ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ.
ನಗರದ ಜಗನ್ನಾಥ್ ಭವನದಲ್ಲಿ ಮಾತನಾಡಿದ ಅವರು, ನೀರಾವರಿ ಇಲಾಖೆಯಲ್ಲಿ 20 ಸಾವಿರ ಕೋಟಿ ಟೆಂಡರ್ ಕರೆದಿದ್ದಾರೆ. ಇದಕ್ಕೆ ಆರ್ಥಿಕ ಇಲಾಖೆ ಒಪ್ಪಿಗೆ ಪಡೆದಿಲ್ಲ, ನೀರಾವರಿ ನಿಗಮಗಳ ಒಪ್ಪಿಗೆ ಪಡೆದಿಲ್ಲ. ಇದ್ರಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ನೇರವಾಗಿ ಆರೋಪಿಸಿದ್ದಾರೆ.
ಜಿಂದಾಲ್ ಕಂಪನಿಗೆ ಭೂಮಿ ಪರಭಾರೆಯಲ್ಲೂ ಭ್ರಷ್ಟಾಚಾರ ನಡೆದಿದೆ, ವಿಜಯೇಂದ್ರ ಭ್ರಷ್ಟಾಚಾರದ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬಳಿ ಹೇಳಿದ್ದೇನೆ. ನಾಯಕತ್ವ ಬದಲಾವಣೆ ಆಗಬೇಕಿದೆ, ನಾಯಕತ್ವ ಬದಲಾವಣೆಗೆ ಕಾರಣ ಕೊಟ್ಟಿದ್ದೇನೆ ಎಂದು ಹೆಚ್ ವಿಶ್ವನಾಥ್ ಹೇಳಿದರು.
ಓದಿ: ನಾಯಕತ್ವ ಗೊಂದಲ ಬೀದಿಯಲ್ಲಿ ಬಗೆಹರಿಸುವ ವಿಚಾರ ಅಲ್ಲ: ಸಿ.ಟಿ.ರವಿ