ETV Bharat / state

ಡಿಕೆಶಿ, ಶಿವಲಿಂಗೇಗೌಡರಿಗೆ ಕೊರೊನಾ: ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ದೇವೇಗೌಡರು-ಕುಮಾರಸ್ವಾಮಿ

author img

By

Published : Aug 25, 2020, 5:30 PM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಕೊರೊನಾ ಸೋಂಕು ತಗುಲಿದೆ. ಇಬ್ಬರೂ ನಾಯಕರು ಶೀಘ್ರ ಗುಣಮುಖರಾಗಿ ಬರಲಿ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾರೈಸಿದ್ದಾರೆ.

Devegowda-kumaraswamy
Devegowda-kumaraswamy

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ, ಇಬ್ಬರೂ ನಾಯಕರು ಶೀಘ್ರ ಗುಣಮುಖರಾಗಿ ಬರಲಿ ಎಂದು ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡ ಹಾರೈಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರು ಹಾಗೂ ನನ್ನ ಆತ್ಮೀಯರಾದ ಡಿ.ಕೆ. ಶಿವಕುಮಾರ್ ಅವರಿಗೆ ಸೋಂಕು ದೃಢಪಟ್ಟ ವಿಚಾರ ಕೇಳಿ ಮನಸ್ಸಿಗೆ ಬಹಳ ನೋವುಂಟಾಯಿತು. ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಅದೇ ರೀತಿ ಹಾಸನ ಜೆಲ್ಲೆಯ ಅರಸೀಕೆರೆ ಕ್ಷೇತ್ರದ ನಮ್ಮ ಶಾಸಕರು ಹಾಗೂ ನನ್ನ ಸನ್ಮಿತ್ರರು ಆದ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಕೋವಿಡ್ ದೃಢಪಟ್ಟಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶೀಘ್ರವಾಗಿ ಗುಣಮುಖರಾಗಿ ಜನತೆಯ ಸೇವೆಗೆ ಮರಳಲಿ ಎಂದು ಹಾರೈಸಿದ್ದಾರೆ.

ಹೆಚ್ ಡಿಕೆ ಹಾರೈಕೆ: ಅರಸೀಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಶೀಘ್ರವೇ ಗುಣಮುಖರಾಗಿ ಜನರ ಸೇವೆಗೆ ಮರಳಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಶಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.