ETV Bharat / state

ಯುಜಿಸಿ ನಿಗದಿಪಡಿಸಿದ ಅರ್ಹತೆಯಿದ್ದವರನ್ನು ಮಾತ್ರ ಅತಿಥಿ ಉಪನ್ಯಾಸಕರನ್ನಾಗಿ ನೇಮಿಸಿ : ಹೈಕೋರ್ಟ್ ನಿರ್ದೇಶನ

ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಡ್ಡಾಯ- ಯುಜಿಸಿ ನಿಯಮದಡಿ ನೇಮಕ ಮಾಡಿ- ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ.

hc-direction-to-govt
ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
author img

By

Published : Jan 31, 2023, 9:41 PM IST

ಬೆಂಗಳೂರು: ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡುವ ಸಂದರ್ಭದಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ) ನಿಗದಿ ಪಡಿಸಿರುವ ಕನಿಷ್ಠ ಶೈಕ್ಷಣಿಕ ಅರ್ಹತೆಯಿದ್ದವರನ್ನು ಮಾತ್ರ ನೇಮಕ ಮಾಡಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೆ.ವಿ. ರಂಜಿತ್ ನಾಯಕ್ ಸೇರಿದಂತೆ ಮತ್ತಿತರ 50ಕ್ಕೂ ಅಧಿಕ ಮಂದಿ ಸಲ್ಲಿಸಿದ್ದ ಅರ್ಜಿಗಳನ್ನು ವಿಲೇವಾರಿ ಮಾಡಿರುವ ನ್ಯಾ. ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ಪೀಠ, ವಿಶ್ವವಿದ್ಯಾಲಯ ಅನುದಾನ ಆಯೋಗ ನಿಗದಿ ಪಡಿಸಿರುವ ಅರ್ಹತೆ ಮತ್ತು ಎಲ್ಲ ನಿಯಮಗಳನ್ನು ಪರಿಗಣಿಸಿಯೇ ನೇಮಕ ಪ್ರಕ್ರಿಯೆ ನಡೆಸಬೇಕು ಎಂದು ನಿರ್ದೇಶನ ನೀಡಿದೆ.

ಅಲ್ಲದೆ, ಪ್ರಸ್ತುತ ನಡೆದಿರುವ ನೇಮಕಗಳಲ್ಲಿ ಮಧ್ಯಪ್ರವೇಶ ಮಾಡಲು ನಿರಾಕರಿಸಿದೆ. ಆದರೆ, ಮುಂದಿನ ನೇಮಕಾತಿಗೆ ವೇಳೆ ಯುಜಿಸಿಯ ನಿಯಮ ಪರಿಗಣಿಸಲು ಹೈಕೋರ್ಟ್ ಸರಕಾರಕ್ಕೆ ನಿರ್ದೇಶನ ನೀಡಿದೆ. 2022ರ ಜ.14 ರಂದು ವಿಶ್ವವಿದ್ಯಾಲಯ ಅನುದಾನ ಆಯೋಗ ನಿಗದಿಪಡಿಸಿದ ಕನಿಷ್ಠ ಶೈಕ್ಷಣಿಕ ಅರ್ಹತೆ ಇಲ್ಲದಿದ್ದ ಅಭ್ಯರ್ಥಿಗಳೂ ಸಹ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಆದರೆ ಆ ವಿದ್ಯಾರ್ಹತೆಗಳನ್ನು ಅತಿಥಿ ಉಪನ್ಯಾಸಕರಾಗಿ ನೇಮಕವಾದ ಬಳಿಕ ಮೂರು ವರ್ಷಗಳಲ್ಲಿ ಪೂರ್ಣಗೊಳಿಸಬೇಕು.

