ಬೆಂಗಳೂರು: ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡರ ನಿಧನದಿಂದ ತೆರವಾದ ಅರ್ಜಿಗಳ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ವಿಧಾನಪರಿಷತ್ ಕಾರ್ಯದರ್ಶಿ ಈ ಸಂಬಂಧ ಆದೇಶ ಹೊರಡಿಸಿದ್ದು, ವಸತಿ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಎಸ್.ವಿ. ಸಂಕನೂರ ಅವರನ್ನು ನೇಮಕ ಮಾಡಿದ್ದಾರೆ.
ಧರ್ಮೇಗೌಡರು ಉಪಸಭಾಪತಿ ಅರ್ಜಿಗಳ ಸಮಿತಿ ಹಾಗೂ ವಸತಿ ಸಮಿತಿಯ ಅಧ್ಯಕ್ಷರಾಗಿದ್ದರು. ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಇದೀಗ ಹೊಸ ನೇಮಕಾತಿಯನ್ನು ಮಾಡಲಾಗಿದೆ.