ETV Bharat / state

ಬಿಜೆಪಿ ಹಿಂದೆಬಿದ್ದು ಬೇಳೆ ಬೇಯಿಸಿಕೊಳ್ಳುವ ಪಕ್ಷ ಕಾಂಗ್ರೆಸ್​: ಹೆಚ್.ಡಿ.ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಟ್ವಿಟರ್​ ಮೂಲಕ ಕಾಂಗ್ರೆಸ್​ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದಾರೆ.

jds
ಹೆಚ್​ ಡಿ ಕುಮಾರಸ್ವಾಮಿ
author img

By

Published : Mar 30, 2023, 12:25 PM IST

ಬೆಂಗಳೂರು : ಕಾಂಗ್ರೆಸ್ ಕುಟಿಲತೆ, ಕಪಟತನದ ಕಾಮಾಲೆ ಕಾಯಿಲೆಯಿಂದ ಬಳಲುತ್ತಿದೆ. ಕೈ ಕೊಡುವ ಚಾಳಿ ರಾಜ್ಯ ಹಾಗೂ ಕೇಂದ್ರದ ಕಾಂಗ್ರೆಸ್ ಜನ್ಮಕ್ಕೆ ಅಂಟಿದ ಆಜನ್ಮ ಜಾಡ್ಯ. ಒಳಗೊಂದು ಮುಖ, ಹೊರಗೊಂದು ಮುಖವುಳ್ಳ ಮುಖೇಡಿ ಪಕ್ಷವೇ ಕಾಂಗ್ರೆಸ್. ಅಂಥ ಕಾಂಗ್ರೆಸ್, ಚುನಾವಣೆ ಹೊತ್ತಿಗೆ ಸುಳ್ಳುಗಳ ಸರಮಾಲೆಯನ್ನೇ ಪೋಣಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಕುಮಾರಸ್ವಾಮಿ ಟ್ವೀಟ್ ವಿವರ: ಪ್ರಧಾನಿಯಾಗಿದ್ದ ಕನ್ನಡದ ಹೆಮ್ಮೆಯ ಪುತ್ರನನ್ನು ಕೆಳಗೆಳೆದ ಕಿರಾತಕ ಪಕ್ಷ, ಜಾತ್ಯತೀತತೆ ಎನ್ನುತ್ತಲೇ ಜಾತಿಗಳ ನಡುವೆ ಕಿಚ್ಚಿಟ್ಟ ಸೋಗಲಾಡಿ ಪಕ್ಷ, ಅಹಿಂದ ಎನ್ನುತ್ತಲೇ ಬಿಜೆಪಿ ಹಿಂದೆಬಿದ್ದು ಬೇಳೆ ಬೇಯಿಸಿಕೊಳ್ಳುತ್ತಿರುವ ಪಕ್ಷ, ಅಂಥ ಕಳಂಕಿತ ಪಕ್ಷ ಜಾತ್ಯತೀತ ಜನತಾದಳದ ಜಾತ್ಯತೀತತೆ ಬಗ್ಗೆ ಕೀರಲು ದನಿಯಲ್ಲಿ ಕಿರುಚುತ್ತಿದೆ. ಇಡೀ ದೇಶದ ಉದ್ದಗಲಕ್ಕೂ ಜಾತ್ಯತೀತ ಪಕ್ಷಗಳ ಮಾರಣಹೋಮ ನಡೆಸಿ, ಈಗ ಅಳಿವು ಉಳಿವಿಗಾಗಿ ಅದೇ ಪ್ರಾದೇಶಿಕ ಪಕ್ಷಗಳ ಬಾಲವಾಗಿ ಉಸಿರಾಡುತ್ತಿದೆ ಕಾಂಗ್ರೆಸ್. ಇನ್ನೂ ಹಳೆಯ ಅಮಲಿನಲ್ಲಿಯೇ ತೇಲುತ್ತಿದೆ ಆ ಪಕ್ಷಕ್ಕೆ ವರ್ತಮಾನದ ವರ್ತನೆಯ ಅರಿವೇ ಇಲ್ಲ.

