ETV Bharat / state

ವಿಚಾರಣೆ ನೆಪದಲ್ಲಿ ಸೋನಿಯಾ ಗಾಂಧಿಗೆ ಕಿರುಕುಳ: ಕೇಂದ್ರದ ಕ್ರಮ ಖಂಡಿಸಿ ಜು 21ರಂದು ರಾಜಭವನ ಮುತ್ತಿಗೆ- ಡಿಕೆಶಿ

author img

By

Published : Jul 17, 2022, 3:50 PM IST

National Herald Case.. ಸೋನಿಯಾ ಗಾಂಧಿಯವರಿಗೆ ವಿಚಾರಣೆ ನೆಪದಲ್ಲಿ ಕಿರುಕುಳ- ಡಿಕೆಶಿ ಆರೋಪ- ಜು.21ರಂದು ರಾಜಭವನಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ ಡಿಕೆಶಿ

DK Shivakumar spoke in Bangalore
ಬೆಂಗಳೂರಿನಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್​

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದ ಹೆಸರಿನಲ್ಲಿ ಕೇಂದ್ರ ಸರ್ಕಾರವು ಸಂವಿಧಾನಿಕ ಸಂಸ್ಥೆ ಜಾರಿ ನಿರ್ದೇಶನಾಲಯವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ವಿಚಾರಣೆ ನೆಪದಲ್ಲಿ ಕಿರುಕುಳ ನೀಡಲು ಮುಂದಾಗಿದೆ. ಇದನ್ನು ಖಂಡಿಸಿ ಬೆಂಗಳೂರಿನಲ್ಲಿ ಜುಲೈ 21 ರಂದು 'ರಾಜಭವನ ಮುತ್ತಿಗೆ' ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ನಾಯಕರ ಜೊತೆ ತುರ್ತು ಸಭೆ: ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ ಅವರು ಶನಿವಾರ ಸಂಜೆ ಪಕ್ಷದ ಶಾಸಕರು, ಮಾಜಿ ಶಾಸಕರು, ಸಂಸದರು, ಪದಾಧಿಕಾರಿಗಳು ಹಾಗೂ ಇತರ ಮುಖಂಡರು ಸೇರಿದಂತೆ 600ಕ್ಕೂ ಹೆಚ್ಚು ನಾಯಕರ ಜೊತೆ ತುರ್ತು ಸಭೆ ನಡೆಸಿದರು. ಈ ಸಭೆಯಲ್ಲಿ ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ನಾಯಕರ ಮೇಲೆ ನಡೆಸುತ್ತಿರುವ ದೌರ್ಜನ್ಯ ಕುರಿತು ಚರ್ಚಿಸಲಾಯಿತು ಎಂದು ವಿವರಿಸಿದರು.

ವಿಚಾರಣೆ ಹೆಸರಲ್ಲಿ ಕಿರುಕುಳ: ಇದೇ 21ರಿಂದ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಆರಂಭವಾಗಲಿದೆ. ಈ ಸಮಯದಲ್ಲಿ ಸೋನಿಯಾ ಗಾಂಧಿಯವರಿಗೆ ವಿಚಾರಣೆ ನೆಪದಲ್ಲಿ ಕಿರುಕುಳ ನೀಡುವ ಪ್ರಯತ್ನ ನಡೆಯುತ್ತಿದೆ. ಕಳೆದ ತಿಂಗಳು ಐದು ದಿನ 50 ಗಂಟೆಗಳ ಕಾಲ ರಾಹುಲ್ ಗಾಂಧಿ ಅವರಿಗೆ ವಿಚಾರಣೆ ಹೆಸರಲ್ಲಿ ಕಿರುಕುಳ ನೀಡಲಾಗಿತ್ತು. ಅಧಿಕಾರಿಗಳು ಸುಧೀರ್ಘ ತನಿಖೆ ನಡೆಸಿದರೂ ರಾಹುಲ್ ಗಾಂಧಿಯವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳನ್ನು ಒದಗಿಸಲು ಸಾಧ್ಯವಾಗಲಿಲ್ಲ. ನಮ್ಮ ಪಕ್ಷ ಹಾಗೂ ನಾಯಕರ ಘನತೆಗೆ ಕಪ್ಪು ಚುಕ್ಕೆ ಇಡುವ ಪ್ರಯತ್ನ ನಡೆಯುತ್ತಿದೆ ಎಂದು ಡಿಕೆಶಿ ಆರೋಪಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಈ ಹಿನ್ನೆಲೆ ರಾಷ್ಟ್ರದೆಲ್ಲೆಡೆ ಪಕ್ಷದ ನಾಯಕರು ಜುಲೈ 21 ರಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಎಲ್ಲಾ ಶಾಸಕರು, ನಾಯಕರು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಈ ಸಂದರ್ಭದಲ್ಲಿ ಪೊಲೀಸರು ನಮ್ಮನ್ನು ಬಂಧಿಸಿದರೂ ಪರವಾಗಿಲ್ಲ. ಎಲ್ಲರೂ ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದರು.

