ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ಸಂಸತ್ ಸದನಗಳಲ್ಲೊಂದಾದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಜೆಡಿಎಸ್ನಿಂದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ವಿಧಾನಸಭೆ ಸದಸ್ಯರು ಮತದಾರರಾಗಿರುವ ರಾಜ್ಯಸಭೆ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿ ಗೆಲ್ಲಲು ಕನಿಷ್ಠ 45 ಮತಗಳ ಅವಶ್ಯಕತೆ ಇದೆ. ಕಾಂಗ್ರೆಸ್ ಪಕ್ಷ ಸುಲಭವಾಗಿ ಒಬ್ಬರನ್ನು ರಾಜ್ಯಸಭೆಗೆ ಆಯ್ಕೆಮಾಡಬಹುದಾಗಿದೆ. ಉಳಿದಿರುವ ಹೆಚ್ಚುವರಿ ಮತಗಳನ್ನು ಮಾಜಿ ಪ್ರಧಾನಿ ದೇವೇಗೌಡರು ಜೆಡಇಎಸ್ನಿಂದ ಸ್ಪರ್ಧೆ ಮಾಡಿದರೆ ಅವರಿಗೆ ಮತ ನೀಡಲು ಕಾಂಗ್ರೆಸ್ ಹೈಕಮಾಂಡ್ ವಲಯದಲ್ಲಿ ಒಲವು ವ್ಯಕ್ತವಾಗಿದೆ ಎಂದು ಹೇಳಲಾಗಿದೆ.
ರಾಜ್ಯಸಭೆಗೆ ಕಾಂಗ್ರೆಸ್ನಿಂದ ಖರ್ಗೆ, ಜೆಡಿಎಸ್ನಿಂದ ದೇವೇಗೌಡ ಆಯ್ಕೆ ಬಹುತೇಕ ಖಚಿತ! - ಮಲ್ಲಿಕಾರ್ಜುನ್ ಖರ್ಗೆ
ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸೋನಿಯಾ ಗಾಂಧಿ ಜತೆ ಚರ್ಚಿಸಲು ಮಾಜಿ ಪ್ರಧಾನಿ ದೇವೇಗೌಡರು ಸದ್ಯದಲ್ಲಿಯೇ ದೆಹಲಿಗೆ ತೆರಳಲಿದ್ದಾರೆನ್ನಲಾಗಿದೆ.