  • ಕಾಂಗ್ರೆಸ್ ಕುಟಿಲತೆ, ಕಪಟತನದ ಕಾಮಾಲೆ ಕಾಯಿಲೆಯಿಂದ ಬಳಲುತ್ತಿದೆ. ಕೈ ಕೊಡುವ ಚಾಳಿ @INCKarnataka , @INCIndia ಜನ್ಮಕ್ಕೆ ಅಂಟಿದ ಆಜನ್ಮ ಜಾಡ್ಯ. ಒಳಗೊಂದು ಮುಖ, ಹೊರಗೊಂದು ಮುಖವುಳ್ಳ ಮುಖೇಡಿ ಪಕ್ಷವೇ ಕಾಂಗ್ರೆಸ್. ಅಂಥ ಕಾಂಗ್ರೆಸ್, ಚುನಾವಣೆ ಹೊತ್ತಿಗೆ ಸುಳ್ಳುಗಳ ಸರಮಾಲೆಯನ್ನೇ ಪೋಣಿಸುತ್ತಿದೆ!! 1/11#ಕಾಮಾಲೆ_ಕಾಂಗ್ರೆಸ್

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 30, 2023 " class="align-text-top noRightClick twitterSection" data=" ">

ಈ ಕಾಂಗ್ರೆಸ್ ಮಹಾತ್ಮ ಗಾಂಧೀಜಿ ಅವರ ಕಾಲದ ಕಾಂಗ್ರೆಸ್ ಅಲ್ಲ, ಅಧಿಕಾರಕ್ಕಾಗಿ ಎಲ್ಲ ಅಡ್ಡದಾರಿ ಹಿಡಿದ ಪಕ್ಷ ಈ ಕಾಂಗ್ರೆಸ್, ಕಾಲಚಕ್ರಕ್ಕೆ ಸಿಲುಕಿ ಕೊರಗುತ್ತಾ ನೀತಿಗೆಟ್ಟ, ಲಜ್ಜೆಗೆಟ್ಟ, ಮತಿಗೆಟ್ಟ ಕಾಂಗ್ರೆಸ್, ಕರ್ನಾಟಕದಲ್ಲಿ ಮತಗೇಡಿ ಬಿಜೆಪಿಯ ಬಾಲಂಗೋಚಿ ಆಗಿರುವುದು ಸುಳ್ಳಾ ಎಂದು ಪ್ರಶ್ನಿಸಿದ್ದಾರೆ. ಸರ್ಕಾರಗಳ ಸುಪಾರಿ ಕಿಲ್ಲರ್ ಅವರನ್ನೇ ಪೋಷಿಸಿ ಪೊರೆಯುತ್ತಿರುವ, ಇನ್ನೊಬ್ಬರ ಬಗ್ಗೆ ಹೊಟ್ಟೆಕಿಚ್ಚು ಪಡುವ ಕೀಳುತನ ಎಂಬುದು ಕಾಂಗ್ರೆಸ್ ಪಕ್ಷಕ್ಕೆ ಅಂಟಿದ ಬಾಲಗ್ರಹ ಪೀಡೆ.

ಅಧಿಕೃತ ಪ್ರತಿಪಕ್ಷವಾಗಿ ಹಗರಣಗಳ ಆಡಂಬೋಲವಾದ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಯಕಶ್ಚಿತ್ ಒಂದು ದಾಖಲೆಯನ್ನೂ ಬಿಡುಗಡೆ ಮಾಡಲು ಯೋಗ್ಯತೆ ಇಲ್ಲದ ಪಕ್ಷ ಕಾಂಗ್ರೆಸ್. ಭ್ರಷ್ಟ ರಾಜ್ಯ ಬಿಜೆಪಿ ವಿರುದ್ಧ ಸರಣಿ ದಾಖಲೆಗಳನ್ನೇ ಇಟ್ಟ ಜೆಡಿಎಸ್, ಬಿಜೆಪಿ ಅಧಿಕಾರಸ್ಥರ ಸರಣಿ ಜೈಲು ಪರೇಡ್ ಗೆ ಕಾರಣವಾಗಿದ್ದು ಇತಿಹಾಸ. ಆಗ ಕಾಂಗ್ರೆಸ್ ಎಲ್ಲಿತ್ತು? ಅಂದು ಬಿಜೆಪಿ ಜೊತೆ ಹೊಂದಾಣಿಕೆ ಆಗಿದ್ದು ಸುಳ್ಳೇ? ಕದ್ದು, ಕಣ್ಮುಚ್ಚಿ ಹಾಲು ಕುಡಿದರೆ ಗೊತ್ತಾಗುವುದಿಲ್ಲವೇ? ಕಳ್ಳಬೆಕ್ಕಿನ ಕಥೆ ಬೇರೆ ಬಿಡಿಸಿ ಹೇಳಬೇಕೆ?.

