ETV Bharat / state

ಕಾಂಗ್ರೆಸ್ ಗಿಫ್ಟ್ ಕೂಪನ್ ಹಂಚಿದ್ದೇ ಪುತ್ರ ನಿಖಿಲ್ ಸೇರಿ ಹಲವರ ಸೋಲಿಗೆ ಕಾರಣ: ಕುಮಾರಸ್ವಾಮಿ ಆರೋಪ - ಈಟಿವಿ ಭಾರತ ಕನ್ನಡ

ಮತದಾನಕ್ಕೂ ಮುನ್ನ ಕಾಂಗ್ರೆಸ್ ಅಕ್ರಮವಾಗಿ ​​ಕ್ಯೂ ಆರ್​ ಕೋಡ್​ ಉಳ್ಳ ಕೋಪನ್​ಗಳನ್ನು ಹಂಚಿದ್ದೇ ಹಲವರ ಸೋಲಿಗೆ ಕಾರಣವಾಗಿದೆ ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಕಾಂಗ್ರೆಸ್​ ಹೆಚ್​ಡಿ ಕುಮಾರಸ್ವಾಮಿ ಆರೋಪ
ಕಾಂಗ್ರೆಸ್​ ಹೆಚ್​ಡಿ ಕುಮಾರಸ್ವಾಮಿ ಆರೋಪ
author img

By

Published : May 26, 2023, 8:25 PM IST

Updated : May 26, 2023, 8:47 PM IST

ಕಾಂಗ್ರೆಸ್​ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಆರೋಪ

ಬೆಂಗಳೂರು: ರಾಮನಗರದಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲಲು ಸುಳ್ಳು ಗ್ಯಾರಂಟಿಗಳ ಜತೆಗೆ ಅಕ್ರಮವಾಗಿ ಕೂಪನ್​ಗಳನ್ನು ಹಂಚಿದ್ದೇ ಕಾರಣ, ಇದೇ ರೀತಿ ರಾಜ್ಯದಲ್ಲಿ 45 ರಿಂದ 50 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು ಅಕ್ರಮವಾಗಿ ಗೆದ್ದಿದೆ ಎಂದು ನೇರ ಆರೋಪ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮಿಸ್ಟರ್ ಸಿದ್ದರಾಮಯ್ಯ ಧೈರ್ಯ ಇದ್ದರೆ ಈ ಅಕ್ರಮವನ್ನು ತನಿಖೆಗೆ ಒಳಪಡಿಸಿ ಎಂದು ಆಗ್ರಹಿಸಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಸೋಲಿಗೆ ಕಾಂಗ್ರೆಸ್ ಪಕ್ಷವು ಮತದಾನಕ್ಕೆ ಕೆಲವೇ ಗಂಟೆಗಳ ಮುನ್ನ ಹಂಚಿದ ಕ್ಯೂ ಆರ್ ಕೊಡುಗಳುಳ್ಳ ಗಿಫ್ಟ್​ ಕೂಪನ್​ಗಳೇ ಕಾರಣ. ಇದು ಗಂಭೀರ ಸ್ವರೂಪದ ಚುನಾವಣೆ ಅಕ್ರಮ, ಮೂರು ಸಾವಿರ ಹಾಗೂ ಐದು ಸಾವಿರ ಮೊತ್ತದ ಕ್ಯೂ ಆರ್ ಕೋಡ್​ಗಳನ್ನು ಹೊಂದಿರುವ ಕೂಪನ್​ಗಳನ್ನು ಮತದಾನಕ್ಕೆ ಕೆಲವೇ ಗಂಟೆಗಳ ಮುನ್ನ ಮತದಾರರಿಗೆ ಹಂಚಲಾಯಿತು. ಈ ಕೂಪನ್​ಗಳಿಂದಲೇ ನಾವು ಸೋಲಬೇಕಾಯಿತು. ಕಾಂಗ್ರೆಸ್ ಅಕ್ರಮವಾಗಿ ಗೆದ್ದಿದೆ. ಈ ಬಗ್ಗೆ ತನಿಖೆ ಮಾಡಿಸುತ್ತೀರಾ ಸಿದ್ದರಾಮಯ್ಯ ಎಂದು ಮಾಜಿ ಮುಖ್ಯಮಂತ್ರಿ ಕಿಡಿಕಾರಿದರು.

