ETV Bharat / state

ಅತ್ಯಾಚಾರ ಎಸಗಿದ್ದ ಅಪ್ರಾಪ್ತೆಯನ್ನು ಮದುವೆಯಾದ ಆರೋಪಿ ವಿರುದ್ಧದ ಪ್ರಕರಣ ರದ್ದು ಪಡಿಸಿದ ಹೈಕೋರ್ಟ್

ಅತ್ಯಾಚಾರ ಎಸಗಿದ ಆರೋಪಿ ವಿರುದ್ದ ದಾಖಲಾಗಿದ್ದ ಫೋಕ್ಸೋ ಪ್ರಕಣವನ್ನು ಹೈಕೋರ್ಟ್​ ರದ್ದುಪಡಿಸಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : Feb 13, 2023, 10:53 PM IST

ಬೆಂಗಳೂರು: ಅಪ್ರಾಪ್ತೆಯೊಬ್ಬರನ್ನು ಅತ್ಯಾಚಾರ ಮಾಡಿ ಮಗುವಾಗುವುದಕ್ಕೆ ಕಾರಣವಾಗಿದ್ದ ಆರೋಪಿ, ಸಂತ್ರಸ್ತೆಯನ್ನೇ ಮದುವೆಯಾಗಿರುವ ಪ್ರಕರಣವೊಂದರಲ್ಲಿ ಅಪರಾಧಿಯ ವಿರುದ್ಧದ ಪೋಕ್ಸೋ ಪ್ರಕರಣವನ್ನು ಹೈಕೋರ್ಟ್ ರದ್ದು ಪಡಿಸಿದೆ. ತನ್ನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಕೋರಿ ಮಂಡ್ಯದ ನಿವಾಸಿಯೊಬ್ಬರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ನ್ಯಾಯಪೀಠ ಅಪ್ರಾಪ್ತೆ ಮಗು ಪಡೆದ ಹಿನ್ನೆಲೆಯಲ್ಲಿ ಸಂತ್ರಸ್ತೆ ಮತ್ತು ಮಗುವಿನ ಹಿತಾಸಕ್ತಿ ಪರಿಗಣಿಸಿ ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಿ ಆದೇಶಿಸಿದೆ.

ಅಲ್ಲದೇ, ಸಂತ್ರಸ್ತೆ ಈಗಾಗಲೇ ಪ್ರಾಪ್ತ ವಯಸ್ಸಿಗೆ ಬಂದಿದ್ದಾರೆ. ಸ್ವಂತ ನಿರ್ಧಾರ ಕೈಗೊಳ್ಳಲು ಮತ್ತು ಬದುಕಿನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಲು ಶಕ್ತಳಾಗಿದ್ದಾಳೆ. ಆಕೆ ಆರೋಪಿಯನ್ನೇ ಮದುವೆಯಾಗಿ, ಗಂಡು ಮಗುವನ್ನು ಪಡೆದಿದ್ದಾಳೆ. ಆರೋಪಿ ಮೇಲಿನ ಪ್ರಕರಣ ರದ್ದುಪಡಿಸಲು ಆಕೆಗೆ ಸಮ್ಮತಿಯಿದೆ. ಸಂತ್ರಸ್ತೆ ಮತ್ತು ಮಗುವಿನ ಹಿತಾಸಕ್ತಿ, ಭವಿಷ್ಯದ ದೃಷ್ಟಿಯಿಂದ ಅರ್ಜಿದಾರನ ಮೇಲಿನ ಪೋಕ್ಸೋ ಪ್ರಕರಣ ರದ್ದುಪಡಿಸುವುದು ಸೂಕ್ತ ಎಂದು ನ್ಯಾಯಪೀಠ ಆದೇಶದಲ್ಲಿ ಉಲ್ಲೇಖಿಸಿದೆ.