ಜಗತ್ತಿಗೆ ಮಾದರಿಯಾದ ಭಾರತದ ಪ್ರಜಾಪ್ರಭುತ್ವಕ್ಕೆ ಶಾಶ್ವತ ಕಳಂಕ ಮೆತ್ತಿದ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಮಹೋನ್ನತ ಆಶಯಕ್ಕೆ ಕುಣಿಕೆ ಬಿಗಿದ ಆಪರೇಶನ್ ಕಮಲ ಎಂಬ ಬಿಜೆಪಿಯ ಅಸಹ್ಯದಲ್ಲಿ ಅಭ್ಯಂಜನ ಮಾಡಿದವರು ಯಾರಯ್ಯ?.‌ 2018ರಲ್ಲಿ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರ್ಕಾರದ ಹತ್ಯೆಗೆ ಸುಪಾರಿ ಸ್ವೀಕರಿಸಿದ 'ಸುಪಾರಿ ಸಿದ್ದಪುರುಷರು' ಯಾವ ಪಕ್ಷದವರು? ಕಲಾಪದಲ್ಲಿ ವೀರಾವೇಶ, ಕಲಾಪದಿಂದ ಕಾಲು ಹೊರಗಿಟ್ಟ ತಕ್ಷಣ ಅದು ಸಶೇಷ. ಇದಲ್ಲವೇ ಸ್ವಯಂ ಘೋಷಿತ ಸೆಕ್ಯೂಲರ್ ಪಕ್ಷದ ಭೂಷಣ? ಸತ್ಯವನ್ನೇ ಕೊಲ್ಲುವ ಹುಂಬತನ ಏಕೆ?.

2008ರ ಆಪರೇಷನ್ ಕಮಲದ ಉಪ ಚುನಾವಣೆ. ಕಾಂಗ್ರೆಸ್ ಅನ್ನು ಹಳ್ಳ ಹಿಡಿಸಿ ಖರ್ಗೆ ಅವರನ್ನು ಪ್ರತಿಪಕ್ಷ ಸ್ಥಾನದಿಂದ ಹೊರದಬ್ಬಲು ಬಿಎಸ್ ವೈ ಅವರ ಜೊತೆ ನೇರ ಡೀಲಿಗಿಳಿದು ಕೋಟಿ ಕೋಟಿ ಸುಪಾರಿ ಪಡೆದು ಇಡಗಂಟು ಮಾಡಿಕೊಂಡವರ ಬಗ್ಗೆ ಕಾಂಗ್ರೆಸ್ ಅಸಹನೀಯ ಮೌನವೇಕೆ? ಆಗ ಎಲ್ಲಿತ್ತು ಜಾತ್ಯತೀತತೆ? ಆ ದಲಿತ ನಾಯಕ ಮಾಡಿದ ಅನ್ಯಾಯವೇನು?.

ಧರ್ಮ, ಜಾತಿಗಳ ನಡುವೆ ವೈಷಮ್ಯದ ವಿಷಬೀಜ ಬಿತ್ತಿದ, ಹಗರಣಗಳಲ್ಲಿ ಮುಳುಗೇಳುತ್ತಿರುವ ಕಡುಕೆಟ್ಟ ಭ್ರಷ್ಟ ಈ ರಾಜ್ಯ ಸರ್ಕಾರ ಬರಲು ಕಾರಣರು ಯಾರಯ್ಯ? ಮೇಲೆ ಮಾತ್ರ ಜಾತ್ಯತೀತ, ಒಳಗೆ ಮಾತ್ರ ಎಲ್ಲಕ್ಕೂ ಅತೀತ! ಇದು ಯಾವ ಸೀಮೆಯ ತತ್ತ್ವ ಸಿದ್ದಾಂತ? ಇನ್ನೆಷ್ಟು ದಿನ ಈ ಟೋಪಿ ರಾಜಕಾರಣ?. ರಾಜಕೀಯದಲ್ಲಿ ಕಳ್ಳ ಸಂಸಾರ ಎನ್ನುವುದು ಕಾಂಗ್ರೆಸ್ ಪಕ್ಷದ ಆವಿಷ್ಕಾರ. ಅಷ್ಟೇ ಅಲ್ಲ, ಇನ್ನೊಬ್ಬರ ಕಳ್ಳ ಸಂಸಾರಕ್ಕೆ ಕೀಲಿ ಕೊಟ್ಟು ಮನೆಮುರುಕ ಕೆಲಸ ಮಾಡುವುದೂ ಕಾಂಗ್ರೆಸ್ ಖಯಾಲಿ. ಕರ್ನಾಟಕದಲ್ಲಿ ಬಿಜೆಪಿ- ಕಾಂಗ್ರೆಸ್ ಭಾಯಿ ಭಾಯಿ; ಇದೇ ಸತ್ಯ. ಅಲ್ಲ ಎನ್ನುವ ಅಚಲ ನೈತಿಕತೆ ಆ ಪಕ್ಷಕ್ಕೆ ಇದೆಯಾ ಎಂದೆಲ್ಲ ಹೆಚ್‌ಡಿಕೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಂದಿನಿ ಮೊಸರು ಪಾಕೆಟ್ ಮೇಲೆ 'ದಹಿ' ಪದ: ಹಿಂದಿ ಹೇರಿಕೆಯ ಅಹಂ ಬೇಡವೆಂದ ಹೆಚ್​ಡಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.