ಹೀಗೆ ಕೂಪನ್​ಗಳನ್ನು ಹಂಚಲು ಕಾಂಗ್ರೆಸ್ ಅಭ್ಯರ್ಥಿಗಳು ಹಣ ಎಲ್ಲಿಂದ ತಂದರು? ಕಾಂಗ್ರೆಸ್ ಅಭ್ಯರ್ಥಿ ಗೆದ್ದರಷ್ಟೇ ಈ ಕೂಪನ್ ನಗದಾಗುತ್ತದೆ. ಆಗ ಕೂಪನ್ ಹೊಂದಿರುವವರು ನಿಗದಿತ ಮಾಲ್ ಅಥವಾ ಅಂಗಡಿಗೆ ಹೋಗಿ ಕೂಪನ್​ನಲ್ಲಿ ನಿಗದಿತ ಮೊತ್ತದ ವಸ್ತುಗಳನ್ನು ಖರೀದಿ ಮಾಡಬಹುದು ಎಂದು ಆಮಿಷ ಒಡ್ಡಲಾಗಿದೆ. ಇದು ಚುನಾವಣೆಯ ಮಹಾ ಅಕ್ರಮ. ಈ ಚುನಾವಣೆ ಆಯೋಗ ತನಿಖೆ ಮಾಡಬೇಕು ಎಂದು ಒತ್ತಾಯ ಮಾಡಿದರು. ಬಿಜೆಪಿ ಸರ್ಕಾರದ ಅಕ್ರಮಗಳನ್ನು ತನಿಖೆ ಮಾಡಿಸುವೆ ಎಂದು ಹೇಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ಈ ಕೂಪನ್ ಅಕ್ರಮದ ಬಗ್ಗೆ ತನಿಖೆ ಮಾಡಿಸಬೇಕು ಎಂದರು.

ಪ್ರಜಾಪ್ರಭುತ್ವದಲ್ಲಿ ಗೆಲುವು ಗೆಲುವೇ. ಆದರೆ, ಮಹಾತ್ಮ ಗಾಂಧೀಜಿ ಹೆಸರು ಹೇಳುವ, ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಎಂದು ಬಡಾಯಿ ಕೊಚ್ಚಿಕೊಳ್ಳುವ ಕಾಂಗ್ರೆಸ್ ಅತ್ಯಂತ ಕೀಳು ಕೆಲಸ ಮಾಡಿದೆ. ಆ ಪಕ್ಷಕ್ಕೆ ನೈತಿಕತೆ ಎನ್ನುವುದು ಇದೆಯಾ ಎಂದು ಪ್ರಶ್ನೆ ಮಾಡಿದರು.

ನಾನು ಹೇಳಿದ್ದೇನು?: ನನಗೆ 123 ಸೀಟು ಬಂದು ಪಂಚರತ್ನ ಯೋಜನೆಗಳನ್ನು ಜಾರಿ ಮಾಡದಿದ್ದರೆ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ ಎಂದು ಹೇಳಿದ್ದೆ. ಆ ಹೇಳಿಕೆ ಕಾಂಗ್ರೆಸ್ ನಾಯಕರಿಗೆ ಬೇರೆ ರೀತಿ ಕೇಳಿಸಿದೆ. ಒಮ್ಮೆ ಅವರು ನನ್ನ ಹೇಳಿಕೆಯನ್ನು ಮತ್ತೆ ಕೇಳಿಸಿಕೊಳ್ಳಲಿ. ನಾನು ಹೇಳಿದ್ದು ಏನು ಎಂಬುದು ಅರ್ಥ ಆಗುತ್ತದೆ. ಅವರಂಥ ಕುತಂತ್ರದ ರಾಜಕಾರಣ ಮಾಡಿ, ನಾವು ಪಕ್ಷ ಕಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೇಗೆ ಗೆದ್ದರು ಅನ್ನೋದಕ್ಕಿಂತ ಒಟ್ಟಾರೆ ಗೆದ್ದರು ಅನ್ನುವುದೇ ಮುಖ್ಯ. ಈ ನಾಡಿನ ಜನರ ಮುಂದೆ ಮನವಿ ಮಾಡ್ತೀನಿ. ಒಪ್ಪತ್ತು ಹೊತ್ತಿನ ಊಟದ ಆಸೆಗೆ ನಿಮ್ಮ ಮುಂದಿನ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ. ಒಂದೆರಡು ಸಾವಿರ ಹಣದಿಂದ ನಿಮ್ಮ ಬದುಕು ಸರಿ ಹೋಗುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ ಬಹಿಷ್ಕರಿಸಿದ್ದು ಜೆಡಿಎಸ್​ ಮರೆಯಬಾರದು ಎಂದ ಡಿಕೆಶಿ.. ನಾವು ಕಾಂಗ್ರೆಸ್‌ನ ಗುಲಾಮರಲ್ಲ ಎಂದ ಹೆಚ್​ಡಿಕೆ!

Last Updated : May 26, 2023, 8:47 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.