ETV Bharat / state

ಹೆಚ್ ಡಿ ದೇವೇಗೌಡರು ರಾಜ್ಯಸಭೆಯ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ: ಕುಮಾರಸ್ವಾಮಿ ಘೋಷಣೆ

ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ
author img

By

Published : Jun 8, 2020, 1:33 PM IST

ಬೆಂಗಳೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ದೇವೇಗೌಡ ಅವರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ನಾಳೆ ಅವರು ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಎಲ್ಲರ ಒಮ್ಮತದ ಅಭಿಪ್ರಾಯಕ್ಕೆ ಸಮ್ಮತಿಸಿದ ದೇವೇಗೌಡರಿಗೆ ಧನ್ಯವಾದಗಳು ಎಂದಿದ್ದಾರೆ.

  • ರಾಜಕೀಯದಲ್ಲಿ ಜನರಿಂದಲೇ ಗೆಲುವು ಸೋಲುಗಳನ್ನು ಕಂಡಿರುವ, ಜನರಿಂದಲೇ ದೇಶದ ಅತ್ಯುನ್ನತ ಸ್ಥಾನಕ್ಕೇರಿದ್ದ ಜನನಾಯಕ ದೇವೇಗೌಡರನ್ನು ರಾಜ್ಯಸಭೆ ಪ್ರವೇಶಿಸುವಂತೆ ಮನವೊಲಿಸುವುದು ಸುಲಭದ ಕೆಲಸವಾಗಿರಲಿಲ್ಲ. ಆದರೆ ಎಲ್ಲರ ಆಶೋತ್ತರಗಳಿಗೆ ಪ್ರೀತಿಪೂರ್ವಕವಾಗಿ ಮಣಿದಿದ್ದಾರೆ. ರಾಜ್ಯಸಭೆಯಲ್ಲಿ ದೇವೇಗೌಡರು ರಾಜ್ಯದ ಅಗ್ರ ಪ್ರತಿನಿಧಿಯಾಗಲಿದ್ದಾರೆ.

    — H D Kumaraswamy (@hd_kumaraswamy) June 8, 2020 " class="align-text-top noRightClick twitterSection" data=" ">

ರಾಜಕೀಯದಲ್ಲಿ ಜನರಿಂದಲೇ ಸೋಲು-ಗೆಲುವುಗಳನ್ನು ಕಂಡಿರುವ, ಜನರಿಂದಲೇ ದೇಶದ ಅತ್ಯುನ್ನತ ಸ್ಥಾನಕ್ಕೇರಿದ್ದ ಜನನಾಯಕ ದೇವೇಗೌಡರನ್ನು ರಾಜ್ಯಸಭೆ ಪ್ರವೇಶಿಸುವಂತೆ ಮನವೊಲಿಸುವುದು ಸುಲಭದ ಕೆಲಸವಾಗಿರಲಿಲ್ಲ. ಆದರೆ ಎಲ್ಲರ ಆಶೋತ್ತರಗಳಿಗೆ ಪ್ರೀತಿಪೂರ್ವಕವಾಗಿ ಮಣಿದಿದ್ದಾರೆ. ರಾಜ್ಯಸಭೆಯಲ್ಲಿ ದೇವೇಗೌಡರು ರಾಜ್ಯದ ಅಗ್ರ ಪ್ರತಿನಿಧಿಯಾಗಲಿದ್ದಾರೆ ಎಂದು ಹೆಚ್​ಡಿಕೆ ಮಾಹಿತಿ ತಿಳಿಸಿದ್ದಾರೆ.

ಈಗಾಗಲೇ ಕಾಂಗ್ರೆಸ್ ಪಕ್ಷ ಕೂಡ ತಾನು ಏಕೈಕ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ತಿಳಿಸಿದ್ದು, ಉಳಿದ ಮತಗಳನ್ನು ಜಾತ್ಯತೀತ ಅಭ್ಯರ್ಥಿಗೆ ನೀಡುತ್ತೇವೆ ಎಂದು ಹೇಳಿದೆ. ಈ ಹಿನ್ನೆಲೆ ರಾಜ್ಯಸಭೆ ಚುನಾವಣೆಯಲ್ಲಿ ದೇವೇಗೌಡರ ಗೆಲುವು ಕೂಡ ಬಹುತೇಕ ಖಚಿತವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.