ETV Bharat / state

ಮುರುಘಾ ಮಠಕ್ಕೆ ಸರ್ಕಾರ ನೀಡಿರುವ ಅನುದಾನದ ಮಾಹಿತಿ ಕೊಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ - ಮುರುಘಾ ಶ್ರೀಗಳ ಪ್ರಕಣ

ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್‌.ವಸ್ತ್ರದ ಅವರನ್ನು ಮುರುಘಾ ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಮಠದ ವಿದ್ಯಾಪೀಠದ ಅಧ್ಯಕ್ಷ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸೋಮವಾರ ನಡೆಯಿತು.

high court
ಹೈಕೋರ್ಟ್
author img

By

Published : Jan 30, 2023, 9:38 PM IST

ಬೆಂಗಳೂರು: ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠ ನಿರ್ಮಿಸಿರುವ ಬಸವೇಶ್ವರ ಪ್ರತಿಮೆ, ಅಲ್ಲಮಪ್ರಭು ಸಂಶೋಧನಾ ಕೇಂದ್ರಕ್ಕೆ ರಾಜ್ಯ ಸರ್ಕಾರ ನೀಡಿರುವ ಅನುದಾನದ ಕುರಿತು ಸಂಪೂರ್ಣ ಮಾಹಿತಿ ಒದಗಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್‌.ವಸ್ತ್ರದ ಅವರನ್ನು ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಮಠದ ವಿದ್ಯಾಪೀಠದ ಅಧ್ಯಕ್ಷ, ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು ಸಲ್ಲಿಸಿರುವ ಅರ್ಜಿಯ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ರಾಜ್ಯ ಅಡ್ವೊಕೇಟ್‌ ಜನರಲ್ ಪ್ರಭುಲಿಂಗ ಕೆ.ನಾವದಗಿ ವಾದ ಮಂಡಿಸಿ, ಮುರುಘಾ ಮಠಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಆದರೆ, ದುರದೃಷ್ಟವಶಾತ್‌ ಈಗಿನ ಪೀಠಾಧಿಪತಿ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಮಠಕ್ಕೆ ಸೇರಿದ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಸ್ಥಿರ ಮತ್ತು ಚರಾಸ್ತಿ ಹಾಗೂ ನೂರಾರು ವಿದ್ಯಾಸಂಸ್ಥೆಗಳ ದೈನಂದಿನ ಆಡಳಿತಕ್ಕೆ ವ್ಯತ್ಯಯ ಉಂಟಾಗಬಾರದು ಎಂಬ ಕಾರಣಕ್ಕೆ ಆಡಳಿತಾಧಿಕಾರಿ ನೇಮಿಸಲಾಗಿದೆ ಎಂದರು ವಿವರಿಸಿದರು.

ಅಲ್ಲದೆ, ಮಠದ ವತಿಯಿಂದ ನಿರ್ಮಿಸಲಾಗುತ್ತಿರುವ ಬಸವ ಪ್ರತಿಮೆ ಹಾಗೂ ಅಲ್ಲಮಪ್ರಭು ಸಂಶೋಧನಾ ಕೇಂದ್ರಕ್ಕೆ ಸರ್ಕಾರವು ಕಾಲಕಾಲಕ್ಕೆ ಕೋಟ್ಯಂತರ ರೂಪಾಯಿಗಳ ಅನುದಾನ ನೀಡಿದೆ. 2022ರ ಸೆಪ್ಟೆಂಬರ್ 15ರಂದು ಸರ್ಕಾರ 10 ಕೋಟಿ ರೂ.ಗಳನ್ನು ನೀಡಿದೆ ಎಂದು ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಎಷ್ಟು ಅನುದಾನ ನೀಡಿದೆ. ಅದಕ್ಕೆ ಯಾವುದಾದರೂ ಷರತ್ತು ವಿಧಿಸಲಾಗಿದಿಯೇ ಎಂಬುದನ್ನು ತಿಳಿಸಲು ಸೂಚನೆ ನೀಡಿತು. ವಾದ ಮುಂದುವರೆಸಿದ ನಾವದಗಿ, ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡುವ ನಿಟ್ಟಿನಲ್ಲಿ ಸರ್ಕಾರ ನೀಡಿರುವ ಆರ್ಥಿಕ ನೆರವಿನ ಅಂಶಗಳೂ ಅಡಗಿವೆ. ಆಡಳಿತಾಧಿಕಾರಿ ನೇಮಕಕ್ಕೂ ಮುನ್ನ ಮುಖ್ಯಮಂತ್ರಿಗಳು ನೂರು ಬಾರಿ ಯೋಚಿಸಿ ಈ ನಿರ್ಧಾರ ಕೈಗೊಂಡಿದ್ದಾರೆ. ಇದರಲ್ಲಿ ಮಠದ ಆಸ್ತಿ ಸಂರಕ್ಷಣೆ ಮತ್ತು ಭಕ್ತರ ಹಿತಾಸಕ್ತಿ ಕಾಪಾಡುವ ಉದ್ದೇಶ ಅಡಗಿದೆ ಎಂದು ವಿವರಿಸಿದರು.

ಪ್ರಕರಣದ ಹಿನ್ನೆಲೆ ಏನು? : ರಾಜ್ಯ ಸರ್ಕಾರ ಪಿ.ಎಸ್.ವಸ್ತ್ರದ ಅವರನ್ನು 2022ರ ಡಿಸೆಂಬರ್ 13ರಂದು ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿತ್ತು. ಅವರು 2022ರ ಡಿಸೆಂಬರ್ 15ರಂದು ಅಧಿಕಾರ ಸ್ವೀಕರಿಸಿದ್ದರು. ಶರಣರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ (ಪೋಕ್ಸೊ) ಮತ್ತು ಎಸ್ಸಿ–ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಆರೋಪ ಹೊತ್ತು 2022ರ ಸೆಪ್ಟೆಂಬರ್‌ 1ರಿಂದ ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಮತ್ತೊಂದು ಅರ್ಜಿ ಸಲ್ಲಿಕೆ: ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸಂತ್ರಸ್ತೆ ಪ್ರಚೋದನೆ ನೀಡಿದ ಆರೋಪ ಸಂಬಂಧ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಮತ್ತು ಅವರ ಪತ್ನಿ ಸೌಭಾಗ್ಯ ವಿರುದ್ಧ ದಾಖಲಿಸಿರುವ ದೂರಿನ ತಖಾಧಿಕಾರಿಯನ್ನು ಬದಲಿಸಲು ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಕೆಯಾಗಿದೆ.

ಮಠದ ಉಸ್ತುವಾರಿ ಸ್ವಾಮೀಜಿ ಬಸವಪ್ರಭು ಈ ಅರ್ಜಿ ಸಲ್ಲಿಸಿದ್ದು, ಸೋಮವಾರ ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠವು ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಚಿತ್ರದುರ್ಗ ಗ್ರಾಮಾಂತರ ಠಾಣಾ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಫೆ.10ಕ್ಕೆ ಮುಂದೂಡಿದೆ.

ಇದನ್ನೂ ಓದಿ: ಅವಮಾನಿಸುವ ಉದ್ದೇಶವಿಲ್ಲದೆ ಜಾತಿ ಹೆಸರಿನಲ್ಲಿ ನಿಂದಿಸಿದಲ್ಲಿ ಎಸ್​ಸಿ, ಎಸ್​ಟಿ ಕಾಯ್ದೆಯಡಿ ಅಪರಾಧವಾಗುವುದಿಲ್ಲ: ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.