ETV Bharat / state

ಚಾಮರಾಜನಗರ-ಮೈಸೂರು ಡಿಸಿ ಕಚೇರಿಗಳ ದಾಖಲೆ ಜಪ್ತಿಗೆ​ ಹೈಕೋರ್ಟ್ ಆದೇಶ

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ರೋಗಿಗಳ ಸಾವು ಪ್ರಕರಣದ ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶಿಸಿದೆ. ಈ ಹಿನ್ನೆಲೆ ಚಾಮರಾಜನಗರ ಮತ್ತು ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ದಾಖಲೆ ವಶಪಡಿಸಿಕೊಳ್ಳುವಂತೆ ಹೈಕೋರ್ಟ್ ಸೂಚಿಸಿದೆ.

HC  order to seize  record of Chamarajanagar and Mysuru DC offices
ಡಿಸಿ ಕಚೇರಿಗಳ ದಾಖಲೆ ಸೀಝ್​ ಮಾಡಲು ಆದೇಶ
author img

By

Published : May 5, 2021, 12:18 PM IST

ಬೆಂಗಳೂರು: ಆಕ್ಸಿಜನ್ ಸಿಗದೆ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಸಾವಿಗೀಡಾದ ಪ್ರಕರಣದ ತನಿಖೆಯನ್ನು ನ್ಯಾಯಾಂಗ ತನಿಖೆ ಒಪ್ಪಿಸುವುದಾಗಿ ಸರ್ಕಾರ ಹೈಕೋರ್ಟ್​ಗೆ ಮಾಹಿತಿ ನೀಡಿದೆ. ಈ ಹಿನ್ನೆಲೆ ಚಾಮರಾಜನಗರ ಹಾಗೂ ಮೈಸೂರು ಜಿಲ್ಲಾಧಿಕಾರಿ ಕಚೇರಿಗಳ ದಾಖಲೆಗಳನ್ನು ಜಪ್ತಿ​ ಮಾಡುವಂತೆ ಹೈಕೋರ್ಟ್ ಆದೇಶಿಸಿದೆ.

ಕೋವಿಡ್ ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಹಾಗೂ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಚಾಮರಾಜನಗರದಲ್ಲಿ ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ವಿಚಾರವಾಗಿ ನಿನ್ನೆ ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿತ್ತು. ಈ ಸಂಬಂಧ ರಾಜ್ಯ ಸರ್ಕಾರದ ನಿಲುವು ಕೇಳಿತ್ತು.

ಈ ಬಗ್ಗೆ ಇಂದು ಹೈಕೋರ್ಟ್​ಗೆ ಮಾಹಿತಿ ನೀಡಿದ ಅಡ್ವೊಕೇಟ್ ಜನರಲ್, ಪ್ರಕರಣದ ತನಿಖೆಗೆ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರ ಏಕಸದಸ್ಯ ಆಯೋಗ ರಚಿಸಲಾಗಿದೆ ಎಂದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ನಾವು ನ್ಯಾಯಾಂಗ ತನಿಖೆ ನಡೆಸುವ ಕುರಿತು ಸರ್ಕಾರದ ನಿಲುವನ್ನು ಮಾತ್ರವೇ ಕೇಳಿದ್ದೆವು, ಆದೇಶ ಹೊರಡಿಸಲು ಹೇಳಿರಲಿಲ್ಲ. ನಿವೃತ್ತ ನ್ಯಾಯಮೂರ್ತಿ ನೇಮಕವನ್ನು ಹೈಕೋರ್ಟ್​ಗೆ ಬಿಡಬೇಕು ಎಂದಿತು. ಅಲ್ಲದೆ, ಒಂದು ವೇಳೆ ಸರ್ಕಾರ ಆದೇಶ ಹೊರಡಿಸಿದ್ದರೆ ಕೂಡಲೇ ದಾಖಲೆಗಳನ್ನು ಜಪ್ತಿ ಮಾಡಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿತು.

ಓದಿ : ಚಾಮರಾಜನಗರ ಆಸ್ಪತ್ರೆಯಲ್ಲಿ ರೋಗಿಗಳ ಸಾವು ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶ

ಮೈಸೂರು ಮತ್ತು ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಗಳಲ್ಲಿರುವ ಹಾಗೂ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿರುವ ಆಕ್ಸಿಜನ್ ಪೂರೈಕೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಜಪ್ತಿ ಮಾಡಬೇಕು ಎಂದು ಕೋರ್ಟ್ ಆದೇಶಿಸಿದೆ. ಈಗಾಗಲೇ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿ ಈ ದಾಖಲೆಗಳನ್ನು ಪರಿಶೀಲಿಸಬಹುದು ಎಂದು ಸ್ಪಷ್ಟಪಡಿಸಿದೆ.

ನ್ಯಾಯಾಂಗ ತನಿಖೆಗೆ ಸರ್ಕಾರವೇ ನಿವೃತ್ತ ನ್ಯಾಯಮೂರ್ತಿ ನೇಮಕ ಮಾಡಿ ಆದೇಶ ಹೊರಡಿಸಿರುವ ಕುರಿತು ಹೈಕೋರ್ಟ್ ಬೇಸರ ವ್ಯಕ್ತಪಡಿಸಿದ ಹಿನ್ನೆಲೆ, ಸ್ಪಷ್ಟನೆ ನೀಡಿದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ನ್ಯಾಯಾಂಗ ತನಿಖೆ ಆದೇಶದಲ್ಲಿ ಹೈಕೋರ್ಟ್ ಸೂಚನೆ ಪಾಲಿಸಲಾಗುವುದು. ಆದೇಶವನ್ನು ಪರಿಷ್ಕರಿಸಲಾಗುವುದು ಎಂದು ವಿವರಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.