ETV Bharat / state

ವಿಟಿಯು ಕುಲಪತಿಯಾಗಿ ವಿದ್ಯಾಶಂಕರ್ ನೇಮಕ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ - HC dismissed petition

High Court dismissed PIL Petition: ಮೈಸೂರು ವಿಶ್ವವಿದ್ಯಾಲಯದ ಮಾಜಿ ಹಂಗಾಮಿ ಉಪಕುಲಪತಿ ಹಾಗೂ ನಿವೃತ್ತ ಪ್ರೊ. ಬಿ ಶಿವರಾಜ್ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

High Court
ಹೈಕೋರ್ಟ್​
author img

By ETV Bharat Karnataka Team

Published : Nov 7, 2023, 8:09 PM IST

ಬೆಂಗಳೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ (ವಿಟಿಯು) ಕುಲಪತಿಯನ್ನಾಗಿ ಎಸ್. ವಿದ್ಯಾಶಂಕರ್ ಅವರನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.

ಮೈಸೂರು ವಿಶ್ವವಿದ್ಯಾಲಯದ ಮಾಜಿ ಹಂಗಾಮಿ ಉಪಕುಲಪತಿ ಹಾಗೂ ನಿವೃತ್ತ ಪ್ರೊ. ಬಿ ಶಿವರಾಜ್ ಅವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿ ಕಾಯ್ದಿರಿಸಿದ್ದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ಪ್ರಕಟಿಸಿತು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕುಲಪತಿಯಾಗಿ ಎಸ್. ವಿದ್ಯಾಶಂಕರ್ ಅವರ ನೇಮಕಾತಿಗೆ ಸಂಬಂಧಿಸಿದ ಕ್ರಮಬದ್ಧತೆ ಅಥವಾ ಇಡೀ ಪ್ರಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ. ಹಾಲಿ ಪ್ರಕರಣಗಳ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಮಾತ್ರ ಅಭಿಪ್ರಾಯ ವ್ಯಕ್ತಪಡಿಸಲಾಗಿದ್ದು, ಇದು ಪಕ್ಷಕಾರರ ನಡುವಿನ ಇತರ ಯಾವುದೇ ಪ್ರಕರಣದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಪೀಠ ತನ್ನ ಆದೇಶದಲ್ಲಿ ಹೇಳಿದೆ. ಪ್ರಕರಣ ಸಂಬಂಧದ ವಿಸ್ತೃತ ಆದೇಶದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕುಲಪತಿ ನೇಮಕಕ್ಕೆ ರಾಜ್ಯ ಸರ್ಕಾರ ಶೋಧನಾ ಸಮಿತಿ ರಚನೆಯೇ ಅಕ್ರಮ. ಅದರಲ್ಲಿ ನಿಯಮ ಪಾಲನೆಯಾಗಿಲ್ಲ. ನಿಯಮದಂತೆ ಸಮಿತಿಯಲ್ಲಿ ವಿಶ್ವವಿದ್ಯಾಲಯ ಧನ ಸಹಾಯ ಆಯೋಗದ (ಯುಜಿಸಿ) ಪ್ರತಿನಿಧಿಯನ್ನು ನಾಮನಿರ್ದೇಶನ ಮಾಡಿಲ್ಲ. ಸಮಿತಿಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದವರೇ ಇಬ್ಬರು ಸದಸ್ಯರು ಇದ್ದರು. ನಿಯಮದಂತೆ ಆ ರೀತಿ ಯಾವ ವಿಶ್ವವಿದ್ಯಾಲಯಕ್ಕೆ ಕುಲಪತಿ ನೇಮಕ ಮಾಡಲಾಗುತ್ತದೆಯೋ ಅದೇ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದವರು ಸಮಿತಿಯಲ್ಲಿ ಇರುವಂತಿಲ್ಲ.

ಯುಜಿಸಿ ನಿಯಮಗಳು ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕಾಯಿದೆಯ ಸೆಕ್ಷನ್ 13ಕ್ಕೆ ವಿರುದ್ಧವಾಗಿ ವಿದ್ಯಾಶಂಕರ್ ಅವರನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕುಲಪತಿಯನ್ನಾಗಿ ನೇಮಕ ಮಾಡಲಾಗಿದೆ. ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಮತ್ತು ಯುಜಿಸಿಗೆ ಅರ್ಹತೆ ಮತ್ತು ಪ್ರಾಮಾಣಿಕತೆ ಹೊಂದಿರುವ ವ್ಯಕ್ತಿಯನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಕುಲಪತಿಯನ್ನಾಗಿ ನೇಮಕ ಮಾಡುವಂತೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ನ್ಯಾಯಪೀಠಕ್ಕೆ ಕೋರಿದ್ದರು.

ಇದನ್ನೂ ಓದಿ: ರಾಜ್ಯದಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ: ಸ್ವಯಂಪ್ರೇರಿತ ಪಿಐಎಲ್​ ದಾಖಲಿಸಿಕೊಂಡ ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.