ರಾಜ್ಯಭವನಕ್ಕೆ ಮುತ್ತಿಗೆ: ನಾವು ಜನರ ಪರ ಮೇಕೆದಾಟು ಹಾಗೂ ಬೆಲೆ ಏರಿಕೆ ಸೇರಿದಂತೆ ಹಲವು ವಿಚಾರವಾಗಿ ಹೋರಾಟ ಮಾಡಿದಾಗ ಬಿಜೆಪಿ ಸರ್ಕಾರ ನಮ್ಮ ಮೇಲೆ ಪ್ರಕರಣ ದಾಖಲಿಸಿದೆ. ಬಂಧನ, ಕೇಸಿಗೆ ಹೆದರದೆ ಪಕ್ಷಕ್ಕಾಗಿ ಎಲ್ಲರೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು. ಜುಲೈ 21ರಂದು ಎಲ್ಲಾ ನಾಯಕರು ಫ್ರೀಡಂ ಪಾರ್ಕ್ ನಲ್ಲಿ ಸೇರಿ, ಅಲ್ಲಿಂದ ರಾಜಭವನ ಚಲೋ ಪ್ರತಿಭಟನೆ ಮೂಲಕ ರಾಜಭವನಕ್ಕೆ ಮುತ್ತಿಗೆ ಹಾಕಬೇಕು. ಜುಲೈ 22 ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಇದೇ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಕೇಂದ್ರದ ನಮ್ಮ ನಾಯಕರು, ಪದಾಧಿಕಾರಿಗಳು ತಮ್ಮ, ತಮ್ಮ ಕ್ಷೇತ್ರಗಳಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾರೆ. 30 ಜಿಲ್ಲೆಗಳಿಗೆ ಪಕ್ಷದ ವತಿಯಿಂದ ವೀಕ್ಷಕರನ್ನು ಕಳುಹಿಸಿಕೊಡಲಾಗುವುದು. ನಾನು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಸೇರಿದಂತೆ ಹಿರಿಯ ನಾಯಕರು, ಕಾರ್ಯಾಧ್ಯಕ್ಷರು ಒಂದೊಂದು ಜಿಲ್ಲೆಗೆ ಹೋಗಿ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇವೆ ಎಂದು ಮಾಹಿತಿ ನೀಡಿದರು.

75 ಕಿ.ಮೀ ಪಾದಯಾತ್ರೆ: ನಾವೆಲ್ಲರೂ ಪ್ರತಿಭಟನೆ ಮಾಡಿ ಸೋನಿಯಾ ಗಾಂಧಿಯವರಿಗೆ ಧೈರ್ಯ ತುಂಬಬೇಕು. ಸುಳ್ಳು ಪ್ರಕರಣಗಳ ಮೂಲಕ ಸರ್ಕಾರ ನಮ್ಮನ್ನು ಬೆದರಿಸುವ ಪ್ರಯತ್ನ ನಡೆಯುತ್ತಿದ್ದು, ಅದಕ್ಕೆ ನಾವು ಜಗ್ಗುವುದಿಲ್ಲ ಎಂಬ ಸಂದೇಶ ರವಾನಿಸಬೇಕು. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ಈ ದೇಶಕ್ಕೆ ರಾಷ್ಟ್ರಧ್ವಜ, ರಾಷ್ಟ್ರಗೀತೆ, ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆ ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ಹೀಗಾಗಿ 75 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಆಗಸ್ಟ್ 1 ರಿಂದ 10 ರವರೆಗೂ ಎಲ್ಲಾ ಜಿಲ್ಲೆಗಳಲ್ಲಿ 75 ಕಿ.ಮೀ ಪಾದಯಾತ್ರೆ ಮಾಡಲಾಗುವುದು.

