ETV Bharat / state

ಶಾಸಕ ರೇಣುಕಾಚಾರ್ಯ ವಿರುದ್ಧದ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್​ - ಗುರುಪಾದಯ್ಯ ಮಠದ್​

2015ರಲ್ಲಿ ಎಂ ಪಿ ರೇಣುಕಾಚಾರ್ಯ ಅವರ ವಿರುದ್ಧ ಗುರುಪಾದಯ್ಯ ಮಠದ್​ ಎನ್ನುವವರು ಖಾಸಗಿ ದೂರು ಸಲ್ಲಿಸಿದ್ದರು.

HC dismissed petition seeking cancellation of case against MP Renukacharya
ಎಂಪಿ ರೇಣುಕಾಚಾರ್ಯ ವಿರುದ್ಧದ ಪ್ರಕರಣ ರದ್ದು ಕೋರಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್​
author img

By

Published : Mar 28, 2023, 7:13 PM IST

Updated : Mar 28, 2023, 10:01 PM IST

ಬೆಂಗಳೂರು: ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಮತ್ತು ಲೊಕಾಯುಕ್ತ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದು ಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇದರಿಂದ ಶಾಸಕ ರೇಣುಕಾಚಾರ್ಯರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣ ರದ್ದು ಕೋರಿ ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್​ ಅವರಿದ್ದ ನ್ಯಾಯಪೀಠ ಅರ್ಜಿಯನ್ನು ವಜಾ ಮಾಡಿ ಆದೇಶಿಸಿದೆ.

ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲ ಬಿ.ಎಸ್. ಪ್ರಸಾದ್ ವಾದ ಮಂಡಿಸಿ, ಪ್ರಕರಣ ಸಂಬಂಧ ರೇಣುಕಾಚಾರ್ಯ ವಿರುದ್ಧ 2015ರಲ್ಲಿ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ನಂತರ ತನಿಖೆ ಪೂರ್ಣಗೊಳಿಸಿ ಅಂತಿಮ ವರದಿ ಸಿದ್ಧಪಡಿಸಿದ್ದಾರೆ. ಆದರೆ, ಅರ್ಜಿದಾರರು ಜನಪ್ರತಿನಿಧಿಯಾಗಿದ್ದಾರೆ. ಅಂತಿಮ ವರದಿ ಸಲ್ಲಿಕೆಗಾಗಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯುವುದ ಅಗತ್ಯ. ಸಕ್ಷಮ ಪ್ರಾಧಿಕಾರವಾದ ಸ್ಪೀಕರ್ ಅವರಲ್ಲಿ ಅನುಮತಿ ಕೋರಲಾಗಿದೆ. ಅವರು ಅನುಮತಿ ನೀಡಿದ ಕೂಡಲೇ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು. ಈ ಹಂತದಲ್ಲಿ ಪ್ರಕರಣದ ಎಫ್‌ಐಆರ್ ರದ್ದುಪಡಿಸಬಾರದು ಎಂದು ಕೋರಿದ್ದರು. ಈ ಮನವಿ ಪುರಸ್ಕರಿಸಿರುವ ಹೈಕೋರ್ಟ್, ರೇಣುಕಾಚಾರ್ಯ ಅವರ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಇದನ್ನೂ ಓದಿ: ರೇಣುಕಾಚಾರ್ಯ ವಿರುದ್ಧ ಕೋರ್ಟ್​​ಗೆ ಹೋಗಿ ಪ್ರಕರಣ ದಾಖಲಿಸಿದ ಗ್ರಾಮ ಲೆಕ್ಕಿಗ

ಪ್ರಕರಣದ ಹಿನ್ನೆಲೆ ಏನು? ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತು ಅವರ ಸಹೋದರರು ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿದ್ದಾರೆ ಎಂದು ಆರೋಪಿಸಿ ಗುರುಪಾದಯ್ಯ ಮಠದ್ ಎಂಬುವರು ದಾವಣಗೆರೆಯ ಲೋಕಾಯುಕ್ತ ನ್ಯಾಯಾಲಯಕ್ಕೆ 2015ರ ಏ.28ರಂದು ಖಾಸಗಿ ದೂರು ಸಲ್ಲಿಸಿದ್ದರು. ಪ್ರಕರಣ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ದಾವಣಗೆರೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಗೆ ನ್ಯಾಯಾಲಯ ಆದೇಶಿಸಿತ್ತು. ಲೋಕಾಯುಕ್ತ ಪೊಲೀಸರು ರೇಣುಕಾಚಾರ್ಯ ವಿರುದ್ಧ 2015ರ ಮೇ5ರಂದು ಎಫ್‌ಐಆರ್ ದಾಖಲಿಸಿ, ಅವರ ಮತ್ತು ಕುಟುಂಬದ ಸದಸ್ಯರ ಮನೆ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆ ವಶಕ್ಕೆ ಪಡೆದುಕೊಂಡಿದ್ದರು.

ಇದರಿಂದ 2017ರ ಮಾ.6ರಂದು ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದ ರೇಣುಕಾಚಾರ್ಯ, ತಮ್ಮ ವಿರುದ್ಧದ ಎಫ್‌ಐಆರ್ ಮತ್ತು ಲೋಕಾಯುಕ್ತ ವಿಶೇಷ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿದ್ದರು. ಜತೆಗೆ, ಅರ್ಜಿ ಇತ್ಯರ್ಥವಾಗುವರೆಗೆ ತನಿಖೆಗೆ ತಡೆ ನೀಡುವಂತೆ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಅದನ್ನು ಹೈಕೋರ್ಟ್ ವಜಾಗೊಳಿಸಿತ್ತು.

ಇದನ್ನೂ ಓದಿ: ಲಂಚ ಆರೋಪ; ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಹೈಕೋರ್ಟ್

Last Updated : Mar 28, 2023, 10:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.