ETV Bharat / state

ಪಕ್ಷ ಬಲವರ್ಧನೆಗೆ ದೊಡ್ಡಗೌಡರ ರಣತಂತ್ರ... ಕಾರ್ಯಕರ್ತರೊಂದಿಗೆ ಸರಣಿ ಸಭೆ - ಚುನಾವಣೆ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ನಂತರ ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಜೆಡಿಎಸ್​ ವರಿಷ್ಠ ದೇವೇಗೌಡರು, ತಮ್ಮ ಪಕ್ಷವನ್ನು ಮತ್ತಷ್ಟು ಬಲಗೊಳಿಸುವ ಕಡೆ ಗಮನಹರಿಸಿದ್ದಾರೆ. ಹಾಗಾಗಿ, ಅಂದಿನಿಂದಲೂ ರಾಜ್ಯದ ಎಲ್ಲ ಜಿಲ್ಲೆಗಳ ಪಕ್ಷದ ಮುಖಂಡರು, ಕಾರ್ಯಕರ್ತರ ಸಭೆ ನಡೆಸುವ ಮೂಲಕ ಮುಂದಿನ ರಣತಂತ್ರವನ್ನು ರೂಪಿಸುತ್ತಿದ್ದಾರೆ.

ಹೆಚ್.ಡಿ.ದೇವೇಗೌಡ
author img

By

Published : Sep 20, 2019, 9:15 PM IST

ಬೆಂಗಳೂರು: ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದು ಮುಂದಿನ ಚುನಾವಣೆ ವೇಳೆಗೆ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಸಂಘಟಿಸಲೇಬೇಕೆಂದು ಪಣತೊಟ್ಟಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಸರಣಿ ಸಭೆ ಮುಂದುವರಿದಿವೆ.

ಕಾರ್ಯಕರ್ತರ ಜೊತೆ ಸಭೆ ನಡೆಸುತ್ತಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ನಂತರ ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಗೌಡರು, ತಮ್ಮ ಪಕ್ಷವನ್ನು ಮತ್ತಷ್ಟು ಬಲಗೊಳಿಸುವ ಕಡೆ ಗಮನಹರಿಸಿದ್ದಾರೆ. ಹಾಗಾಗಿ, ಅಂದಿನಿಂದಲೂ ರಾಜ್ಯದ ಎಲ್ಲ ಜಿಲ್ಲೆಗಳ ಪಕ್ಷದ ಮುಖಂಡರು, ಕಾರ್ಯಕರ್ತರ ಸಭೆ ನಡೆಸುವ ಮೂಲಕ ಮುಂದಿನ ರಣತಂತ್ರವನ್ನು ರೂಪಿಸುವಲ್ಲಿ ಮಗ್ನರಾಗಿದ್ದಾರೆ.

ಪಕ್ಷದ ಎಲ್ಲ ಘಟಕಗಳ ಸಭೆ ಕರೆದು ಚರ್ಚಿಸಿದ ನಂತರ ಖಾಲಿ ಉಳಿದಿದ್ದ ಮಹಿಳಾ ಘಟಕ, ಹಿಂದುಳಿದ ವರ್ಗ ಸೇರಿದಂತೆ ಹಲವು ಘಟಕಗಳಿಗೆ ನೇಮಕ ಮಾಡಿರುವ ದೇವೇಗೌಡರು, ಪಕ್ಷದ ಕಾರ್ಯ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದಾರೆ. ಮೈತ್ರಿ ಸರ್ಕಾರ ಪತನಕ್ಕೆ ಕಾರಣವಾಗಿರುವ 17 ಶಾಸಕರ ಕ್ಷೇತ್ರಗಳ ಉಪ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿರುವ ಅವರು, ಬರುವ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ, ಸೆ.16 ರಿಂದ ಸೆ.20 ರವರೆಗೆ ಎಲ್ಲ ಜಿಲ್ಲೆಗಳ ಜಿಲ್ಲಾವಾರು ಮುಖಂಡರ ಸಭೆ ನಡೆಸಿರುವ ದೊಡ್ಡಗೌಡರು, ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ.

ಇಂದೂ ಸಹ ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ ಜಿಲ್ಲೆಗಳ ಮುಖಂಡರ ಸಭೆ ನಡೆಸಿದ ಹೆಚ್​ಡಿಡಿ ಪಕ್ಷ ಸಂಘಟನೆ ಕುರಿತು ಹಲವಾರು ಸಲಹೆ-ಸೂಚನೆಗಳನ್ನು ನೀಡಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ಮುಖಂಡರ ಜೊತೆ ಸಭೆ ನಡೆಸುತ್ತಿದ್ದ ವೇಳೆ ಮಾತನಾಡಿದ ಅವರು, ರಾಜ್ಯದ 30 ಜಿಲ್ಲೆಗಳ ಮುಖಂಡರ ಸಭೆ ಇಂದಿಗೆ ಮುಕ್ತಾಯವಾಗಿದೆ. ಉತ್ತರ ಕರ್ನಾಟಕ ಭಾಗದ ನಾಲ್ಕು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು. ನಾಳೆಯಿಂದ ಬೇರೆ ಬೇರೆ ವಿಷಯಗಳ ಬಗ್ಗೆ ಮಾತನಾಡುತ್ತೇನೆ. ಇಂದು ಹಾವೇರಿ, ಗದಗ, ಉತ್ತರ ಕನ್ನಡ ಜಿಲ್ಲೆಗಳ ಮುಖಂಡ ಸಭೆ ನಡೆಸಿದ್ದೇನೆ ಎಂದು ತಿಳಿಸಿದ್ದಾರೆ.

