ಬೆಂಗಳೂರು: ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ ರಾಜ್ಯ ಕಾಂಗ್ರೆಸ್ ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ ಎಂದು ತಿರುಗೇಟು ನೀಡಿದ್ದಾರೆ.
-
ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 14, 2023 " class="align-text-top noRightClick twitterSection" data="
">ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 14, 2023ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 14, 2023
ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ ಎಂದು ಹೆಚ್ಡಿಕೆ ಸವಾಲು ಹಾಕಿದ್ದಾರೆ.
ಕಾಂಗ್ರೆಸ್ ಆರೋಪ : ಇದಕ್ಕೂ ಮುನ್ನ ಕಾಂಗ್ರೆಸ್ ಎಕ್ಸ್ನಲ್ಲಿ ಪೋಸ್ಟ್ ಮಾಡಿ, ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ! ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
-
ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ.
— Karnataka Congress (@INCKarnataka) November 14, 2023 " class="align-text-top noRightClick twitterSection" data="
ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ!@hd_kumaraswamy ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್… pic.twitter.com/7GKHeRyQuS
">ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ.
— Karnataka Congress (@INCKarnataka) November 14, 2023
ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ!@hd_kumaraswamy ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್… pic.twitter.com/7GKHeRyQuSಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ.
— Karnataka Congress (@INCKarnataka) November 14, 2023
ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ!@hd_kumaraswamy ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್… pic.twitter.com/7GKHeRyQuS
ಹೆಚ್.ಡಿ.ಕುಮಾರಸ್ವಾಮಿ ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ! ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ. ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್ ಗಳಿವೆಯಲ್ಲವೇ!. ರಾಜ್ಯದಲ್ಲಿ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು ಇಂತಹ ಮಟ್ಟಕ್ಕೆ ಇಳಿಯುವಷ್ಟು ಬರ ಎದುರಿಸುತ್ತಿದ್ದೀರಾ? ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಅದೇನೋ ಮಾಧ್ಯಮಗೋಷ್ಟಿ ನಡೆಸಿ 'ಕರ್ನಾಟಕ ಕತ್ತಲಲ್ಲಿದೆ' ಎನ್ನುತ್ತಾ ಬಡಬಡಿಸಿದ್ದಿರಲ್ಲವೇ, ಈಗ ಕದ್ದ ವಿದ್ಯುತ್ತಿನಲ್ಲಿ ನಿಮ್ಮ ಮನೆಗೆ ಬೆಳಕು ಮಾಡಿಕೊಂಡಿದ್ದೀರಿ, ನಿಮ್ಮ ಮನೆ ಹೀಗೆ ಜಗಮಗ ಹೊಳೆಯುತ್ತಿರುವಾಗ ಅದ್ಯಾವ ಬಾಯಲ್ಲಿ ಕರ್ನಾಟಕ ಕತ್ತಲಲ್ಲಿದೆ ಎನ್ನುವಿರಿ ಸ್ವಾಮಿ?! ನಿಮ್ಮದೇ ಶೈಲಿಯ ಪ್ರಶ್ನೆ ಕೇಳಬೇಕೆಂದರೆ, ರಾಜ್ಯ ಬರ ಎದುರಿಸುತ್ತಿರುವಾಗ ನಿಮ್ಮ ಮನೆ ಮಾತ್ರ ಜಗಮಗಿಸಬೇಕೆ? ರೈತರ ಪಾಲಿನ ವಿದ್ಯುತ್ ಕಳ್ಳತನ ಮಾಡಿ ಮೋಜು ಮಾಡಬೇಕೆ?, ನಿಮ್ಮ ಮನೆಯ ದೀಪಾವಳಿಗೆ ರಾಜ್ಯದ ಜನರ “ದಿವಾಳಿ”ಯನ್ನು ಬಯಸುತ್ತಿದ್ದೀರಾ. ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು? ಎಂದು ಕಾಂಗ್ರೆಸ್ ಪೋಸ್ಟ್ನಲ್ಲಿ ವಾಗ್ದಾಳಿ ನಡೆಸಿದೆ.
ಇದನ್ನೂ ಓದಿ: ಹೆಚ್ಎಸ್ಆರ್ಪಿ ಅಳವಡಿಕೆ ಸಮಯ ವಿಸ್ತರಣೆ: ಫೆ. 17ರ ವರೆಗೆ ಅವಕಾಶಕ್ಕೆ ಸಾರಿಗೆ ಇಲಾಖೆ ನಿರ್ಧಾರ
ವೈಎಸ್ಟಿ, ಎಸ್ಎಸ್ಟಿ ಟ್ಯಾಕ್ಸ್: ಹೆಚ್ಡಿಕೆ ಆರೋಪ
-
ಸನ್ಮಾನ್ಯ @siddaramaiah ನವರೇ.. ನೀವು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ. ಐಶಾರಾಮಿಯಾದ ನೀವು ಮೇಲೆ 'ಸರಳರಾಮಯ್ಯ! ಒಳಗೆ ಐಶಾರಾಮಯ್ಯ!!' ಹೌದಲ್ಲವೇ?
