ಬೆಂಗಳೂರು: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ನಡುವೆಯೇ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಸೂಕ್ಷ್ಮತೆ ಅರಿತ ಹಿಂದೂಸ್ಥಾನ್ ಏರೋನಾಟಿಸ್ಕ್ ಲಿಮಿಟಿಡ್, ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಘಾಟೇಜ್ ಕನ್ವೆನ್ಷನ್ ಸೆಂಟರ್ ಅನ್ನು ಕೋವಿಡ್ ಕೇರ್ ಕೇಂದ್ರವಾಗಿ ಮಾರ್ಪಡಿಸಿದೆ.
ಈ ಕೋವಿಡ್ ಕೇಂದ್ರದಲ್ಲಿ ಒಟ್ಟು 160 ಹಾಸಿಗೆಗಳಿದ್ದು, ಮೂಲಭೂತ ಸೌಕರ್ಯಗಳಾದ ಶೌಚಾಲಯ ಸೇರಿದಂತೆ ಇನ್ನಿತರೆ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಕೇವಲ 16 ದಿನಗಳಲ್ಲಿ 160 ಬೆಡ್ಗಳನ್ನು ಒಳಗೊಂಡ ಕೋವಿಡ್ ಕೇರ್ ಸೆಂಟರ್ ಅನ್ನು ಹೆಚ್‌ಎಎಲ್ ರಕ್ಷಣಾ ಸಂಸ್ಥೆಯು ನಗರದಲ್ಲಿ ನಿರ್ಮಾಣ ಮಾಡಿದೆ.
ಹೆಚ್‌ಎಎಲ್ ಪ್ರಧಾನ ವ್ಯವಸ್ಥಾಪಕ ವೆಂಕಟೇಶ್ವರ ರಾವ್ ಮತ್ತು ಬಿಬಿಎಂಪಿಯ ಮಹಾದೇವಪುರ ವಲಯದ ಜಂಟಿ ಆಯುಕ್ತ ಆರ್. ವೆಂಕಟಾಚಲಪತಿ ಅವರು ಸರ್ಕಾರಿ ಹಿರಿಯ ಅಧಿಕಾರಿಗಳು ಮತ್ತು ಹೆಚ್‌ಎಎಲ್ ಅಧಿಕಾರಿಗಳ ಸಮ್ಮುಖದಲ್ಲಿ ಹಸ್ತಾಂತರ ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ಮಹದೇವಪುರ ವಲಯಗಳಲ್ಲಿ ಕೊರೊನಾ ಸೋಂಕಿತರಿಗೆ ಉಪಯೋಗ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.