ETV Bharat / state

ಕೋರ್ಟ್ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಇರಿಸಲು ಹೈಕೋರ್ಟ್ ಸುತ್ತೋಲೆ

ಕೋರ್ಟ್ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಇರಿಸುವಂತೆ ಹೈಕೋರ್ಟ್ ಆದೇಶಿಸಿದೆ. ರಾಷ್ಟ್ರೀಯ ಹಬ್ಬಗಳಾದ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ‌ ಹಾಗೂ ಸಂವಿಧಾನ ದಿನಾಚರಣೆ ಸೇರಿದಂತೆ ನ್ಯಾಯಾಲಯಗಳ‌ ಅಧಿಕೃತ ಕಾರ್ಯಗಳಲ್ಲಿ ಭಾರತದ ಸಂವಿಧಾನ ಶಿಲ್ಪಿ‌ ಹಾಗೂ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇರಿಸುವ ಕುರಿತು ನಿರ್ಣಯ ಕೈಗೊಂಡಿದೆ.

High Court
ಕರ್ನಾಟಕ ಹೈಕೋರ್ಟ್
author img

By

Published : Feb 5, 2022, 11:15 AM IST

Updated : Feb 5, 2022, 12:32 PM IST

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಭಾವಚಿತ್ರವನ್ನು ನ್ಯಾಯಾಲಯಗಳ‌ ಎಲ್ಲ ಕಾರ್ಯಗಳಲ್ಲಿ ಇರಿಸುವಂತೆ ಹೈಕೋರ್ಟ್ ಆದೇಶಿಸಿದೆ. ಈ ಕುರಿತು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ ಶಿವಶಂಕರೇಗೌಡ ಅವರು ಸುತ್ತೋಲೆ ಹೊರಡಿಸಿದ್ದಾರೆ.

High Court Circular
ಹೈಕೋರ್ಟ್ ಸುತ್ತೋಲೆ

ಸುತ್ತೋಲೆಯಲ್ಲಿ, 2022ರ ಫೆಬ್ರವರಿ 4ರಂದು ಹೈಕೋರ್ಟ್ ಪೂರ್ಣ ಪೀಠವು ರಾಷ್ಟ್ರೀಯ ಹಬ್ಬಗಳಾದ ಗಣರಾಜ್ಯೋತ್ಸವ (ಜ.26), ಸ್ವಾತಂತ್ರ್ಯ ದಿನಾಚರಣೆ‌ (ಆ.15) ಹಾಗೂ ಸಂವಿಧಾನ ದಿನಾಚರಣೆ (ನ.26) ಸೇರಿದಂತೆ ನ್ಯಾಯಾಲಯಗಳ‌ ಅಧಿಕೃತ ಕಾರ್ಯಗಳಲ್ಲಿ ಭಾರತದ ಸಂವಿಧಾನ ಶಿಲ್ಪಿ‌ ಹಾಗೂ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ಇರಿಸುವ ಕುರಿತು ನಿರ್ಣಯ ಕೈಗೊಂಡಿದೆ. ಅದರಂತೆ ಹೈಕೋರ್ಟ್ ಬೆಂಗಳೂರು ಪ್ರಧಾನ ಪೀಠ, ಧಾರವಾಡ, ಕಲಬುರಗಿ ಪೀಠಗಳು ಒಳಗೊಂಡಂತೆ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಇರಿಸಬೇಕು ಎಂದು ತಿಳಿಸಲಾಗಿದೆ.

High Court Circular
ಹೈಕೋರ್ಟ್ ಸುತ್ತೋಲೆ

ಇದನ್ನೂ ಓದಿ: ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಆರೋಪ ಪ್ರಕರಣ: ನ್ಯಾಯಾಧೀಶರಿಂದ ವಿವರಣೆ ಕೇಳಿದ ಹೈಕೋರ್ಟ್

ನ್ಯಾಯಾಲಯಗಳ ಅಧಿಕೃತ ಕಾರ್ಯಗಳಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ಇರಿಸುವ ಕುರಿತು ಧಾರವಾಡ ಮತ್ತು ಕಲಬುರಗಿ ಪೀಠಗಳ ಹೆಚ್ಚುವರಿ ರಿಜಿಸ್ಟ್ರಾರ್ ಜನರಲ್‌ಗಳು ಮತ್ತು ಜಿಲ್ಲಾ ನ್ಯಾಯಾಲಯಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಪ್ರಧಾನ ಜಿಲ್ಲಾ ನ್ಯಾಯಾಧೀಶರು ಗಣರಾಜ್ಯೋತ್ಸವದ ದಿನದಂದು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಇರಿಸಲಾಗಿದ್ದ ಅಂಬೇಡ್ಕರರ ಭಾವಚಿತ್ರ ತೆಗೆಸಿದರು ಎಂಬ ವಿವಾದ ಇತ್ತೀಚಿಗೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು.

ಈ ವಿಚಾರವಾಗಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಅಂಬೇಡ್ಕರರ ಭಾವಚಿತ್ರವನ್ನು ರಾಜ್ಯದ ಎಲ್ಲಾ ನ್ಯಾಯಾಲಯಗಳ ಕೋರ್ಟ್ ಹಾಲ್​​ಗಳಲ್ಲಿ ತೂಗುಹಾಕುವಂತೆ ನಿರ್ದೇಶನ ಕೋರಿ ಇತ್ತೀಚೆಗೆ ಬೆಂಗಳೂರಿನ ವ್ಯಕ್ತಿಯೊಬ್ಬರು ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆಯಬೇಕಿದೆ.

ಇದನ್ನೂ ಓದಿ: ಎಲ್ಲ ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಫೋಟೋ ಅಳವಡಿಸುವಂತೆ ಹೈಕೋರ್ಟ್​ಗೆ ಅರ್ಜಿ

Last Updated : Feb 5, 2022, 12:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.