ETV Bharat / state

ದೇವೇಗೌಡರಿಗೆ ಭೀಷ್ಮಾಚಾರ್ಯರ ಗುಣವಿದೆ, ಭಗವಂತ ಅವರಿಗೆ ಆ ಶಕ್ತಿ ಕೊಟ್ಟಿದ್ದಾನೆ: ಹೆಚ್​ಡಿಕೆ - ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ

ದೇವೇಗೌಡರು ಇನ್ನೆಷ್ಟು ವರ್ಷ ಇರುತ್ತಾರೆ. ಅವರ ಕಾಲ ಮುಗಿಯಿತು ಅಂತ ಆಂತರಿಕವಾಗಿ ಕೆಲವರು ಮಾತನಾಡಿಕೊಂಡಿರುತ್ತಾರೆ. ಹಾಗಾಗಿ, ಕಾಂಗ್ರೆಸ್​ ನಾಯಕ ರಾಜಣ್ಣ ವೇದಿಕೆ ಮೇಲೆ ಅದನ್ನೇ ಬಾಯಿತಪ್ಪಿ ಹೇಳಿದ್ದಾರೆ ಅಷ್ಟೆ ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಹೇಳಿದರು.

hd-devegowda-has-bhishmacharya-quality-says-hd-kumaraswamy
ದೇವೇಗೌಡರಿಗೆ ಭೀಷ್ಮಾಚಾರ್ಯರ ಗುಣವಿದೆ, ಭಗವಂತ ಅವರಿಗೆ ಇನ್ನೂ ಶಕ್ತಿ ಕೊಟ್ಟಿದ್ದಾನೆ: ಕುಮಾರಸ್ವಾಮಿ
author img

By

Published : Jul 2, 2022, 3:16 PM IST

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್​ ಪಕ್ಷದ ವರಿಷ್ಠ ಹೆಚ್.ಡಿ. ದೇವೇಗೌಡರು ಭೀಷ್ಮಾಚಾರ್ಯ ಇದ್ದಂತೆ. ಅವರಿಗೆ ಸಾವು ಅನ್ನೋದು ಅವರು ಬಯಸಿದಾಗಲೇ ಬರುತ್ತದೆಯೇ ಹೊರತು, ಯಾರೋ ಏನೋ ಹೇಳಿದಾಗ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಾರ್ಮಿಕವಾಗಿ ಹೇಳಿದರು.

ಜೆಡಿಎಸ್​ ರಾಜ್ಯ ಕಚೇರಿ ಜೆಪಿ ಭವನದಲ್ಲಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್​​ನ್ನು ಅಧಿಕಾರಕ್ಕೆ ತರಲೇಬೇಕೆಂದು ದೇವೇಗೌಡರು ಶಪಥ ಮಾಡಿದ್ದಾರೆ. ಭೀಷ್ಮಾಚಾರ್ಯರ ಗುಣ ಅವರಿಗೆ ಇದೆ. ಅವರು ಬಯಸಿದಾಗ ಸಾವು ಬರುತ್ತದೆ. ಭಗವಂತ ಅವರಿಗೆ ಇನ್ನೂ ಶಕ್ತಿ ಕೊಟ್ಟಿದ್ದಾನೆ. ನಾನು ಅವರ ಭಾವನೆಗಳನ್ನು ಗಮನಿಸಿದ್ದೇನೆ. ಯಾವುದೇ ಕಾರಣಕ್ಕೂ ಅವರ ಆಯಸ್ಸಿನ ಮೇಲೆ ದುಷ್ಪರಿಣಾಮ ಬೀರುವುದಿಲ್ಲ. ಈ ಬಗ್ಗೆ ಚರ್ಚೆ ಮಾಡಿರುವ ವ್ಯಕ್ತಿಗಳ ಬಯಕೆ ಈಡೇರುವುದಿಲ್ಲ ಎಂದು ಟಾಂಗ್​ ಕೊಟ್ಟರು.

