ETV Bharat / state

ರಾಜ್ಯ ಸರ್ಕಾರಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಸಲಹೆ ಏನು? - ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ

ರೈತರು, ಕೃಷಿ ಕಾರ್ಮಿಕರು, ದಿನಗೂಲಿ ನೌಕರರ ಅನುಕೂಲಕ್ಕಾಗಿ ಸರ್ಕಾರ ಕೈಗೊಳ್ಳಬೇಕಾಗಿರುವ ಕಾರ್ಯಸೂಚಿಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ರ ಮೂಲಕ ತಿಳಿಸಿದ್ದಾರೆ.

ಹೆಚ್.ಡಿ. ದೇವೇಗೌಡ
ಹೆಚ್.ಡಿ. ದೇವೇಗೌಡ
author img

By

Published : Apr 10, 2020, 3:21 PM IST

ಬೆಂಗಳೂರು : ಕೊರೊನಾ ವೈರಸ್​ನ ಸಂಕಷ್ಟದ ನಡುವೆ ಲಾಕ್​ಡೌನ್ ಮಾಡಿರುವ ಪರಿಣಾಮವಾಗಿ ರಾಜ್ಯ ಹಾಗೂ ದೇಶದ ರೈತರು ಕಂಗಾಲಾಗಿದ್ದಾರೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಹೇಳಿದರು.

ರೈತರು, ಕೃಷಿ ಕಾರ್ಮಿಕರು, ದಿನಗೂಲಿ ನೌಕರರ ಅನುಕೂಲಕ್ಕಾಗಿ ಸರ್ಕಾರ ಕೈಗೊಳ್ಳಬೇಕಾಗಿರುವ ಕಾರ್ಯಸೂಚಿಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಮೂಲಕ ತಿಳಿಸಿದ್ದಾರೆ. ನಿರ್ಲಕ್ಷ್ಯ ದಿಂದಾಗುವ ಅನಾಹುತಗಳಿಗೆ ಅವಕಾಶ ನೀಡಬಾರದು ಎಂದು ಸಲಹೆ ನೀಡಿದ್ದಾರೆ.

ಪ್ರತಿವರ್ಷ ತೋಟಗಾರಿಕಾ ಬೆಳೆ ವ್ಯಾಪ್ತಿ ಹೆಚ್ಚಾಗುತ್ತಿದೆ. ಲಾಕ್ ಡೌನ್ ಹಿನ್ನೆಲೆ ಮಾರುಕಟ್ಟೆ ಸಿಗದೇ ಬೆಳೆ ಬೆಳೆದ ರೈತರ ಬದುಕು ಉರಿಯುವ ಬೆಂಕಿಯಲ್ಲಿ ಬಿದ್ದಂತಾಗಿದೆ. ರೈತರ ಪಾಲಿಗೆ ಲಾಕ್​​​​​​​ಡೌನ್ ಆತುರದ ನಿರ್ಧಾರದಂತೆ ಕಾಣಿಸುತ್ತದೆ. ಮುಂದಾಲೋಚನೆ ಇಲ್ಲದೇ ತರಾತುರಿಯಲ್ಲಿ ಲಾಕ್ ಡೌನ್ ತೆಗೆದುಕೊಂಡಂತಾಗಿದೆ. ಇದರಿಂದಾಗಿ ರಾಜ್ಯ ಹಾಗೂ ದೇಶದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

DeveGowda Letter to CM
ಸಿಎಂ ಬಿಎಸ್​​ವೈಗೆ ಮಾಜಿ ಪ್ರಧಾನಿ ದೇವೇಗೌಡ ಪತ್ರ

ಲಾಕ್​​​​​ಡೌನ್ ವೇಳೆ ಗ್ರಾಮ ಮಟ್ಟದಲ್ಲೇ ಹಾಲು ಸಂಗ್ರಹಿಸುವಂತೆ, ತರಕಾರಿಯನ್ನು ಸರ್ಕಾರವೇ ಸಂಗ್ರಹಿಸಿ ಮಾರುಕಟ್ಟೆಗೆ ತರಬೇಕಿತ್ತು. ಹಾಪ್ ಕಾಮ್ಸ್, ಸಫಲ್, ನ್ಯಾಪೆಡ್, ಎಪಿಎಂಸಿ ಮೂಲಕ ತರಕಾರಿ‌ ಕೊಳ್ಳುವ ವ್ಯವಸ್ಥೆ ಮಾಡಬೇಕಿತ್ತು. ತರಕಾರಿ ಸಂಗ್ರಹಣೆ ಸಾಗಣೆ, ಮಾರಾಟ ನಿರ್ಬಂಧಿಸಬಾರದು. ಸಂಸ್ಕರಣಾ ಘಟಕಗಳಿಗೆ ಪೂರ್ಣ ವಿನಾಯತಿ‌ ನೀಡಬೇಕು. ದೇಶದ ಯಾವುದೇ ಪ್ರದೇಶಕ್ಕೆ ಅಡೆತಡೆಗಳಿಲ್ಲದೇ ಸಾಗಣೆಗೆ ಮತ್ತು ಮಾರಾಟಕ್ಕೆ ಅನುವು ಮಾಡಿಕೊಡಬೇಕು ಎಂದು ಪತ್ರದಲ್ಲಿ ಸಲಹೆ ಮಾಡಿದ್ದಾರೆ.

ತೋಟಗಾರಿಕಾ ಉತ್ಪನ್ನ ಮತ್ತು ಸಂಸ್ಕರಿಸಿದ ಪದಾರ್ಥಗಳ ರಫ್ತಿಗೆ ನಿರ್ಬಂಧ ಇರಬಾರದು. ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ವಿಧಿಸಿರಬಾರದು. ತರಕಾರಿ ಮಾರುಕಟ್ಟೆಗೆ ನ್ಯಾಷನಲ್ ಗ್ರಿಡ್ ರಚಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಪತ್ರದ ಮೂಲಕ‌ ದೇವೇಗೌಡರು ಸಲಹೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.