ETV Bharat / state

ಸ್ಪೀಕರ್ ವಿರುದ್ಧ ಹಕ್ಕುಚ್ಯುತಿ ಮಂಡನೆ ಕುರಿತು ಸಭೆ ನಡೆಸಲು ತೀರ್ಮಾನ: ಎಚ್.ಕೆ.ಪಾಟೀಲ್ - ಕರ್ನಾಟಕ ವಿಧಾನಸಭೆ

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಹಕ್ಕುಚ್ಯುತಿ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಸಭೆ ನಡೆಸಲಾಗುವುದು ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ್ ಹೇಳಿದ್ದಾರೆ.

sasa
ಎಚ್.ಕೆ. ಪಾಟೀಲ್ ಮಾತು
author img

By

Published : Jun 2, 2020, 3:30 PM IST

Updated : Jun 2, 2020, 10:56 PM IST

ಬೆಂಗಳೂರು: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಹಕ್ಕುಚ್ಯುತಿ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಮೊದಲು ಸ್ಪೀಕರ್ ಜೊತೆ ಸಭೆ ಮಾಡಿ ಚರ್ಚಿಸಿ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಎಚ್.ಕೆ. ಪಾಟೀಲ್ ಸುದ್ದಿಗೋಷ್ಟಿ

ಸ್ಪೀಕರ್ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಬೇಕೋ ಬೇಡವೋ ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚೆ ಆಗಿದೆ. ಅಂತಿಮವಾಗಿ ಸ್ಪೀಕರ್ ಜೊತೆ ಸಮಿತಿಯ ಅಧ್ಯಕ್ಷನಾದ ನಾನು ಸಭೆ ನಡೆಸಿ ನಿರ್ಧರಿಸಲು ತೀರ್ಮಾನಿಸಲಾಗಿದೆ ಎಂದರು. ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರವಾಗಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಈ ಬಗ್ಗೆಯೂ ಇಂದಿನ ಸಭೆಯಲ್ಲಿ ಚರ್ಚೆ ನಡೆದಿದೆ ಎಂದರು. ಸಭೆಯಲ್ಲಿ ಬಿಜೆಪಿ ಶಾಸಕರಾದ ಉಮೇಶ್​ ಕತ್ತಿ, ಮುರುಗೇಶ್ ನಿರಾಣಿ, ರವಿ ಸುಬ್ರಮಣ್ಯ, ಕೆ.ಜಿ. ಬೋಪಯ್ಯ, ನಡಹಳ್ಳಿ, ಪಿ. ರಾಜು, ನಾರಾಯಣಸ್ವಾಮಿ, ಜೆಡಿಎಸ್ ಶಾಸಕರಾದ ಎ.ಟಿ. ರಾಮಸ್ವಾಮಿ, ಹೆಚ್.ಡಿ. ರೇವಣ್ಣ, ಕಾಂಗ್ರೆಸ್ ಶಾಸಕ ರಮೇಶ್​ ಕುಮಾರ್ ಭಾಗವಹಿಸಿದ್ದರು.

Last Updated : Jun 2, 2020, 10:56 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.