ETV Bharat / state

ಪುರಸಭೆ ಅಧ್ಯಕ್ಷ - ಉಪಾಧ್ಯಕ್ಷ ಮೀಸಲು ವಿವಾದ: ಚುನಾವಣೆಗೆ ನೀಡಿದ್ದ ತಡೆಯಾಜ್ಞೆ ತೆರವು ಮಾಡಿದ ಹೈಕೋರ್ಟ್ - High Court latest news

ಒಮ್ಮೆ ಚುನಾವಣಾ ಪ್ರಕ್ರಿಯೆ ಆರಂಭವಾದ ನಂತರ ತಡೆಯಾಜ್ಞೆ ನೀಡುವುದು ಸರಿಯಲ್ಲ. ಮೀಸಲಾತಿ ಅಧಿಸೂಚನೆಗೆ ತಡೆ ನೀಡಿರುವುದರಿಂದ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ವಿಳಂಬವಾಗಲಿದೆ. ಆದ್ದರಿಂದ, ತಡೆಯಾಜ್ಞೆ ತೆರವುಗೊಳಿಸಬೇಕೆಂದು ಪೀಠಕ್ಕೆ ಮನವಿ ಮಾಡಲಾಯಿತು.

HC cleared the injunction granted to the municipal president-vice president reserve election
ಹೈಕೋರ್ಟ್
author img

By

Published : Oct 22, 2020, 7:57 PM IST

ಬೆಂಗಳೂರು: ರಾಜ್ಯದ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲು ಅಧಿಸೂಚನೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಿರುವ ಹೈಕೋರ್ಟ್, ನವೆಂಬರ್ 10ರೊಳಗೆ ಚುನಾವಣೆ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪುರಸಭೆ, ದಾವಣಗೆರೆ ಜಿಲ್ಲೆಯ ಚನ್ನಗಿರಿ ಪುರಸಭೆ, ಕೊಡಗು ಜಿಲ್ಲೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ - ಉಪಾಧ್ಯಕ್ಷ ಮೀಸಲು ಪ್ರಶ್ನಿಸಿ ಸಲ್ಲಿಸಿರುವ ತಕರಾರು ಅರ್ಜಿಗಳನ್ನು ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಸರ್ಕಾರದ ಪರ ಅಡ್ವೊಕೇಟ್ ಜನರಲ್ ವಾದ ಮಂಡಿಸಿ, ಮೀಸಲಾತಿ ನಿಗದಿಪಡಿಸುವಾಗ ನಿಯಮಗಳನ್ನು ಪಾಲನೆ ಮಾಡಲಾಗಿದೆ. ಒಮ್ಮೆ ಚುನಾವಣಾ ಪ್ರಕ್ರಿಯೆ ಆರಂಭವಾದ ನಂತರ ತಡೆಯಾಜ್ಞೆ ನೀಡುವುದು ಸರಿಯಲ್ಲ. ಮೀಸಲಾತಿ ಅಧಿಸೂಚನೆಗೆ ತಡೆ ನೀಡಿರುವುದರಿಂದ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ವಿಳಂಬವಾಗಲಿದೆ. ಆದ್ದರಿಂದ, ತಡೆಯಾಜ್ಞೆ ತೆರವುಗೊಳಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.

ಸರ್ಕಾರದ ಮನವಿ ಪರಿಗಣಿಸಿದ ಹೈಕೋರ್ಟ್, ಅಧಿಸೂಚನೆಗೆ ತಡೆ ನೀಡಿ ಅಕ್ಟೋಬರ್ 19ರಂದು ನೀಡಿದ್ದ ಮಧ್ಯಂತರ ಆದೇಶ ಹಿಂಪಡೆಯಿತು. ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಅಧಿಸೂಚನೆಗೆ ಹೈಕೋರ್ಟ್ ಏಕಸದಸ್ಯ ಪೀಠ ಅಕ್ಟೋಬರ್ 15ರಂದು ನೀಡಿದ್ದ ತಡೆಯಾಜ್ಞೆಯನ್ನು ಬುಧವಾರವಷ್ಟೇ ವಿಭಾಗೀಯ ಪೀಠ ತೆರವುಗೊಳಿಸಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.