ETV Bharat / state

ಡಿಕೆಶಿ ಭೇಟಿಯಾದ ಹೆಚ್ ವಿಶ್ವನಾಥ್; ಕಾಂಗ್ರೆಸ್ ಸೇರ್ಪಡೆಗೆ ವೇದಿಕೆ ಸಜ್ಜು?

ಹೆಚ್​ ವಿಶ್ವನಾಥ್ ಅವರಿಂದು​ ಡಿ ಕೆ ಶಿವಕುಮಾರ್ ಅವರನ್ನು​ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

KN_BNG
ಡಿಕೆಶಿ ಭೇಟಿಯಾದ ಹೆಚ್​ ವಿಶ್ವನಾಥ್
author img

By

Published : Dec 9, 2022, 3:52 PM IST

ಬೆಂಗಳೂರು: ಬಿಜೆಪಿಯ ಹಿರಿಯ ಮುಖಂಡ ಹೆಚ್.ವಿಶ್ವನಾಥ್ ಅವರ ಮುಂದಿನ ರಾಜಕೀಯ ನಡೆ ಕುತೂಹಲಕ್ಕೆ ಕಾರಣವಾಗಿದೆ. ಇಂದು ಸದಾಶಿವನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ ಎನ್ನಲಾಗುತ್ತಿದೆ.

ಡಿಕೆಶಿ ಭೇಟಿ ಮಾಡಿದ 'ಹಳ್ಳಿಹಕ್ಕಿ' ಸ್ವಲ್ಪಹೊತ್ತು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಈಗಾಗಲೇ ಬಿಜೆಪಿಯಿಂದ ಮುನಿಸಿಕೊಂಡಿರುವ ಹೆಚ್.ವಿಶ್ವನಾಥ್ ಬಿಜೆಪಿ ನಾಯಕರಿಂದ ಅಂತರ ಕಾಯ್ದುಕೊಂಡಿದ್ದಾರೆ.

ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಮರಳಿ ಕಾಂಗ್ರೆಸ್​ಗೆ ಮರಳಲಿದ್ದಾರೆ ಎಂದು ಹೇಳಲಾಗಿದೆ. ಮೊನ್ನೆ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದರು. ಅದಕ್ಕೂ ಮುನ್ನ ಸಿದ್ದರಾಮಯ್ಯರನ್ನು ಕಂಡು ಮಾತುಕತೆ ನಡೆಸಿದ್ದರು. ಸದ್ಯದಲ್ಲೇ ಸಿದ್ದರಾಮಯ್ಯ, ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸಲು ಡಿಕೆಶಿ ಒದ್ದಾಡುತ್ತಿದ್ದಾರೆ: ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.