ETV Bharat / state

ಮತಕ್ಕಾಗಿ ಮರಣಮೃದಂಗ.. ಆಳ-ಅಗಲ ಈಗ ಜನರಿಗೂ ಅರ್ಥವಾಗುತ್ತಿದೆ: ಹೆಚ್​ಡಿಕೆ ಟ್ವೀಟ್​ - ಪ್ರವೀಣ್​ ನೆಟ್ಟಾರು ಹತ್ಯೆ ಕುರಿತು ಹೆಚ್​ಡಿ ಕುಮಾರಸ್ವಾಮಿ ಟ್ವೀಟ್​

ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ ಸರ್ಕಾರದ ಜನೋತ್ಸವ ರದ್ದು- ಈ ಕುರಿತು ಹೆಚ್​.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್​-ಬಿಜೆಪಿಗೆ ಮಧ್ಯರಾತ್ರಿ ಜ್ಞಾನೋದಯವಾಗಿದೆ ಎಂದು ಟೀಕೆ

KN_BNG_01_HDK_tweet_Script_7208083
ಹೆಚ್​ಡಿ ಕುಮಾರಸ್ವಾಮಿ
author img

By

Published : Jul 28, 2022, 12:18 PM IST

Updated : Jul 28, 2022, 12:30 PM IST

ಬೆಂಗಳೂರು: ಸಾವಿನ ಮನೆಯಲ್ಲಿ ಸಂಭ್ರಮಿಸುವ ವಿಕೃತಿ ಬೇಡವೆಂದು ನಾನು ಹೇಳಿದ್ದೆ. ಪಾಪ, ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಧ್ಯರಾತ್ರಿಯಲ್ಲೇ ಜ್ಞಾನೋದಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸಾವುಗಳನ್ನೇ ಸಾಧನೆಗಳನ್ನಾಗಿ ಮಾಡಿಕೊಂಡಿದೆ, ಸರ್ಕಾರದ ಕಾಳಜಿಯಲ್ಲಿ ಸಾಚಾತನವಿಲ್ಲ. ಸಾವಿನಲ್ಲೂ ಸಿಂಪಥಿ ಗಿಟ್ಟಿಸುವ ವ್ಯರ್ಥ ಪ್ರಯತ್ನ ವಾಕರಿಕೆ ತರಿಸುತ್ತದೆ. ಸಾಧನಾ ಸಮಾವೇಶ ನಿಂತಿತಲ್ಲ ಎನ್ನುವ ಹತಾಶೆ ಎದ್ದು ಕಾಣುತ್ತಿದೆ. ರಾಜ್ಯದಲ್ಲಿ ಸಾವುಗಳ ಮೆರವಣಿಗೆ ನಡೆಯುತ್ತಿರುವುದಷ್ಟೇ ಬಿಜೆಪಿ ಸರ್ಕಾರದ ವರ್ಷದ ಸಾಧನೆ ಎಂದು ಹರಿಹಾಯ್ದಿದ್ದಾರೆ.

  • ಸಾವಿನ ಮನೆಯಲ್ಲಿ ಸಂಭ್ರಮಿಸುವ ವಿಕೃತಿ ಬೇಡವೆಂದು ನಾನು ಹೇಳಿದ್ದೆ. ಪಾಪ.. ರಾಜ್ಯ ಬಿಜೆಪಿ ಸರಕಾರಕ್ಕೆ ಮಧ್ಯರಾತ್ರಿಯಲ್ಲೇ ಜ್ಞಾನೋದಯವಾಗಿದೆ.
    ʼಸಾವುಗಳನ್ನೇ ಸಾಧನೆʼಗಳನ್ನಾಗಿ ಮಾಡಿಕೊಂಡು, ಅವುಗಳನ್ನೇ ಅಧಿಕಾರದ ಏಣಿ ಮಾಡಿಕೊಂಡವರಿಗೆ ಅಂತೂ ಪಾಪಪ್ರಜ್ಞೆ ಕಾಡಿತಲ್ಲ ಎನ್ನುವ ಸಮಾಧಾನ, ಸರಕಾರ ಮುಖ ಉಳಿಸಿಕೊಂಡಿದೆ. 1/8

    — H D Kumaraswamy (@hd_kumaraswamy) July 28, 2022 " class="align-text-top noRightClick twitterSection" data=" ">