Intro:ಬೆಂಗಳೂರು : ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದು ಮುಂದಿನ ಚುನಾವಣೆ ವೇಳೆಗೆ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಸಂಘಟಿಸಲೇಬೇಕೆಂದು ಪಣತೊಟ್ಟಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಸರಣಿ ಸಭೆ ಇಂದೂ ಸಹ ಮುಂದುವರಿದಿದೆ. Body:ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ನಂತರ ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಗೌಡರು, ತಮ್ಮ ಕನಸಿನ ಕೂಸು ಪಕ್ಷವನ್ನು ಮತ್ತಷ್ಟು ಬಲಗೊಳಿಸುವ ಕಡೆ ಗಮನಹರಿಸಿದ್ದರು. ಹಾಗಾಗಿ, ಅಂದಿನಿಂದಲೂ ರಾಜ್ಯದ ಎಲ್ಲ ಜಿಲ್ಲೆಗಳ ಪಕ್ಷದ ಮುಖಂಡರು, ಕಾರ್ಯಕರ್ತರ ಸಭೆ ನಡೆಸುವ ಮೂಲಕ ಮುಂದಿನ ರಣತಂತ್ರವನ್ನು ರೂಪಿಸುವಲ್ಲಿ ಮಗ್ನರಾಗಿದ್ದಾರೆ.
ಪಕ್ಷದ ಎಲ್ಲ ಘಟಕಗಳ ಸಭೆ ಕರೆದು ಚರ್ಚಿಸಿದ ನಂತರ ಖಾಲಿ ಉಳಿದಿದ್ದ ಮಹಿಳಾ ಘಟಕ, ಹಿಂದುಳಿದ ವರ್ಗ ಸೇರಿದಂತೆ ಹಲವು ಘಟಕಗಳಿಗೆ ನೇಮಕ ಮಾಡಿರುವ ದೇವೇಗೌಡರು, ಪಕ್ಷದ ಕಾರ್ಯ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದಾರೆ.
ಮೈತ್ರಿ ಸರ್ಕಾರ ಪತನಕ್ಕೆ ಕಾರಣವಾಗಿರುವ 17 ಶಾಸಕರ ಕ್ಷೇತ್ರಗಳ ಉಪ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿರುವ ಗೌಡರು, ಬರುವ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ತಯಾರು ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ, ಸೆ.16 ರಿಂದ ಸೆ.20 ರವರೆಗೆ ಎಲ್ಲ ಜಿಲ್ಲೆಗಳ ಜಿಲ್ಲಾವಾರು ಮುಖಂಡರ ಸಭೆ ನಡೆಸಿರುವ ದೊಡ್ಡಗೌಡರು, ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ.
ಇಂದೂ ಸಹ ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ ಜಿಲ್ಲೆಗಳ ಮುಖಂಡರ ಸಭೆ ನಡೆಸಿದ ದೇವೇಗೌಡರು ಪಕ್ಷ ಸಂಘಟನೆ ಕುರಿತು ಹಲವರು ಸಲಹೆ-ಸೂಚನೆಗಳನ್ನು ನೀಡಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ಮುಖಂಡರ ಜೊತೆ ಸಭೆ ನಡೆಸುತ್ತಿದ್ದ ವೇಳೆ ಮಾತನಾಡಿದ ಗೌಡರು, ರಾಜ್ಯದ 30 ಜಿಲ್ಲೆಗಳ ಮುಖಂಡರ ಸಭೆ ಇಂದಿಗೆ ಮುಕ್ತಾಯವಾಗಿದೆ. ಉತ್ತರ ಕರ್ನಾಟಕ ಭಾಗದ ನಾಲ್ಕು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ನಾಳೆಯಿಂದ ಬೇರೆ ಬೇರೆ ವಿಷಯಗಳ ಬಗ್ಗೆ ಮಾತನಾಡುತ್ತೇನೆ. ಇಂದು ಹಾವೇರಿ, ಗದಗ, ಉತ್ತರ ಕನ್ನಡ ಜಿಲ್ಲೆಗಳ ಮುಖಂಡ ಸಭೆ ನಡೆಸುತ್ತಿದ್ದೇನೆ ಎಂದು ತಿಳಿಸಿದರು.
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.