ಪ್ರಕರಣದ ಹಿನ್ನೆಲೆ ಏನು ? : ಸಂತ್ರಸ್ತೆಯ ತಂದೆ 2021ರ ಜ.27ರಂದು ಮಂಡ್ಯದ ಅರಕೆರೆ ಠಾಣೆಗೆ ದೂರು ನೀಡಿ 2021ರ ಜ.26ರಂದು ಅಜ್ಜಿ ಮನೆಗೆ ಹೋಗಿದ್ದ ತನ್ನ 17 ವರ್ಷ 9 ತಿಂಗಳ ವಯಸ್ಸಿನ ಮಗಳು ಕಾಣೆಯಾಗಿದ್ದಾಳೆ ಎಂದು ತಿಳಿಸಿದ್ದರು. ತನಿಖೆ ನಡೆಸಿದ್ದ ಪೊಲೀಸರು ಸಂತ್ರಸ್ತೆಯನ್ನು ಪತ್ತೆ ಹಚ್ಚಿದ್ದರು. ನಂತರ ಸಂತ್ರಸ್ತೆ ಮೇಲೆ ಅರ್ಜಿದಾರ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ತಿಳಿಸಿ ಪೋಕ್ಸೋ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಅಡಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣವು ಮಂಡ್ಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್‌ನಲ್ಲಿ ವಿಚಾರಣಾ ಹಂತದಲ್ಲಿದ್ದು, ಅದರ ಪ್ರಕ್ರಿಯೆ ರದ್ದುಪಡಿಸಲು ಕೋರಿ ಆರೋಪಿ ಹೈಕೋರ್ಟ್‌ ಮೆಟ್ಟಿಲೇರಿದ್ದ.

ಇದನ್ನೂ ಓದಿ: ಪಾರ್ಟಿ ನೆಪದಲ್ಲಿ ಸ್ನೇಹಿತೆಯರ ಮೇಲೆ ಅತ್ಯಾಚಾರ ಯತ್ನ; ಬೆಂಗಳೂರಲ್ಲಿ ಆರೋಪಿಗಳ ಬಂಧನ

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಸಿ.ಎನ್.ರಾಜು, ಪ್ರಕರಣ ಸಂಬಂಧ ನ್ಯಾಯಾಂಗ ಬಂಧನ ಅನುಭವಿಸಿ ಜಾಮೀನು ಮೇಲೆ ಬಿಡುಗಡೆಯಾದ ಅರ್ಜಿದಾರನು ಸಂತ್ರಸ್ತೆಗೆ 18 ವರ್ಷ ತುಂಬಿದ ಮೇಲೆ 2021ರ ಮೇ 31ರಂದು ಮದುವೆಯಾಗಿದ್ದಾನೆ. ದಂಪತಿಗೆ 2022ರ ಜು.29ರಂದು ಗಂಡು ಮಗು ಜನಿಸಿದೆ. ಸದ್ಯ ಪತಿ-ಪತ್ನಿ ನೆಮ್ಮದಿ-ಸುಖದಿಂದ ಬದುಕುತ್ತಿದ್ದಾರೆ. ಅರ್ಜಿದಾರರ ಮೇಲಿನ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಸಂತ್ರಸ್ತೆಗೆ (ಪತ್ನಿ) ಯಾವುದೇ ತಕರಾರು ಇಲ್ಲ ಎಂದು ನ್ಯಾಯಾಲಯಕ್ಕೆ ವಿವರಿಸಿದರು. ಸರ್ಕಾರಿ ವಕೀಲರು ವಾದ ಮಂಡಿಸಿ, ತಂದೆಯ ಕಿರುಕುಳಕ್ಕೆ ಬೇಸತ್ತಿದ್ದ ಸಂತ್ರಸ್ತೆ ಅರ್ಜಿದಾರನೊಂದಿಗೆ ಸ್ವಯಂಪ್ರೇರಣೆಯಿಂದ ಮನೆಬಿಟ್ಟು ಹೋಗಿದ್ದರು. ಅರ್ಜಿದಾರ ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: ವಿಜಯಪುರದಲ್ಲಿ ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ ​.. ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.