ಸ್ವಾತಂತ್ರ್ಯ ನಡಿಗೆ: ಯಾವ ಜಿಲ್ಲೆಯಲ್ಲಿ ಎಷ್ಟು ದಿನ ಪಾದಯಾತ್ರೆ ಮಾಡಬೇಕು ಎಂಬ ವಿಚಾರವಾಗಿ ಆಯಾ ಜಿಲ್ಲೆಗಳಿಗೆ ತೀರ್ಮಾನ ಮಾಡುವ ಅಧಿಕಾರ ನೀಡಲಾಗಿದೆ. ಆಗಸ್ಟ್ 15 ರಂದು ಬೆಂಗಳೂರಿನಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನ ರಾಷ್ಟ್ರಧ್ವಜ ಹಿಡಿದು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿ ಮೈದಾನದವರೆಗೆ 'ಸ್ವಾತಂತ್ರ್ಯ ನಡಿಗೆ' ಮಾಡಲಾಗುವುದು. ಇದು ಪಕ್ಷಾತೀತ ಕಾರ್ಯಕ್ರಮವಾಗಿದ್ದು, ಎಲ್ಲಾ ಸಂಘ-ಸಂಸ್ಥೆಗಳು ಇದರಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿದೆ. ಇದರಲ್ಲಿ ಭಾಗವಹಿಸಲು ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.

ರಾಷ್ಟ್ರಧ್ವಜ ಹಿಡಿದು ಹೆಜ್ಜೆ: ಈ ಕಾರ್ಯಕ್ರಮದಲ್ಲಿ ಯಾವುದೇ ಭಾಷಣ ಇರುವುದಿಲ್ಲ, ಎಲ್ಲರೂ ರಾಷ್ಟ್ರಧ್ವಜ ಹಿಡಿದು ಹೆಜ್ಜೆ ಹಾಕಲಾಗುವುದು. ರಾಷ್ಟ್ರಕ್ಕೆ ಗೌರವ ಸಲ್ಲಿಸುವ ಸಾಂಸ್ಕೃತಿಕ ಕಾರ್ಯಕ್ರಮ ಇದೇ. ರಾಷ್ಟ್ರಗೀತೆ ಹಾಡುವ ಮೂಲಕ ಕಾರ್ಯಕ್ರಮ ಅಂತ್ಯವಾಗಲಿದೆ. ಈ ಕಾರ್ಯಕ್ರಮಕ್ಕೆ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಿಂದ 300 ರಿಂದ 500 ಜನರು ಭಾಗವಹಿಸಬೇಕು. ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳ ಕ್ಷೇತ್ರಗಳಿಂದ ಕನಿಷ್ಠ 3-4 ಸಾವಿರ ಜನ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಎಲ್ಲಾ ಸಂಘ ಸಂಸ್ಥೆಗಳು, ಸಾಹಿತಿಗಳು, ಕಲಾವಿದರು, ಉದ್ಯಮಿಗಳು, ಶಿಕ್ಷಣ ಸಂಸ್ಥೆಗಳು, ಕಾರ್ಮಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಲಾಗುವುದು.

