ಬೆಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಿದೆ. ಮೂರು ದಿನಗಳ ಕಾಲ ಪೂರ್ವಮುಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.
ನಿನ್ನೆ ರಾತ್ರಿ ಅಲ್ಲಲ್ಲಿ ಕೊಂಚ ಮಳೆಯಾಗಿತ್ತು. ಇಂದು ಯಶವಂತಪುರ, ಮಲ್ಲೇಶ್ವರಂ, ಮೆಜೆಸ್ಟಿಕ್, ಚಿಕ್ಕಪೇಟೆ, ಎಂಜಿ ರಸ್ತೆ, ಸದಾಶಿವನಗರ ಸೇರಿದಂತೆ ಹಲವು ಕಡೆ ಭಾರಿ ಮಳೆಯಾಗಿದೆ.
ಇನ್ನೂ ಎರಡು ದಿನ ಇದೇ ರೀತಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರ ಜೊತೆಗೆ ಗಾಳಿ ಸಹಿತ ಮಳೆಯಾಗುತ್ತಿರುವುದರಿಂದ ಅಲ್ಲಲ್ಲಿ ಒಣಗಿದ ಮರಗಳು ಬೀಳುವ ಸಾಧ್ಯತೆ ಇದೆ. ಈಗಾಗಲೇ ರಸ್ತೆಗಳು ಬ್ಲಾಕ್ ಆಗಿವೆ. ಕೊರೊನಾ ಹೋರಾಟದ ನಡುವೆ ಬಿಬಿಎಂಪಿ ಮಳೆ ಬಗ್ಗೆ ಮುನ್ನೆಚ್ಚರಿಕೆ ಹಾಗೂ ರಸ್ತೆ ಮೇಲಿನ ನೀರು ತೆರವಿಗೂ ಮುಂದಾಗಬೇಕಿದೆ.