ಬೆಂಗಳೂರು: ಮಾಜಿ ಸಚಿವ, ಹಾಲಿ ಶಾಸಕ ಹೆಚ್.ಕೆ. ಪಾಟೀಲ್ ಅವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್ ಕೆ ಪಾಟೀಲ್ ಅವರು ಶೀಘ್ರ ಗುಣಮುಖರಾಗಲೆಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾರೈಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು "ಮಾಜಿ ಸಚಿವರು, ಶಾಸಕರು ಹಾಗೂ ನನ್ನ ಆತ್ಮೀಯರಾದ ಹೆಚ್.ಕೆ. ಪಾಟೀಲ್ ಕೊರೊನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಲಿ" ಎಂದು ಆಶಿಸಿದ್ದಾರೆ.