ಜಾತಿ, ಧರ್ಮ, ಆಚಾರ, ವಿಚಾರ, ಆಹಾರ, ವ್ಯಾಪಾರ, ಉಡುಗೆ-ತೊಡುಗೆ ನೆಪದಲ್ಲಿ ರಾಜ್ಯವನ್ನು ಭಾವನಾತ್ಮಕವಾಗಿ ಛಿದ್ರ ಛಿದ್ರ ಮಾಡಿದ್ದಾ ಸಾಧನೆ ತಿನ್ನುವ ಅನ್ನದಲ್ಲಿ, ಕಲಿಯುವ ಅಕ್ಷರದಲ್ಲಿ, ಉರಿಯುವ ಮನೆಯಲ್ಲಿ ಮತಕ್ಕಾಗಿ ಕೋಮುಗಳ ಇರಿಯುವುದಾ ಸಾಧನೆ?. ಇನ್ನೆಷ್ಟು ಯುವಕರ ಕಗ್ಗೊಲೆ ಆಗಬೇಕು? ಅದೆಷ್ಟು ಬಡಮನೆಗಳ ದೀಪಗಳು ಆರಬೇಕು? ಮತ್ತೆಷ್ಟು ಹೆತ್ತ ಕರುಳುಗಳು ಕಣ್ಣೀರಿಡಬೇಕು? ಹರ್ಷ, ಚಂದ್ರು ತಾಯಿಂದರ ಆರ್ತನಾದ ಸರ್ಕಾರಕ್ಕೆ ಕೇಳಿಸಿದ್ದರೆ ಪ್ರವೀಣ್ ನೆಟ್ಟಾರು ಅವರ ಅಮ್ಮನ ಆರ್ತನಾದ ಕೇಳುವ ಸ್ಥಿತಿ ಬರುತ್ತಿತ್ತಾ? ಕೊಲೆಯನ್ನೇ ತಡೆಯಲಾಗದೇ ಈಗ ʼಕೃತಕ ಸಾಂತ್ವನʼ ಹೇಳಿದರೇನು ಪ್ರಯೋಜನ? ಎಂದು ಹೆಚ್ ಡಿಕೆ ಸರಣಿ ಪ್ರಶ್ನೆಗಳನ್ನು ಸರ್ಕಾರಕ್ಕೆ ಕೇಳಿದ್ದಾರೆ.

  • ನಡುರಸ್ತೆಯಲ್ಲಿ ಹರಿದ ಪ್ರವೀಣ್ ನೆಟ್ಟಾರು ನೆತ್ತರು, ನಾಡಿನ ಆತ್ಮಸಾಕ್ಷಿಯನ್ನು ಕಲಕಿದೆ. ಒಂದೇ ಊರಿನಲ್ಲಿ ಎಂಟೇ ದಿನದಲ್ಲಿ 2 ಕೊಲೆ ನಡೆದಿವೆ ಎಂದರೆ ಈ ಸರಕಾರ ಬದುಕಿದೆಯಾ? ಸತ್ತಿದೆಯಾ? 7/8

ತಾಯಿಂದಿರ ಆರ್ತನಾದ ಸರ್ಕಾರದ ಕಿವಿಗೆ ಇಂಪಾದ ʼನಾದʼದಂತೆ ಕೇಳುತ್ತಿವೆಯಾ? ಬಿಜೆಪಿಯ ʼಮತಕ್ಕಾಗಿ ಮರಣಮೃದಂಗʼದ ಆಳ-ಅಗಲ ಈಗ ಜನರಿಗೂ ಅರ್ಥವಾಗುತ್ತಿದೆ. ಬಿಜೆಪಿ ಅಧ್ಯಕ್ಷರು ಸೇರಿ ಸಚಿವರಿಬ್ಬರಿಗೆ ಎದುರಾದ ಪ್ರತಿರೋಧವೇ ಜನರ ತಾಳ್ಮೆ ಕಟ್ಟೆಯೊಡೆದಿದೆ ಎನ್ನುವುದಕ್ಕೆ ಸಾಕ್ಷಿ. ಕರಾವಳಿ ಕೆರಳಿದೆ. ಕರ್ನಾಟಕ ಕೆರಳುವುದು ಬಾಕಿ ಇದೆ ಎಂದು ಹೇಳಿದ್ದಾರೆ.

  • ಸತ್ತ ಸರಕಾರದ ಸಾಹುಕಾರನಿಗೆ ಸಂಭ್ರಮದ ಚಿಂತೆ, ಆಗದ ಸಾಧನೆ ಹೇಳಿಕೊಳ್ಳುವ ಅನಿವಾರ್ಯತೆ..
    ಇನ್ನಾದರೂ ಕಂಡೋರ ಮಕ್ಕಳನ್ನು ಸಾವಿನ ದವಡೆಗೆ ನೂಕಿ ಮತ ಫಸಲು ತೆಗೆಯುವ ʼನರಹಂತಕ ರಾಜಕಾರಣʼ ನಿಲ್ಲಲಿ. 8/8#ಕರಾವಳಿ_ಕೆರಳಿದೆ

ಇದನ್ನೂ ಓದಿ: ಬಿಜೆಪಿ ಸಾಧನಾ ಸಮಾವೇಶ ರದ್ದು, ರಾಜ್ಯದಲ್ಲಿ ಭಯೋತ್ಪಾದಕ ನಿಗ್ರಹ ದಳ ರಚನೆಗೆ ಸರ್ಕಾರ ನಿರ್ಧಾರ

Last Updated : Jul 28, 2022, 12:30 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.