ETV Bharat / state

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರುವೆ: ಎಚ್‌.ವಿಶ್ವನಾಥ್ - Bengaluru latest News

ಶಾಸಕ ಸ್ಥಾನದ ಅನರ್ಹತೆ ಮುಂದುವರಿಸಿ ಹೈಕೋರ್ಟ್ ನೀಡಿರುವ ಮಧ್ಯಂತರ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರುವುದಾಗಿ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸುದ್ದಿಗೋಷ್ಠಿ

author img

By

Published : Dec 1, 2020, 12:33 PM IST

ಬೆಂಗಳೂರು: ಎಂಎಲ್​ಸಿಯಾದರೂ ಕೂಡ ಶಾಸಕ ಸ್ಥಾನದ ಅನರ್ಹತೆ ಮುಂದುವರಿಸಿ ಹೈಕೋರ್ಟ್ ನೀಡಿರುವ ಮಧ್ಯಂತರ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 'ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರಿಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲು ಉದ್ದೇಶಿಸಿದ್ದೇನೆ. ಸಚಿವ ಸ್ಥಾನಕ್ಕೆ ನಾನು ಕಾಯುತ್ತಿದ್ದೇನೆ ಎಂದಲ್ಲ. ನಾನು ರಾಜಕಾರಣವನ್ನು ವ್ಯವಹಾರವಾಗಿ ತೆಗೆದುಕೊಂಡಿಲ್ಲ. ಸಾಂಸ್ಕೃತಿಕ ಹೋರಾಟವಾಗಿ ತೆಗೆದುಕೊಂಡವನು. ಸಚಿವನಾಗಿ ನನ್ನ ಕಾರ್ಯವೈಖರಿ ಜನತೆಗೆ ಗೊತ್ತಿದೆ' ಎಂದರು.

'ಕಾನೂನು ಹೋರಾಟಕ್ಕೆ ಸಾಥ್​ ಸಿಗಲಿಲ್ಲ'

'ವಿಧಾನ ಪರಿಷತ್ ಸದಸ್ಯತ್ವಕ್ಕೆ ಜೂನ್​ನಲ್ಲಿ ರಾಜ್ಯ ಕೋರ್ ಕಮಿಟಿ ಕಳುಹಿಸಿದ್ದ ಮೊದಲ ಪಟ್ಟಿಯಲ್ಲಿ ನನ್ನ ಹೆಸರಿತ್ತು. ವಾಪಸ್ ಬಂದಾಗ ನನ್ನ ಹೆಸರು ಕೈ ಬಿಟ್ಟು ಹೋಗಿತ್ತು. ಯಾಕೆ ಅಂತಾ ತಿಳಿಯಲಿಲ್ಲ. ಹಾಗೆ ನೋಡಿದರೆ ಸಂಘ ಪರಿವಾರದಿಂದ ನನಗೆ ಹೆಚ್ಚು ಸಹಕಾರ ಸಿಕ್ಕಿತ್ತು. ಆದರೆ ಈಗ ಕೋರ್ಟ್​ಗೆ ವಿಷಯ ಹೋದಾಗ ನಮಗೆ ಸಿಗಬೇಕಾದ ಸಹಕಾರ ಸಿಗಲಿಲ್ಲ. ಅಡ್ವೊಕೇಟ್ ಜನರಲ್ ಸರಿಯಾಗಿ ಮಾತನಾಡಿಸಲೂ ಅನಾದರ ತೋರಿಸಿದರು. ಯಾಕೆ ಹೀಗಾಯ್ತು ಅಂತಾ ಗೊತ್ತಾಗುತ್ತಿಲ್ಲ' ಎಂದು ಬೇಸರ ವ್ಯಕ್ತಪಡಿಸಿದರು.

'ಯಾರು ನಮ್ಮಿಂದ ಸಹಾಯ ಪಡೆದುಕೊಂಡು ಸರ್ಕಾರ ರಚನೆ ಮಾಡಿ ಎಲ್ಲ ಅನುಭವಿಸುತ್ತಿದ್ದಾರೋ ಅವರು ನಮ್ಮ ಕಷ್ಟ ಕಾಲದಲ್ಲಿ ಯಾಕೆ ನನ್ನ ಸಹಾಯಕ್ಕೆ ಬರಲಿಲ್ಲ‌. ನನ್ನ ಹೆಸರನ್ನು ಯಾಕೆ ತೆಗೆಸಿದರು ಎಂದು ಗೊತ್ತಿಲ್ಲ. ಆದರೂ ನಾನು ಅದನೆಲ್ಲ ಎದುರಿಸಿ ನಿಲ್ಲುತ್ತೇನೆ' ಎಂದರು.

ಸಾರಾಗೆ ತಿರುಗೇಟು:

'ಇನ್ನು ನಾನು ಸಾ.ರಾ.ಮಹೇಶ್ ಬಗ್ಗೆ ಮಾತನಾಡೋದಿಲ್ಲ‌. ಆ ಕೊಚ್ಚೆಗುಂಡಿಗೆ ಕಲ್ಲೆಸೆದು ನನ್ನ ಶುಭ್ರ ವಸ್ತ್ರ ಮಲಿನ ಮಾಡಿಕೊಳ್ಳಲು ನಾನು ತಯಾರಿಲ್ಲ' ಎಂದರು.

ಮಿತ್ರಮಂಡಳಿಯವರು ಈಗಲೂ ನನ್ನ ಜತೆ ಇದ್ದಾರೆ‌. ನಿನ್ನೆಯೂ ರಮೇಶ್ ಜಾರಕಿಹೊಳಿ, ಆರ್.ಅಶೋಕ್, ಎಸ್‌ಟಿ.ಸೋಮಶೇಖರ್ ಸೇರಿದಂತೆ ಬಹುತೇಕ ಎಲ್ಲರೂ ನನಗೆ ಫೋನ್ ಮಾಡಿ ಬೆಂಬಲ ಸೂಚಿಸಿದ್ದಾರೆ. ಇವತ್ತೂ ಕೂಡ ಸಿಎಂ ಜತೆ ಮಾತನಾಡುತ್ತೇನೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.