10 ಪ್ರಮುಖ ಸ್ಥಳಗಳಿಗೆ ಭೇಟಿ: ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಈ ಕಾರ್ಯಕ್ರಮ ನಡೆಸಲು ಅನುಮತಿ ನೀಡುವಂತೆ ಮುಖ್ಯಮಂತ್ರಿಗಳನ್ನು ಖುದ್ದಾಗಿ ಭೇಟಿ ಮಾಡಿ ಅನುಮತಿ ಕೋರಲಾಗುವುದು. ಬಸವನಗುಡಿ ಮೈದಾನದಲ್ಲಿ ಅನುಮತಿ ನೀಡಲಾಗದಿದ್ದರೆ ಕಂಠೀರವ ಕ್ರೀಡಾಂಗಣದಲ್ಲಿ ನಮ್ಮ ಕಾರ್ಯಕ್ರಮಕ್ಕೆ ಅನುಮತಿ ನೀಡುವಂತೆ ಮನವಿ ಮಾಡಲಾಗುವುದು. ಇದು ರಾಜಕೀಯ ಕಾರ್ಯಕ್ರಮವಲ್ಲ ದೇಶದ ಕಾರ್ಯಕ್ರಮ. ಕಾಂಗ್ರೆಸ್ ಪಕ್ಷ ಈ ಕಾರ್ಯಕ್ರಮದ ಮುಂದಾಳತ್ವ ವಹಿಸಿದೆ. ಸ್ವಾತಂತ್ರ ಹೋರಾಟದಲ್ಲಿ ಮಹತ್ವದ ಪಾತ್ರ ವಹಿಸಿರುವ ರಾಜ್ಯದ 10 ಪ್ರಮುಖ ಸ್ಥಳಗಳಿಗೆ ನಮ್ಮ ನಾಯಕರುಗಳು ಭೇಟಿ ನೀಡಿ ಗೌರವ ಸಲ್ಲಿಸಲಿದ್ದಾರೆ ಎಂದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ನೀಡಿರುವ ಅಂಕಿ ಅಂಶಗಳು ಪ್ರಕರಣದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಎಂಬ ಬಿಜೆಪಿ ಆರೋಪಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ, 'ಈ ಪ್ರಕರಣದಲ್ಲಿ ಯಾವುದೇ ಹುರಳಿಲ್ಲ ಎಂದು ಬಿಜೆಪಿಯವರಿಗೆ ತಿಳಿದಿದೆ. ಸ್ವತಃ ಅರುಣ್ ಜೇಟ್ಲಿ ಅವರೇ ಸಂಸತ್ತಿನಲ್ಲಿ ಈ ಪ್ರಕರಣದಲ್ಲಿ ಯಾವುದೇ ಅಕ್ರಮವಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಶಿಶು ಮರಣ ಪ್ರಮಾಣ ಒಂದಂಕಿಗೆ ಇಳಿಸುವುದು ನಮ್ಮ ಗುರಿ: ಬಸವರಾಜ ಬೊಮ್ಮಾಯಿ

ಈ ಪ್ರಕರಣ ಚುನಾವಣಾ ಪಿತೂರಿಯೇ ಎಂಬ ಪ್ರಶ್ನೆಗೆ, ' ತ್ಯಾಗಕ್ಕೆ ಮತ್ತೊಂದು ಹೆಸರೇ ಶ್ರೀಮತಿ ಸೋನಿಯಾ ಗಾಂಧಿ. ಪಕ್ಷ ವಿಭಜನೆಯಾಗುತ್ತಿರುವ ಸಂದರ್ಭದಲ್ಲಿ ನಾವೆಲ್ಲರೂ ಹೋಗಿ ಪಕ್ಷ ಉಳಿಸುವಂತೆ ಅವರಲ್ಲಿ ಮನವಿ ಮಾಡಿಕೊಂಡೆವು. ಆಗ ಅವರು ಪಕ್ಷದ ನೇತೃತ್ವ ವಹಿಸಿಕೊಂಡು ಹತ್ತು ವರ್ಷಗಳ ಕಾಲ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದರು. ದೇಶದಲ್ಲಿ ಜನಪರವಾದ ಕಾನೂನು ತಿದ್ದುಪಡಿ ಆಗಿರುವುದು ಕೇವಲ ಕಾಂಗ್ರೆಸ್ ಅವಧಿಯಲ್ಲಿ ಮಾತ್ರ' ಎಂದು ಪ್ರತಿಕ್ರಿಯಿಸಿದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.