ದೇವೇಗೌಡರಿಗೆ ಭೀಷ್ಮಾಚಾರ್ಯರ ಗುಣವಿದೆ, ಭಗವಂತ ಅವರಿಗೆ ಇನ್ನೂ ಶಕ್ತಿ ಕೊಟ್ಟಿದ್ದಾನೆ: ಕುಮಾರಸ್ವಾಮಿ

ದೇವೇಗೌಡರ ಬಗ್ಗೆ ಮಾಜಿ ಶಾಸಕ ಕೆ ಎನ್​ ರಾಜಣ್ಣ ಹೇಳಿಕೆ ವಿಚಾರವಾಗಿ ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ, ಸಿದ್ದರಾಮಯ್ಯನವರ ಟೀಂನಲ್ಲಿ ಈ ಬಗ್ಗೆ ಚರ್ಚೆ ಆಗಿರುತ್ತದೆ. ದೇವೇಗೌಡರು ಇನ್ನೆಷ್ಟು ವರ್ಷ ಇರುತ್ತಾರೆ. ಅವರ ಕಾಲ ಮುಗಿಯಿತು ಅಂತ ಆಂತರಿಕವಾಗಿ ಮಾತನಾಡಿಕೊಂಡಿರುತ್ತಾರೆ. ಹಾಗಾಗಿ, ರಾಜಣ್ಣನವರು ವೇದಿಕೆ ಮೇಲೆ ಅದನ್ನೇ ಬಾಯಿತಪ್ಪಿ ಹೇಳಿದ್ದಾರೆ ಅಷ್ಟೇ ಎಂದು ದೂರಿದರು.

ಸಿದ್ದರಾಮಯ್ಯನವರನ್ನು ಬೆಳೆಸಿದ್ದು ಕಾಂಗ್ರೆಸ್ ಕಾರ್ಯಕರ್ತರಲ್ಲ. ಇಷ್ಟು ದೊಡ್ಡಮಟ್ಟಕ್ಕೆ ಬೆಳೆಯಲು ಜೆಡಿಎಸ್‍ ಕಾರ್ಯಕರ್ತರು ಕಾರಣ. ಅದನ್ನು ಅವರು ಅರ್ಥಮಾಡಿಕೊಳ್ಳಬೇಕು. ಅಲ್ಲದೇ, ಸಿದ್ದರಾಮಯ್ಯನವರ ಹುಟ್ಟುಹಬ್ಬದ ಕಾರ್ಯಕ್ರಮ ಕೆಡಿಸಬೇಕೆಂದು ಕುಮಾರಸ್ವಾಮಿ ಹುನ್ನಾರ ನಡೆಸಿದ್ದಾರೆಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಸಿದ್ದರಾಮಯ್ಯನವರ ಹುಟ್ಟುಹಬ್ಬದ ಕಾರ್ಯಕ್ರಮ ಅದು ಅವರ ವೈಯಕ್ತಿಕ ವಿಚಾರ. ನಮ್ಮ ಪಕ್ಷಕ್ಕೂ ಅದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೆಚ್​ಡಿಕೆ ಸ್ಪಷ್ಟಪಡಿಸಿದರು.

ದೇವೇಗೌಡರ ಕೊಡುಗೆ ಏನೆಂಬುದರ ಬಗ್ಗೆ ಅನೇಕ ಪುಸ್ತಕಗಳಲ್ಲಿ ಬರೆದಿದ್ದಾರೆ. ರಾಜಣ್ಣ ಹೇಳಿಕೆ ತಿರುಚಲಾಗಿದೆ ಎಂದು ಹೇಳುತ್ತಿದ್ದಾರೆ. ನನಗೆ ಸಿದ್ದರಾಮಯ್ಯನವರ ಮೇಲೆ ದ್ವೇಷ ಇಲ್ಲ. ನಾನು ಕಳೆದ ಒಂದು ತಿಂಗಳಲ್ಲಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಬಗ್ಗೆ ಪ್ರಸ್ತಾಪಿಸಿ ಮಾತನಾಡಿಲ್ಲ. ಸಿದ್ದರಾಮಯ್ಯನವರ ಜನ್ಮದಿನ ಕಾರ್ಯಕ್ರಮಕ್ಕೆ ನಾವ್ಯಾಕೆ ಆಕ್ಷೇಪ ಮಾಡೋಣ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಎಫ್ಐಆರ್ ರದ್ದುಕೋರಿ ಕೋರ್ಟ್ ಮೊರೆ‌ಹೋದ ನರೇಶ್, ಶ್ರವಣ್..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.