ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಕೆಲವು ನಿಮಿಷಗಳ ಹಿಂದೆ ನನ್ನೊಂದಿಗೆ ಮಾತನಾಡಿದರು. ಅವರು ಕೋವಿಡ್ ಕುರಿತು ನನ್ನ ಪತ್ರವನ್ನು ಎಚ್ಚರಿಕೆಯಿಂದ ಓದಿದ್ದಾರೆಂದು ಹೇಳಿದ್ದಾರೆ ಅಂತ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಈ ಕುರಿತು ಇಂದು ಟ್ವೀಟ್ ಮಾಡಿರುವ ದೇವೇಗೌಡರು, ಪ್ರಧಾನಿ ಅವರು ನನ್ನ ಸಲಹೆಗಳನ್ನು ಮುಂದೆ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಅವರ ಕಾಳಜಿ ಮತ್ತು ತ್ವರಿತ ಪ್ರತಿಕ್ರಿಯೆಗಾಗಿ ನಾನು ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿದ್ದಾರೆ.
ಸಾಂಕ್ರಾಮಿಕ ರೋಗವನ್ನು ಸೋಲಿಸಲು ನಾವು ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದು ಗೌಡರು ಹೇಳಿದ್ದಾರೆ.
ಇದನ್ನು ಓದಿ: ಪ್ರಧಾನಿಗೆ ಪತ್ರ ಬರೆದು ಕೋವಿಡ್ ನಿಯಂತ್ರಣಕ್ಕೆ ಸಲಹೆ ನೀಡಿದ ಹೆಚ್.ಡಿ ದೇವೇಗೌಡ
ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಗೆ ಹೆಚ್ಡಿಡಿ ಪತ್ರ ಬರೆದಿದ್ದು, ಒಂದು ವೇಳೆ ಸರ್ಕಾರ ಎಲ್ಲಾ ನಾಗರಿಕರಿಗೆ ಕೋವಿಡ್ ಲಸಿಕೆ ಉಚಿತವಾಗಿ ನೀಡುವುದಾದರೆ, ಅದೊಂದು ಅದ್ಭುತವಾದ ಮಾನವೀಯ ನಡೆ ಎಂದು ಉಲ್ಲೇಖಿಸಿದ್ದರು.