ETV Bharat / state

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿದ್ದ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

author img

By

Published : Dec 17, 2022, 7:07 AM IST

ವಿಚಾರಣೆ ವೇಳೆ ಪ್ರತಿಕ್ರಿಯಿಸಿದ ಪೀಠ, ಒಂದು ವೇಳೆ ಶರಣರು ಜಾಮೀನು ಪಡೆದು ಹೊರಬಂದರೆ ಆಗ ಆಡಳಿತ ಬಿಟ್ಟುಕೊಡುತ್ತೀರಾ? ಎಂದು ಅಡ್ವೊಕೇಟ್ ಜನರಲ್ ಅವರನ್ನು ಪ್ರಶ್ನಿಸಿದೆ.

karnataka Highcourt
ಕರ್ನಾಟಕ ಹೈಕೋರ್ಟ್​

ಬೆಂಗಳೂರು: ಚಿತ್ರದುರ್ಗ ಮುರುಘಾಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್​ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಡಿ.ಎಸ್. ಮಲ್ಲಿಕಾರ್ಜುನ ಸೇರಿದಂತೆ ಮೂವರು ಸಲ್ಲಿಸಿದ್ದ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ನ್ಯಾಯಪೀಠ ಅಂತಿಮ ತೀರ್ಪು ಕಾಯ್ದಿರಿಸಿದೆ.

ಸಾವಿರಾರು ಕೋಟಿ ಆಸ್ತಿಗಳಿಗೆ ಹಾನಿ: ವಿಚಾರಣೆ ವೇಳೆ ಸರ್ಕಾರದ ಪರವಾಗಿ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಮುರುಘಾ ಮಠದ ಪೀಠಾಧಿಪತಿಗಳು, ಪೋಕ್ಸೊ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಇಂತಹ ಸಂದರ್ಭದಲ್ಲಿ ಅವರು ಜೈಲಿನಿಂದಲೇ ಮಠ ಮತ್ತು ವಿದ್ಯಾಸಂಸ್ಥೆಗಳ ಆಡಳಿತ ನಡೆಸುವುದಾದರೆ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಚರ ಮತ್ತು ಸ್ಥಿರಾಸ್ತಿಗೆ ಭಾರಿ ಹಾನಿಯುಂಟಾಗಲಿದೆ.

ಶಿವಮೂರ್ತಿ ಶರಣರು ಮಠ ಮತ್ತು ವಿದ್ಯಾಪೀಠಕ್ಕೆ ಏಕೈಕ (ಸೋಲ್) ಟ್ರಸ್ಟಿ ಮತ್ತು ಅಧ್ಯಕ್ಷರಾಗಿದ್ದಾರೆ. 2010ರ ನವೆಂಬರ್ 26ರಂದು ಟ್ರಸ್ಟ್ ಡೀಡ್ ನಿಗದಿಪಡಿಸಲಾಗಿದೆ. ಇದರಂತೆ ಮಠ ಮತ್ತು ವಿದ್ಯಾಪೀಠಗಳ ಆಡಳಿತದಲ್ಲಿ ಸಂಪೂರ್ಣ ಅವರು ಅಧಿಕಾರ ಹೊಂದಿದ್ದಾರೆ. ವಿದ್ಯಾಪೀಠದ ಅಡಿಯಲ್ಲಿ ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ 106 ವಿದ್ಯಾಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ.

ಇದನ್ನೂ ಓದಿ: ಮುರುಘಾ ಮಠ ಟ್ರಸ್ಟ್​ಗೆ ಆಡಳಿತಾಧಿಕಾರಿ ನೇಮಕ: ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ನೇಮಕ ಮಾಡಿ ಸರ್ಕಾರದ ಆದೇಶ

ಇಲ್ಲಿ ಸಾವಿರಾರು ನೌಕರರು ದುಡಿಯುತ್ತಿದ್ದಾರೆ. ಈ ಟ್ರಸ್ಟ್ ಸಾರ್ವಜನಿಕ ಟ್ರಸ್ಟ್ ಆಗಿದೆ. ಈ ನಡುವೆ ಶರಣರು ಜೈಲು ಸೇರಿರುವುದರಿಂದ ಅದನ್ನು ಸರ್ಕಾರ ರಕ್ಷಣೆ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿರುವುದರಿಂದ ದೈನಂದಿನ ಪೂಜಾ ಕೈಂಕರ್ಯ, ದಾಸೋಹ ಹಾಗೂ ಇತರೆ ಚಟುವಟಿಕೆಗಳಿಗೆ ಅಡ್ಡಿಯಾಗುವುದಿಲ್ಲ ಎಂದು ವಾದ ಮಂಡಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ಪೀಠ, ಒಂದು ವೇಳೆ ಶರಣರು ಜಾಮೀನು ಪಡೆದು ಹೊರಬಂದರೆ ಆಗ ಆಡಳಿತ ಬಿಟ್ಟುಕೊಡುತ್ತೀರಾ’ ಎಂದು ಅಡ್ವೊಕೇಟ್ ಜನರಲ್ ಅವರನ್ನು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಅವರು, ‘ರಾಜ್ಯದ ಮಠಗಳ ಇತಿಹಾಸದಲ್ಲೇ ಪೀಠಾಧಿಪತಿಯೊಬ್ಬರು ಇಂತಹ ಗಂಭೀರ ಪ್ರಕರಣ ಎದುರಿಸುತ್ತಿದ್ದಾರೆ. ಒಂದು ವೇಳೆ ಶರಣರಿಗೆ ಜಾಮೀನು ದೊರೆತದ್ದೇ ಆದರೆ, ಆಗ ಸರ್ಕಾರ ಈ ಅಂಶವನ್ನು ಪರಿಶೀಲಿಸಲಿದೆ’ ಎಂದು ವಿವರಿಸಿದರು.

ಅರ್ಜಿದಾರರ ಪರ ವಕೀಲರು, ‘ಸರ್ಕಾರ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿರುವುದು ಕಾನೂನು ಬಾಹಿರ. ಮಠಗಳ ಮೇಲೆ ನಿಯಂತ್ರಣ ಹೊಂದಲು ಕಾನೂನಿನಡಿ ಅವಕಾಶವಿಲ್ಲ. ಆದ್ದರಿಂದ ಈ ಪ್ರಕರಣದಲ್ಲಿ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಬೇಕು’ ಎಂದು ಕೋರಿದರು.

ಇದನ್ನೂ ಓದಿ: ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಹೈಕೋರ್ಟ್​ಗೆ​ ಅರ್ಜಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.