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 14, 2023 " class="align-text-top noRightClick twitterSection" data="
ನಾನು ಹೇಳಿದ್ದನ್ನೇಕೆ ತಿರುಚುತ್ತೀರಿ? ಗ್ಯಾರಂಟಿಗಳ ಬಗ್ಗೆ ನನಗೇಕೆ ಹೊಟ್ಟೆಯುರಿ? ನಾನು ಹೇಳಿದ್ದೇನು? ನೀವು ವಕ್ರೀಕರಿಸುತ್ತಿರುವುದೇನು? ಕಾಸು ಕೊಟ್ಟು ಸಮೀಕ್ಷೆ ಮಾಡಿಸಿಕೊಂಡ…
">ಸನ್ಮಾನ್ಯ @siddaramaiah ನವರೇ.. ನೀವು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ. ಐಶಾರಾಮಿಯಾದ ನೀವು ಮೇಲೆ 'ಸರಳರಾಮಯ್ಯ! ಒಳಗೆ ಐಶಾರಾಮಯ್ಯ!!' ಹೌದಲ್ಲವೇ?
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 14, 2023
ನಾನು ಹೇಳಿದ್ದನ್ನೇಕೆ ತಿರುಚುತ್ತೀರಿ? ಗ್ಯಾರಂಟಿಗಳ ಬಗ್ಗೆ ನನಗೇಕೆ ಹೊಟ್ಟೆಯುರಿ? ನಾನು ಹೇಳಿದ್ದೇನು? ನೀವು ವಕ್ರೀಕರಿಸುತ್ತಿರುವುದೇನು? ಕಾಸು ಕೊಟ್ಟು ಸಮೀಕ್ಷೆ ಮಾಡಿಸಿಕೊಂಡ…ಸನ್ಮಾನ್ಯ @siddaramaiah ನವರೇ.. ನೀವು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ. ಐಶಾರಾಮಿಯಾದ ನೀವು ಮೇಲೆ 'ಸರಳರಾಮಯ್ಯ! ಒಳಗೆ ಐಶಾರಾಮಯ್ಯ!!' ಹೌದಲ್ಲವೇ?
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 14, 2023
ನಾನು ಹೇಳಿದ್ದನ್ನೇಕೆ ತಿರುಚುತ್ತೀರಿ? ಗ್ಯಾರಂಟಿಗಳ ಬಗ್ಗೆ ನನಗೇಕೆ ಹೊಟ್ಟೆಯುರಿ? ನಾನು ಹೇಳಿದ್ದೇನು? ನೀವು ವಕ್ರೀಕರಿಸುತ್ತಿರುವುದೇನು? ಕಾಸು ಕೊಟ್ಟು ಸಮೀಕ್ಷೆ ಮಾಡಿಸಿಕೊಂಡ…
ಸಿದ್ದರಾಮಯ್ಯನವರೇ ನೀವು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ. ಐಶಾರಾಮಿಯಾದ ನೀವು ಮೇಲೆ 'ಸರಳರಾಮಯ್ಯ! ಒಳಗೆ ಐಶಾರಾಮಯ್ಯ!!' ಹೌದಲ್ಲವೇ? ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಕಿಡಿಕಾರಿದರು. ಐದು ಗ್ಯಾರಂಟಿ ಕೊಟ್ಟಿದ್ದೀರಿ. ಅದನ್ನು ನೆಟ್ಟಗೆ ಕೊಡಲು ವಿಫಲರಾಗಿದ್ದೀರಿ ಎಂದಿದ್ದೇನೆ. ಇಲ್ಲವೆಂದರೆ ಹೇಳಿ, ಬಹಿರಂಗ ಚರ್ಚೆಗೇ ಬರುತ್ತೇನೆ. ಎಲ್ಲಿಗೆ ಬರಲಿ? ಎಂದು ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.
ನನ್ನ ದನಿ ಬಡವರ ಪರ. ನಿಮ್ಮಂತೆ ಯಾರ ಮುಲಾಜಿಗೂ ಬಿದ್ದವನಲ್ಲ ನಾನು. ರಾಜ್ಯಕ್ಕೆ ರಾಜ್ಯವೇ ಬರದ ಬೆಂಕಿಯಲ್ಲಿ ಬೇಯುತ್ತಿದೆ. ರೈತಸಂಕುಲ ನರಕದಲ್ಲಿದೆ. ಅವರ ಸಾಲಮನ್ನಾ ಮಾಡಿ. #YstTax, #SstTax ಕಲೆಕ್ಷನ್ ಬದಿಗಿಟ್ಟು ರೈತರ ಪರ ನಿಲ್ಲಿ. ಗ್ಯಾರಂಟಿ ಗ್ಯಾರಂಟಿ ಎನ್ನುತ್ತಿದ್ದೀರಲ್ಲ, ರೈತರ ಬದುಕಿಗೆ ಗ್ಯಾರಂಟಿ ಕೊಡಿ. ನಾನು ಸಾಲಮನ್ನಾ ಮಾಡಿ ತೋರಿಸಿದ್ದೇನೆ, ಈಗ ನೀವು ಮಾಡಿ. ಬರೀ ಬಾಯಿ ಮಾತೇಕೆ? ಎಂದು ಹೆಚ್ಡಿಕೆ ಸವಾಲೆಸದಿದ್ದಾರೆ.
ಇದನ್ನೂ ಓದಿ: ಪದಗ್ರಹಣ ಸಮಾರಂಭಕ್ಕೆ ವಿಶೇಷ ಸಿದ್ಧತೆ ಇಲ್ಲ: ಬಿ ವೈ ವಿಜಯೇಂದ್ರ