ಒಂದು ವೇಳೆ ಆ ಮೂರು ವರ್ಷಗಳಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗ ನಿಗದಿ ಪಡಿಸಿದ ಅರ್ಹತೆ ಪಡೆಯದಿದ್ದಲ್ಲಿ ಅಂತಹವರ ಅತಿಥಿ ಉನ್ಯಾಸಕರ ಹುದ್ದೆಗೆ ನೇಮಕ ಮಾಡುವುದಕ್ಕೆ ಸಂಪೂರ್ಣವಾಗಿ ನಿರ್ಬಂಧ ವಿಧಿಸಲಾಗುವುದು ಎಂದು ಸರ್ಕಾರ ಆದೇಶಿಸಿತ್ತು. ಅಲ್ಲದೆ, ನೇಮಕ ಮಾಡುವ ಸಂದರ್ಭದಲ್ಲಿ ಅಂತಹ ಅಭ್ಯರ್ಥಿಗಳಿಗೆ ಪ್ರತಿ ಶೈಕ್ಷಣಿಕ ವರ್ಷಕ್ಕೆ 3 ಅಂಕಗಳಂತೆ ಕೃಪಾಂಕ ಪಡೆದುಕೊಳ್ಳಬಹುದು ಎಂದು 2022ರ ಜನವರಿ 17ರಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಇದನ್ನು ಅರ್ಜಿದಾರರ ಅಭ್ಯರ್ಥಿಗಳು ಪ್ರಶ್ನಿಸಿದ್ದರು.

ಕೃಪಾಂಕ ಕುರಿತ ಸುತ್ತೋಲೆ ಎತ್ತಿಹಿಡಿದ ನ್ಯಾಯಪೀಠ: ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರಿಗೆ ಅವರು ಸಲ್ಲಿಸಿರುವ ವರ್ಷಗಳ ಸೇವೆಗೆ ಅನುಗುಣವಾಗಿ ವರ್ಷಕ್ಕೆ 3 ಅಂಕಗಳಂತೆ ಗರಿಷ್ಠ 16 ವರ್ಷಗಳ ಕೃಪಾಂಕ ನೀಡಿಕೆ ಸಮಂಜಸವಾಗಿದೆ. ಈ ಕುರಿತು 2022ರ ಜ.17ರಂದು ಹೊರಡಿಸಿರುವ ಆದೇಶ ಸರಿ ಇದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ವಿಚಾರದಲ್ಲಿ ಅರ್ಜಿದಾರ ವಾದವನ್ನು ಪುರಸ್ಕರಿಸಲು ನ್ಯಾಯಾಲಯ ಒಪ್ಪಿಲ್ಲ. ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಅತಿಥಿ ಉಪನ್ಯಾಸಕರಿಗೆ ಯುಜಿಸಿ ನಿಯಮದಂತೆ ಕನಿಷ್ಠ ವಿದ್ಯಾರ್ಹತೆ ಹೊಂದಬೇಕು. ಆದರೆ, ಸರ್ಕಾರ ಆ ನಿಯಮಗಳನ್ನು ಪಾಲಿಸದೆ ವಿದ್ಯಾರ್ಹತೆ ಹೊಂದಲು ನೇಮಕಗೊಂಡ ಮೂರು ವರ್ಷಗಳವರೆಗೆ ಕಾಲಾವಕಾಶ ನೀಡಿದೆ ಮತ್ತು ಕೃಪಾಂಕ ನೀಡಿಕೆ ಕ್ರಮ ಸರಿಯಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು.

ವಿಶ್ವವಿದ್ಯಾಲಯ ಅನುದಾನ ಆಯೋಗದ ಪರ ವಾದ ಮಂಡಿಸಿದ್ದ ವಕೀಲರು, ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಶಿಕ್ಷಕರು ಮತ್ತು ಇತರೆ ಶೈಕ್ಷಣಿಕ ಸಿಬ್ಬಂದಿ ನೇಮಕ ಸಂಬಂಧ ಕನಿಷ್ಠ ವಿದ್ಯಾರ್ಹತೆ ಕುರಿತ ವಿಶ್ವವಿದ್ಯಾಲಯ ಅನುದಾನ ಆಯೋಗ ನಿಯಮಾವಳಿ ನಿಯಮ 13 ಹಾಗೂ ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವ ಮಾನದಂಡಗಳು 2018ನಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಕನಿಷ್ಠ ವಿದ್ಯಾರ್ಹತೆಗಳನ್ನು ನಿಗದಿಪಡಿಸಲಾಗಿದೆ. ಹಾಗಾಗಿ ಅವುಗಳನ್ನು ಪಾಲನೆ ಮಾಡಬೇಕಿದೆ ಎಂದು ವಾದಿಸಿದ್ದರು.

ಇದನ್ನೂ ಓದಿ: ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವು ಪ್ರಕರಣ : ಆಕ್ಷೇಪಣೆ ಸಲ್ಲಿಸಲು 2 ವಾರ ಕಾಲಾವಕಾಶ ನೀಡಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.