ಬೆಂಗಳೂರು : ಬೇಲೂರು ಶಾಸಕ ಹಾಗೂ ಹಾಸನ ಜೆಡಿಎಸ್ ಜಿಲ್ಲಾಧ್ಯಕ್ಷ ಲಿಂಗೇಶ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಅವರು ಶೀಘ್ರ ಗುಣಮುಖವಾಗಲೆಂದು ಹೆಚ್.ಡಿ. ದೇವೇಗೌಡರು ಹಾರೈಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಲಿಂಗೇಶ್ ಅವರು ಕೊರೊನಾ ತಗುಲಿ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ಮನಸ್ಸಿಗೆ ನೋವುಂಟು ಮಾಡಿದೆ. ಅವರು ಶೀಘ್ರವಾಗಿ ಗುಣಮುಖವಾಗಿ ಎಂದಿನಂತೆ ಜನಸೇವೆಗೆ ಮರಳಲಿ ಎಂದು ಹಾರೈಸಿದ್ದಾರೆ.