ಬೆಂಗಳೂರು : ನಾಳೆ ಆರ್. ಆರ್ ನಗರ ಉಪಚುನಾವಣೆ ಹಿನ್ನೆಲೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ. ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹಾಗೂ ಇತರ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ನಾಳೆಯ ಭದ್ರತೆ ಕುರಿತು ಗೃಹ ಸಚಿವರು ಚರ್ಚೆ ನಡೆಸಲಿದ್ದಾರೆ. ಆರ್.ಆರ್ ನಗರ ವ್ಯಾಪ್ತಿಯಲ್ಲಿ ಈಗಾಗಲೇ ರಾಜಕೀಯ ಪಕ್ಷಗಳಿಂದ ಆರೋಪ ಪ್ರತ್ಯಾರೋಪ ಕೇಳಿ ಬಂದಿತ್ತು, ಅಲ್ಲದೆ ವಿವಿಧ ಪಕ್ಷಗಳಿಂದ ಸಾಕಷ್ಟು ದೂರುಗಳು ದಾಖಲಾಗಿತ್ತು.
ಹೀಗಾಗಿ, ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆ ಬಿಗಿಗೊಳಿಸುವ ಬಗ್ಗೆ ಸಚಿವರು ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.