ETV Bharat / state

ಹುಲಿ ಉಗುರು ವಿವಾದದ ಸಂಬಂಧ ಆಭರಣ ಮಾಲೀಕರಿಗೆ ಕಿರುಕುಳ ಸಲ್ಲದು: ಡಾ. ಟಿ ಎ ಶರವಣ - ಮುಖ್ಯಮಂತ್ರಿ ಸಿದ್ದರಾಮಯ್ಯ

ಆಭರಣ ಅಂಗಡಿ ಮಾಲೀಕರಿಗೆ ನೋಟಿಸ್ ನೀಡದೆ ಅರಣ್ಯಾಧಿಕಾರಿಗಳು ಏಕಾಏಕಿ ದಾಳಿ ಮಾಡುತ್ತಿದ್ದು, ಇದರಿಂದ ಚಿನ್ನಾಭರಣ ಅಂಗಡಿ ಮಾಲೀಕರು, ಅಕ್ಕಸಾಲಿಗರು ಭಯಭೀತರಾಗಿದ್ದಾರೆ ಎಂದು ಟಿ ಎ ಶರವಣ ಹೇಳಿದ್ದಾರೆ.

T A Sharavana Pressmeet
ಟಿ ಎ ಶರವಣ ಸುದ್ದಿಗೋಷ್ಠಿ
author img

By ETV Bharat Karnataka Team

Published : Oct 28, 2023, 8:31 PM IST

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಹುಲಿ ಉಗುರು ಮಾದರಿಯ ಪೆಂಡೆಂಟ್​ ವಿವಾದಕ್ಕೆ ತೆರೆ ಎಳೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಪ್ರವೇಶಿಬೇಕು ಎಂದು ವಿಧಾನ ಪರಿಷತ್ ಸದಸ್ಯ ಮತ್ತು ಕರ್ನಾಟಕ ಜ್ಯುವೆಲ್ಲರಿ ಅಸೋಸಿಯೇಷನ್ ಅಧ್ಯಕ್ಷ ಟಿ ಎ ಶರವಣ ಆಗ್ರಹಿಸಿದ್ದಾರೆ.

ಶನಿವಾರ ಪ್ರೆಸ್​ಕ್ಲಬ್‌ನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಹುಲಿ ಉಗುರು ಮಾದರಿಯ ಪೆಂಡೆಂಟ್ ಹೆಸರಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಆಭರಣ ಮಾಲೀಕರಿಗೆ ಕಿರುಕುಳ ನೀಡುತ್ತಿದ್ದು, ಈ ವಿವಾದಕ್ಕೆ ತೆರೆ ಎಳೆಯಬೇಕು. ಇಲ್ಲವಾದಲ್ಲಿ ಆಭರಣ ವ್ಯಾಪಾರಿಗಳು ಮುಕ್ತವಾಗಿ ವ್ಯಾಪಾರ ಮಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಲಿದೆ. ರಾಜ್ಯವ್ಯಾಪಿ ಚಿನ್ನಾಭರಣ ಅಂಗಡಿಗಳ ಮಾಲೀಕರು ಮತ್ತು ಅಕ್ಕಸಾಲಿಗರು ಭಯಭೀತರಾಗಿದ್ದಾರೆ ಎಂದರು.

ರಾಜ್ಯದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿದ್ದು, ಇಂತಹ ಕಾಲಘಟ್ಟದಲ್ಲಿ ಹುಲಿ ಉಗುರು ವಿಚಾರದಲ್ಲಿ ಗೊಂದಲ ಸೃಷ್ಟಿಸುವುದು ಸರಿಯಲ್ಲ. ಸರ್ಕಾರ ಈಗಾಗಲೇ ಹಲವು ವಿಚಾರಗಳಲ್ಲಿ ವೈಫಲ್ಯ ಕಂಡಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕಾವೇರಿ ವಿಚಾರ ಧ್ವನಿಸುತ್ತಿದೆ. ಜನಪರ ಸಮಸ್ಯೆಗಳನ್ನು ಮರೆಮಾಚಲು ಇದೀಗ ಅರಣ್ಯ ಇಲಾಖೆ ಹುಲಿ ಉಗುರು ಮಾದರಿಯ ಪೆಂಡೆಂಟ್ ವಿಚಾರವನ್ನು ಕೆದಕಿ ಜನರನ್ನು ದಿಕ್ಕು ತಪ್ಪಿಸಲು ಹೊರಟಿದೆ. ಹಿಂದೂ ಧರ್ಮದ ಅರ್ಚಕರನ್ನು, ಸಿನಿಮಾ ತಾರೆಯರನ್ನು, ರಾಜಕಾರಣಿಗಳನ್ನು ಟಾರ್ಗೆಟ್ ಮಾಡಲಾಗಿದೆ. ವನ್ಯಜೀವಿ ಕಾಯ್ದೆಗಳ ಬಗ್ಗೆ ಜನರಿಗೆ ಅರಿವು ಮೂಡಿಸದೇ ದಿಢೀರ್ ದಾಳಿ ನಡೆಸಲಾಗುತ್ತಿದೆ ಎಂದು ದೂರಿದರು.

