ETV Bharat / state

ಜ. 27ರೊಳಗೆ ನಗರದ ಉದ್ಯಾನಗಳ ಸ್ಥಿತಿಗತಿ, ನಿರ್ವಹಣೆ ವಿವರ ಸಲ್ಲಿಸಲು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ

ಬಿಬಿಎಂಪಿ ಮಾಹಿತಿಯಂತೆ ನಗರದಲ್ಲಿರುವ 1,010 ಉದ್ಯಾನಗಳ ಸ್ಥಿತಿಗತಿ ಹೇಗಿದೆ? ಅವುಗಳ ನಿರ್ವಹಣೆಗೆ ಯಾವೆಲ್ಲಾ ಕ್ರಮ ಅನುಸರಿಸಲಾಗುತ್ತಿದೆ ಎಂಬ ಬಗ್ಗೆ 2021ರ ಜ. 27ರ ಒಳಗೆ ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ ಮಾಡಿದೆ.

High court
ಹೈಕೋರ್ಟ್
author img

By

Published : Dec 18, 2020, 7:54 PM IST

ಬೆಂಗಳೂರು: ನಗರದಲ್ಲಿರುವ 1,010 ಉದ್ಯಾನಗಳ ಸೂಕ್ತ ನಿರ್ವಹಣೆ ಮತ್ತು ಅಭಿವೃದ್ಧಿ ಸಂಬಂಧ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ನೋಟಿಸ್ ಜಾರಿ ಮಾಡಿರುವ ಹೈಕೋರ್ಟ್, ಅವುಗಳ ಪ್ರಸ್ತುತ ಸ್ಥಿತಿಗತಿ ಹಾಗೂ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ.

ಈ ಕುರಿತು ಹೈಕೋರ್ಟ್ ಕಾನೂನು ಸೇವಾ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ಪೀಠ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ಬಿಬಿಎಂಪಿ ಹಾಗೂ ಬಿಡಿಎ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿತು. ಅಲ್ಲದೇ, ಬಿಬಿಎಂಪಿ ಮಾಹಿತಿಯಂತೆ ನಗರದಲ್ಲಿರುವ 1,010 ಉದ್ಯಾನಗಳ ಸ್ಥಿತಿಗತಿ ಹೇಗಿದೆ? ಅವುಗಳ ನಿರ್ವಹಣೆಗೆ ಯಾವೆಲ್ಲಾ ಕ್ರಮ ಅನುಸರಿಸಲಾಗುತ್ತಿದೆ ಎಂಬ ಬಗ್ಗೆ 2021ರ ಜ. 27ರ ಒಳಗೆ ವರದಿ ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆಯನ್ನು ಫೆಬ್ರವರಿ 3ಕ್ಕೆ ಮುಂದೂಡಿತು. ಅಲ್ಲದೇ, ಈ ಕುರಿತು ಹೆಚ್ಚಿನ ಕಾಲಾವಕಾಶ ನೀಡುವುದಿಲ್ಲ ಎಂದೂ ಸ್ಪಷ್ಟಪಡಿಸಿತು.

ಪ್ರಕರಣದ ಹಿನ್ನೆಲೆ: 2020ರ ಜ. 7ರಂದು ಬೆಂಗಳೂರಿನ ಕೆಲ ನಿವಾಸಿಗಳು ಹೈಕೋರ್ಟ್ ಕಾನೂನು ಸೇವೆಗಳ ಸಮಿತಿಗೆ ಪತ್ರ ಬರೆದು, ನಗರಾಭಿವೃದ್ಧಿ ಇಲಾಖೆ, ಬಿಬಿಎಂಪಿ ಮತ್ತು ಬಿಡಿಎ ನಿರ್ವಹಣೆ ಮಾಡುತ್ತಿರುವ ಉದ್ಯಾನ, ಆಟದ ಮೈದಾನಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ ಎಂದು ತಿಳಿಸಿದ್ದರು.

ಹಾಗೆಯೇ, ಕರ್ನಾಟಕ ಸರ್ಕಾರಿ ಉದ್ಯಾನ (ಸಂರಕ್ಷಣೆ) ಕಾಯ್ದೆ-1975 ಹಾಗೂ ಕರ್ನಾಟಕ ಉದ್ಯಾನ, ಆಟದ ಮೈದಾನ ಮತ್ತು ಬಯಲು ಪ್ರದೇಶ (ಸಂರಕ್ಷಣೆ ಮತ್ತು ನಿಯಂತ್ರಣ) ಕಾಯ್ದೆ-1985ರ ಅಡಿಯಲ್ಲಿ ಉದ್ಯಾನ ಮತ್ತು ಆಟದ ಮೈದಾನಗಳನ್ನು ಸಂರಕ್ಷಣೆ ಮಾಡಿ ಅಭಿವೃದ್ಧಿಪಡಿಸಬೇಕು. ಇದು ನಗರ ಸ್ಥಳೀಯ ಸಂಸ್ಥೆಗಳ ಕರ್ತವ್ಯ. ಆದರೆ, ಈ ಜವಾಬ್ದಾರಿಯನ್ನು ಬಿಬಿಎಂಪಿ ಹಾಗೂ ಬಿಡಿಎ ಸಮಪರ್ಕವಾಗಿ ನಿರ್ವಹಣೆ ಮಾಡುತ್ತಿಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿತ್ತು.

ಈ ಪತ್ರದ ಆಧಾರದಲ್ಲಿ ಹೈಕೋರ್ಟ್ ಕಾನೂನು ಸೇವಾ ಸಮಿತಿ ಪಿಐಎಲ್ ದಾಖಲಿಸಿದ್ದು, ಬಿಬಿಎಂಪಿ ನಗರದಲ್ಲಿರುವ ಉದ್ಯಾನಗಳನ್ನು ಸಮರ್ಪಕ ನಿರ್ವಹಣೆ ಮಾಡುತ್ತಿಲ್ಲ. ಆದ್ದರಿಂದ ಸರ್ಕಾರ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಮತ್ತು ಸಂಬಂಧಿಸಿದ ಪ್ರಾಧಿಕಾರಗಳಿಗೆ ಉದ್ಯಾನ ಮತ್ತು ಆಟದ ಮೈದಾನಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ಹಾಗೂ ಅಭಿವೃದ್ಧಿಪಡಿಸಲು ನಿರ್ದೇಶಿಸಿಬೇಕು ಎಂದು ಮನವಿ ಮಾಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.