ETV Bharat / state

ಕೆಎಸ್‌ಡಿಎಲ್‌ನಿಂದ ತಿರಸ್ಕೃತಗೊಂಡ ಕೆಮಿಕ್ಸ್ ಪರೀಕ್ಷೆ ನಡೆಸುವಂತೆ ಐಐಎಸ್‌ಸಿಗೆ ಹೈಕೋರ್ಟ್ ಸೂಚನೆ - ಈಟಿವಿ ಭಾರತ ಕನ್ನಡ

ಕೆಎಸ್‌ಡಿಎಲ್​ನಿಂದ ತಿರಸ್ಕೃತಗೊಂಡಿರುವ ಕೆಲವು ಕೆಮಿಕಲ್ಸ್ ಮಾದರಿಯನ್ನು ಪರೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಭಾರತೀಯ ವಿಜ್ಞಾನ ಸಂಸ್ಥೆಗೆ (ಐಐಎಸ್‌ಸಿ) ಹೈಕೋರ್ಟ್ ಸೂಚನೆ ನೀಡಿದೆ.

hc-directs-iisc-to-conduct-chemical-examination-for-chemics-rejected-by-ksdl
ಕೆಎಸ್‌ಡಿಎಲ್‌ನಿಂದ ತಿರಸ್ಕೃತಗೊಂಡ ಕೆಮಿಕ್ಸ್ ಪರೀಕ್ಷೆ ನಡೆಸುವಂತೆ ಐಐಎಸ್‌ಸಿಗೆ ಹೈಕೋರ್ಟ್ ಸೂಚನೆ
author img

By

Published : Mar 18, 2023, 7:19 AM IST

ಬೆಂಗಳೂರು : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಿಂದ(ಕೆಎಸ್‌ಡಿಎಲ್) ತಿರಸ್ಕೃತಗೊಂಡಿರುವ ಕೆಲವು ಕಚ್ಚಾ ಸಾಮಗ್ರಿ(ಕೆಮಿಕಲ್ಸ್) ಮಾದರಿಯ ಪರೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಭಾರತೀಯ ವಿಜ್ಞಾನ ಸಂಸ್ಥೆಗೆ (ಐಐಎಸ್‌ಸಿ) ಹೈಕೋರ್ಟ್ ನಿರ್ದೇಶಿಸಿದೆ. ರಾಸಾಯನಿಕಗಳ ಮಾದರಿ ತಿರಸ್ಕರಿಸಿದ್ದ ಕೆಎಸ್‌ಡಿಎಲ್ ಕ್ರಮ ಪ್ರಶ್ನಿಸಿ ಕೆಮಿಕಲ್ ಕಂಪನಿಗಳಾದ ಡೆಲಿಷಿಯಾ ಕೆಮಿಕಲ್ಸ್, ಕೆಮಿಕ್ಸಿಲ್ ಕಾರ್ಪೊರೇಷನ್ ಹಾಗೂ ಬನ್ನಾರಿ ಕನ್‌ಸ್ಟ್ರಕ್ಷನ್ಸ್ ತಕರಾರು ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ವೆಂಕಟೇಶ್ ದಳವಾಯಿ, ಕೆಎಸ್‌ಡಿಎಲ್ ಸಾಬೂನು ಮತ್ತು ಮಾರ್ಜಕ ತಯಾರಿಕೆಗಾಗಿ ಕೆಮಿಕಲ್ ಆಯಿಲ್‌ನಂತಹ ಕಚ್ಚಾವಸ್ತುಗಳನ್ನು ಖಾಸಗಿ ಕಂಪನಿಗಳಿಂದ ಖರೀದಿಸುತ್ತದೆ. ಆದರೆ, ಅರ್ಜಿದಾರ ಕಂಪನಿಗಳು ಒದಗಿಸಿದ್ದ 15 ಕೆಮಿಕಲ್ ಮಾದರಿಗಳನ್ನು ಕೆಎಸ್‌ಡಿಎಲ್ ತಿರಸ್ಕರಿಸಿದೆ. ಆದರೆ, ದುಬಾರಿ ಬೆಲೆಗೆ ಬೇರೆ ಕಂಪನಿಗೆ ಕೆಮಿಕಲ್ ಗುತ್ತಿಗೆ ನೀಡಲಾಗಿದೆ. ಈ ಕ್ರಮದ ಹಿಂದೆ ದುರುದ್ದೇಶವಿದೆ ಎಂಬುದು ಮೇಲ್ನೋಟಕ್ಕೆ ತಿಳಿದು ಬರುತ್ತಿದೆ. ಆದ್ದರಿಂದ, ಕೆಎಸ್‌ಡಿಎಲ್ ತಿರಸ್ಕರಿಸಿರುವ ಕೆಮಿಕಲ್‌ಗಳ ಮಾದರಿಯನ್ನು ಐಐಎಸ್‌ಸಿ ವಿಜ್ಞಾನಿಗಳಿಂದ ಪರೀಕ್ಷೆಗೊಳಪಡಿಸಲು ಆದೇಶಿಸಬೇಕು ಎಂದು ನ್ಯಾಯಪೀಠವನ್ನು ಕೋರಿದರು.

