ಕುಮಾರಸ್ವಾಮಿ ಕೇಳಿದ್ದಾರೆ.

ಇದನ್ನೂ ಓದಿ : ಕಮಿಷನ್​ಗಾಗಿ ರಾಜ್ಯ ಸರ್ಕಾರದಿಂದ ವಿದ್ಯುತ್​ ಕೃತಕ ಅಭಾವ: ಹೆಚ್​​ಡಿಕೆ ಆರೋಪ

ಜಲ ವಿದ್ಯುತ್ ಹೊರತುಪಡಿಸಿ ಇತರೆ ಮೂಲಗಳ ವಿದ್ಯುತ್ ಉತ್ಪಾದನೆಗೂ ಖೋತಾ ಬೀಳಲಿಕ್ಕೆ ಪ್ರಕೃತಿ ಕಾರಣವೋ? ಅಥವಾ ನಿಮ್ಮ ʼಕೈ ಚಳಕʼವೇ ಕಾರಣವೋ? ಸತ್ಯ ಹೇಳಿದರೆ ನನ್ನ ಕಡೆಗೇ ಬೊಟ್ಟು ಮಾಡುತ್ತೀರಿ, ನಿಮ್ಮ ಸಚಿವರನ್ನು ನನ್ನ ಮೇಲೆ ಛೂ ಬಿಡುತ್ತೀರಿ. ಎಷ್ಟು ದಿನ ನೆಪಗಳ ನಾಜೂಕತನ? ಮತ್ತೆ ಮತ್ತೆ ನಾನು ಹೇಳುತ್ತೇನೆ, ವಿದ್ಯುತ್ ಕೃತಕ ಅಭಾವ ಸೃಷ್ಟಿ ನಿಮ್ಮದೇ ಷಡ್ಯಂತ್ರ. ಅದು ಉಲ್ಬಣಿಸಿದಷ್ಟೂ ನಿಮಗೆ ಕಲೆಕ್ಷನ್ ಹೆಚ್ಚು. ಖಾಸಗಿ ಕಂಪನಿಗಳಿಂದ ಖರೀದಿಸಿ ಕೈ ತುಂಬಾ ಕಮಿಷನ್ ಎತ್ತಲು ಹೊರಟಿದ್ದೀರಿ. ಇಲ್ಲ ಎಂದಾದರೆ ವಿದ್ಯುತ್ ಕ್ಷಾಮದ ವಾಸ್ತವತೆ ಬಗ್ಗೆ 'ಶ್ವೇತಪತ್ರ' ಹೊರಡಿಸಿ ಎಂದು ಅವರು ಒತ್ತಾಯ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.