ETV Bharat / state

ಖಾಸಗಿ ಶಾಲೆಗಳ ನವೀಕರಣ ಸುತ್ತೋಲೆ ಪ್ರಶ್ನಿಸಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

author img

By

Published : Feb 24, 2021, 10:45 PM IST

ಸರ್ಕಾರದ ಸುತ್ತೋಲೆ ವಿರೋಧಿಸಿ ಅಸೋಸಿಯೇಟೆಡ್ ಮ್ಯಾನೇಜ್​ಮೆಂಟ್​ ಆಫ್ ಪ್ರೈಮರಿ ಅಂಡ್​ ಸೆಕೆಂಡರಿ ಸ್ಕೂಲ್ಸ್ ಇನ್ ಕರ್ನಾಟಕ (ಕೆಎಎಂಎಸ್) ಸಂಘಟನೆ ಹಾಗೂ ಕೆಲ ಖಾಸಗಿ ಶಾಲೆಗಳು ಸಲ್ಲಿಸಿರುವ ಅರ್ಜಿಯನ್ನು ನ್ಯಾ. ಆರ್.ದೇವದಾಸ್ ಅವರಿದ್ದ ಹೈಕೋರ್ಟ್ ಪೀಠ ವಿಚಾರಣೆ ನಡೆಸಿತು.

HC notice to govt regarding the private schools circular
ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಖಾಸಗಿ ಅನುದಾನ ರಹಿತ ಶಾಲೆಗಳು ತಮ್ಮ ಮಾನ್ಯತೆ ನವೀಕರಣಕ್ಕಾಗಿ ವಿವಿಧ ಅಧಿಕಾರಿಗಳಿಂದ ಅನುಮತಿ ಪಡೆಯುವಂತೆ ಸೂಚಿಸಿ ಹೊರಡಿಸಿರುವ ಸುತ್ತೋಲೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ಅಸೋಸಿಯೇಟೆಡ್ ಮ್ಯಾನೇಜ್​ಮೆಂಟ್​ ಆಫ್ ಪ್ರೈಮರಿ ಅಂಡ್​ ಸೆಕೆಂಡರಿ ಸ್ಕೂಲ್ಸ್ ಇನ್ ಕರ್ನಾಟಕ (ಕೆಎಎಂಎಸ್) ಸಂಘಟನೆ ಹಾಗೂ ಕೆಲ ಖಾಸಗಿ ಶಾಲೆಗಳು ಸಲ್ಲಿಸಿರುವ ಅರ್ಜಿಯನ್ನು ನ್ಯಾ. ಆರ್.ದೇವದಾಸ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ಕೆಲಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.

ಅರ್ಜಿದಾರರ ಕೋರಿಕೆ - ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ 2020ರ ನವೆಂಬರ್ 10ರಂದು ಸುತ್ತೋಲೆ ಹೊರಡಿಸಿ ಶಾಲೆಗಳ ಮಾನ್ಯತೆ ನವೀಕರಿಸಿಕೊಳ್ಳಲು ಸುಪ್ರೀಂ ಕೋರ್ಟ್‌ ನಿರ್ದೇಶನಗಳಂತೆ ಕಟ್ಟಡ ಸುರಕ್ಷತಾ ಮಾರ್ಗಸೂಚಿಗಳನ್ನು ಅಳವಡಿಸಿಕೊಳ್ಳುವಂತೆ, ಅಗ್ನಿ ಸುರಕ್ಷತೆ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ನಿರಾಕ್ಷೇಪಣಾ ಪ್ರಮಾಣಪತ್ರ ಪಡೆಯುವಂತೆ ಸೂಚಿಸಿದೆ. ಅಲ್ಲದೇ ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಇಂತಹ ಪ್ರಮಾಣಪತ್ರಗಳನ್ನು ಪಡೆಯಲು ಸೂಚಿಸಿದೆ.

ಓದಿ : ಫುಟ್​​​ಪಾತ್​ನಲ್ಲಿ ಜೋತು ಬಿದ್ದಿರುವ ಕೇಬಲ್ ಸರಿಪಡಿಸಿ: ಬಿಬಿಎಂಪಿಗೆ ಹೈಕೋರ್ಟ್ ತಾಕೀತು

ಅಲ್ಲದೇ, ಶಾಲೆಗಳು 10 ಸಾವಿರ ಲೀಟರ್ ಸಾಮರ್ಥ್ಯದ ಓವರ್‌ ಹೆಡ್ ಟ್ಯಾಂಕ್‌ಗಳನ್ನು ಹೊಂದಿರಬೇಕು, ಶಾಲೆ ಬಳಿ 12 ಮೀಟರ್ ಅಗಲದ ರಸ್ತೆ ಹೊಂದಿರಬೇಕು ಎಂದು ಸುತ್ತೋಲೆಯಲ್ಲಿ ಕಡ್ಡಾಯಗೊಳಿಸಲಾಗಿದೆ. ಇಂತಹ ಪ್ರಮಾಣಪತ್ರಗಳನ್ನು ಪಡೆಯಲು ಸಾಮಾನ್ಯ ಶಾಲೆಗಳು ಕಚೇರಿಗಳಿಗೆ ಅಲೆದಾಡುವುದು ಕಷ್ಟ. ಎನ್‌ಒಸಿಗಳನ್ನು ಪಡೆಯಲು ಶಾಲೆಗಳು ಸಂಬಂಧಪಟ್ಟ ಇಲಾಖೆಗಳಿಗೆ ಹೆಚ್ಚುವರಿ ಹಣವನ್ನು ನೀಡಬೇಕಾಗುತ್ತದೆ. ಈಗಾಗಲೇ ಶಾಲಾ ಆಡಳಿತ ಮಂಡಳಿಗಳು ಕೋವಿಡ್​​ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ ಸರ್ಕಾರದ ಆದೇಶವನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.