ಆ ಮನವಿನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿದಾರರ ಕಂಪನಿಗಳು ಕೆಎಸ್‌ಡಿಎಲ್ ತಿರಸ್ಕರಿಸಿರುವ ಕೆಮಿಕಲ್ ಮಾದರಿಯನ್ನು ಐಐಎಸ್‌ಸಿಗೆ ಒದಗಿಸಬೇಕು. ಆ ಕೆಮಿಕಲ್‌ಗಳ ಮಾದರಿಯನ್ನು ಐಐಎಸ್‌ಸಿ ತಪಾಸಣೆ ನಡೆಸಬೇಕು. ಜತೆಗೆ, ಅದರ ಗುಣಮಟ್ಟಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿತು.

ಮಾಡಾಳು ವಿರುದ್ಧ ದೂರುದಾರರಿಂದ ಅರ್ಜಿ : ಅರ್ಜಿದಾರ ಸಂಸ್ಥೆಯಲ್ಲಿ ಒಂದಾದ ಕೆಮಿಕ್ಸಿಲ್ ಕಾರ್ಪೊರೇಷನ್‌ನ ಶ್ರೇಯಸ್ ಕಶ್ಯಪ್ ಅವರು ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣ ಸಂಬಂಧ ಶಾಸಕ ಮಾಡಾಳು ವಿರೂಪಾಕ್ಷಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. ಆ ದೂರು ನೀಡುವ ಮುನ್ನವೇ ಕಶ್ಯಪ್ ಅವರ ಕಂಪನಿಯ ಕೆಮಿಕಲ್ಸ್ ಮಾದರಿಯನ್ನು ಕೆಎಸ್‌ಡಿಎಲ್ ತಿರಸ್ಕರಿಸಿತ್ತು. ತಮ್ಮ ಕಂಪನಿಯ ಕೆಮಿಕಲ್ ಮಾದರಿ ತಿರಸ್ಕರಿಸಿ, ದುಬಾರಿ ಬೆಲೆಗೆ ಬೇರೆ ಕಂಪನಿಗಳಿಗೆ ಗುತ್ತಿಗೆ ನೀಡಲಾಗಿದೆ ಎಂದು ಆಕ್ಷೇಪಿಸಿ ಫೆ.14ರಂದು ಅರ್ಜಿದಾರ ಕಂಪನಿಗಳು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದವು. ಭ್ರಷ್ಟಾಚಾರ ಆರೋಪ ಸಂಬಂಧ ಲೋಕಾಯುಕ್ತ ಪೊಲೀಸರು ಮಾ.2ರಂದು ಮಾಡಾಳು ವಿರೂಪಾಕ್ಷಪ್ಪ ಮತ್ತವರ ಮಗನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ಶಾಸಕ ಮಾಡಾಳು ಜಾಮೀನು ಅರ್ಜಿ ವಿಚಾರಣೆ ಪೂರ್ಣ : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ (ಕೆಎಸ್‌ಡಿಎಲ್)ಗೆ ರಾಸಾಯನಿಕಗಳನ್ನು ಪೂರೈಕೆಗಾಗಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಸಂಬಂಧ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೈಕೋರ್ಟ್​ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ನ್ಯಾಯಪೀಠವು ಅಂತಿಮ ಆದೇಶವನ್ನು ಕಾಯ್ದಿರಿಸಿದೆ.

ಇದನ್ನೂ ಓದಿ : ಶಾಸಕ ಮಾಡಾಳ್ ಜಾಮೀನು ಅರ್ಜಿ ವಿಚಾರಣೆ ಪೂರ್ಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.