ETV Bharat / state

ಡಿ. ದೇವರಾಜ ಅರಸು ಜನ್ಮ ದಿನ: ಟ್ವೀಟ್ ಮೂಲಕ ಸ್ಮರಿಸಿಕೊಂಡ ಹೆಚ್​​ಡಿಕೆ

ತಳ ಸಮುದಾಯದ ಅಭಿವೃದ್ಧಿಗೆ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿದ  ಡಿ. ದೇವರಾಜ ಅರಸು ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಸ್ಮರಿಸಿಕೊಂಡಿದ್ದಾರೆ.

ಕುಮಾರಸ್ವಾಮಿ ಟ್ವೀಟ್
ಕುಮಾರಸ್ವಾಮಿ ಟ್ವೀಟ್
author img

By

Published : Aug 20, 2020, 11:08 AM IST

ಬೆಂಗಳೂರು : ಕರ್ನಾಟಕ ನಾಮಕರಣ, ಹಾವನೂರು ಕಮಿಷನ್, ಭೂ ಸುಧಾರಣೆ, ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿರ್ಮೂಲನೆ ಹಾಗೂ ಶೋಷಿತ ಸಮುದಾಯಕ್ಕೆ ರಾಜಕೀಯ ಆಸರೆ ಒದಗಿಸಿದ ಮಹಾನ್ ನಾಯಕ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸ್ಮರಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ತಮಗೆ ಸಿಕ್ಕಿದ ರಾಜಕೀಯ ಪರಮಾಧಿಕಾರವನ್ನು ತಳ ಸಮುದಾಯದ ಅಭಿವೃದ್ಧಿಗೆ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿದ ಅರಸು ಅವರ ಕಾರ್ಯ ವೈಖರಿ ಅನುಕರಣೀಯ ಎಂದು ಬಣ್ಣಿಸಿದ್ದಾರೆ.

ಶೋಷಿತ ಸಮುದಾಯಕ್ಕೆ ನ್ಯಾಯ ಒದಗಿಸುವ ಭರದಲ್ಲಿ ಇತರ ಸಮುದಾಯಗಳ ಮೇಲೆ ಸವಾರಿ ಮಾಡದ ರಾಜಕೀಯ ಸೂಕ್ಷ್ಮ ಪ್ರಜ್ಞೆ ಅರಸು ಅವರಲ್ಲಿ ನಾನು ಕಂಡಿದ್ದೇನೆ. ಸಾಮಾಜಿಕ, ಆರ್ಥಿಕ ಸುಧಾರಣೆಗಳ ಹರಿಕಾರ ಅರಸು ಸದಾ ಸ್ಮರಣೀಯರು ಎಂದು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.