ETV Bharat / state

ಶಿಕ್ಷಕರ ದಿನಾಚರಣೆ ಶುಭಾಶಯ ಕೋರಿದ ಹೆಚ್​​ಡಿಡಿ-ಹೆಚ್​​ಡಿಕೆ - Teachers Day

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಶಿಕ್ಷಕರ ದಿನದ ಶುಭಾಶಯ ಕೋರಿದ್ದಾರೆ.

dsd
ಶಿಕ್ಷಕರ ದಿನದ ಶುಭಾಶಯ ಕೋರಿದ ಹೆಚ್ ಡಿಡಿ, ಹೆಚ್ ಡಿಕೆ
author img

By

Published : Sep 5, 2020, 11:03 AM IST

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನಾಡಿನ ಎಲ್ಲಾ ಶಿಕ್ಷಕರಿಗೂ ಶಿಕ್ಷಕರ ದಿನದ ಶುಭಾಶಯ ಕೋರಿದ್ದಾರೆ.

dsd
ಶಿಕ್ಷಕರ ದಿನಾಚರಣೆ ಶುಭಾಶಯ ಕೋರಿದ ಹೆಚ್​ಡಿಡಿ, ಹೆಚ್​ಡಿಕೆ

ಶಿಕ್ಷಕ ವೃತ್ತಿ ಎಂಬುದು ಅತ್ಯಂತ ಕಠಿಣ ಮತ್ತು ಜವಾಬ್ದಾರಿಯುತ ವೃತ್ತಿ. ಎಲ್ಲರ ಬದುಕು ಸಮರ್ಥವಾಗಿ ರೂಪುಗೊಳ್ಳುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು. ನಮ್ಮ ಬದುಕನ್ನು ರೂಪಿಸಿದ ಶಿಕ್ಷಕರಿಗೆ ಧನ್ಯವಾದ, ಕೃತಜ್ಞತೆ ಸಲ್ಲಿಸಲು ಇರುವ ಅತ್ಯಂತ ಮಹತ್ವದ ದಿನವೂ ಹೌದು. ಹೀಗಾಗಿ ಈ ಶುಭ ದಿನದಂದು ನಮಗೆ ಜೀವನವನ್ನು ರೂಪಿಸಿಕೊಳ್ಳಲು ಕಲಿಸಿದ ಎಲ್ಲಾ ಶಿಕ್ಷಕರಿಗೆ ಶಿಕ್ಷಕರ ದಿನದ ಶುಭಾಶಯ ಎಂದಿದ್ದಾರೆ. ತಮ್ಮ ರಾಜಕೀಯ ಗುರುಗಳಾದ ಎ.ಜಿ.ರಾಮಚಂದ್ರ ರಾಯರನ್ನು ಸಹ ಮತ್ತೊಮ್ಮೆ ನೆನಪಿಸಿಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ, ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಿಲ್ಪಿಗಳು. ನಮ್ಮೆಲ್ಲರ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಶಿಕ್ಷಕರನ್ನು ಕೃತಜ್ಞತಾ ಭಾವದೊಂದಿಗೆ ನೆನೆಯೋಣ ಎಂದು ಶಿಕ್ಷಕರ ದಿನದ ಶುಭಾಶಯಗಳನ್ನು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.