Karnataka Jewelery Association President TA Saravan
ಕರ್ನಾಟಕ ಜ್ಯುವೆಲ್ಲರಿ ಅಸೋಸಿಯೇಷನ್ ಅಧ್ಯಕ್ಷ ಟಿ ಎ ಶರವಣ

ಅರಣ್ಯ ಇಲಾಖೆಯ ಅಧಿಕಾರಿಗಳ ಹುಲಿ ಉಗುರು ಮಾದರಿಯ ಪೆಂಡೆಂಟ್ ಬಗ್ಗೆ ಆಭರಣ ಮಾಲೀಕರಿಗೆ ನೋಟಿಸ್ ನೀಡದೆ ಏಕಾಏಕಿ ದಾಳಿ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ನೋಟಿಸ್ ನೀಡದೇ ಅರಣ್ಯ ಇಲಾಖೆಯ ಅಧಿಕಾರಿಗಳು ತಪಾಸಣೆ ಮಾಡಬಾರದು. ಪೆಂಡೆಂಟ್ ವಿಚಾರದಲ್ಲಿ ವಜ್ರಾಭರಣ ಅಂಗಡಿಗಳ ಮಾಲೀಕರಿಗೆ ಮಾನಸಿಕ ಕಿರುಕುಳ ನೀಡಿದರೆ, ರಾಜ್ಯವ್ಯಾಪಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಕರೆ ಕೊಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕಾನೂನು ಎಲ್ಲರಿಗೂ ಸಮಾನ ಎಂದು ಹೇಳುತ್ತಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮತ್ತು ಅಧಿಕಾರಿಗಳು ಈ ಬಗ್ಗೆ ಜಾಗೃತಿ ಮೂಡಿಸಬೇಕು. ವನ್ಯ ಜೀವಿಗಳ ಚರ್ಮ, ಕೊಂಬು, ಉಗುರು, ದಂತ ಹೊಂದಿರುವ ವ್ಯಕ್ತಿಗಳು ತಾವಾಗಿಯೇ ಅದನ್ನು ಸರ್ಕಾರಕ್ಕೆ ವಾಪಸ್ ನೀಡಲು ಗಡುವು ನಿಗದಿ ಮಾಡಬೇಕು. ಜನರಿಗೆ ತಿಳುವಳಿಕೆ ನೀಡದೇ ಸಾರ್ವಜನಿಕರ ಮೇಲೆ ದಾಳಿ ಮಾಡಿ ಮೊಕದ್ದಮೆ ಹೂಡಲು ಹೊರಟಿರುವುದು ಸರಿಯಲ್ಲ. ಹುಲಿ ಉಗುರು ಸೇರಿದಂತೆ ಕೆಲ ವನ್ಯಜೀವಿ ಉತ್ಪನ್ನಗಳಿಗೆ ಬಂಗಾರದ ಅಲಂಕಾರ ವಿನ್ಯಾಸ ಮಾಡುವ ಸಂಪ್ರದಾಯವಿದೆ. ಇದನ್ನು ಬಂಗಾರದ ಕವಚದಿಂದಲೂ ಅಲಂಕಾರ ಮಾಡುತ್ತಾರೆ ಎಂಬ ಕಾರಣಕ್ಕಾಗಿ ಚಿನ್ನಾಭರಣ ಮಾರಾಟಗಾರರ ಮೇಲೆ ಕ್ರಮ ಜರುಗಿಸಲು ಹೊರಟಿರುವುದು ಸರಿಯಲ್ಲ ಎಂದರು.

ಜೆಡಿಎಸ್‌ನ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಧರಿಸಿರುವ ಹುಲಿ ಉಗುರಿನ ಪೆಂಡೆಂಟ್ ಅಸಲಿ ಅಲ್ಲ. ಅದು ಪ್ಲಾಸ್ಟಿಕ್ ಆಗಿದೆ. ಆ ಪ್ಲಾಸ್ಟಿಕ್ ಪೆಂಡೆಂಟ್ ನೂರು ರೂಪಾಯಿ ಬೆಲೆ ಬಾಳುತ್ತದೆ. ಇದನ್ನು ನಿಖಿಲ್ ಕುಮಾರಸ್ವಾಮಿ ಅವರಿಗೆ ಮದುವೆ ವೇಳೆ ಅವರ ಸಂಬಂಧಿಕರು ಉಡುಗೊರೆ ನೀಡಿದ್ದಾರೆ. ವಜ್ರ ಮತ್ತು ಬಂಗಾರ ಲೆಪಿತ ಪೆಂಡೆಂಟ್ ಆದಾಗಿತ್ತು. ಅದನ್ನು ನಾನೇ ಖುದ್ದಾಗಿ ಪರಿಶೀಲನೆ ಮಾಡಿದ್ದೇನೆ ಎಂದು ಹೇಳಿದರು.

ಈ ವೇಳೆ ಇಂಡಿಯನ್ ಜ್ಯುವೆಲ್ಲರಿ ಅಸೋಸಿಯೇಷನ್ ಉಪಾಧ್ಯಕ್ಷ ಚೇತನ್ ಕುಮಾರ್ ಮೆಹ್ತಾ, ಬೆಂಗಳೂರು ಜ್ಯುವೆಲ್ಲರಿ ಅಸೋಸಿಯೇಷನ್ ಅಧ್ಯಕ್ಷ ಸುರೇಶ್ ಗನ್ನಾ, ಸುಮೇಶ್ ವಡೇರಾ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

ಇದನ್ನೂ ಓದಿ : ಮಲೆನಾಡಲ್ಲಿ ಹುಲಿ ಉಗುರು, ಚರ್ಮ ಇರುವುದು ಸಾಮಾನ್ಯ, ಇದನ್ನು ಸರ್ಕಾರ ಇಲ್ಲಿಗೆ ಅಂತ್ಯ ಮಾಡಲಿ: ಎಂ ಪಿ ಕುಮಾರಸ್ವಾಮಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.