ETV Bharat / state

ಚಂದಮಾಮ ತೋರಿಸಿದ ಪ್ರಧಾನಿ ಮೋದಿ: ಕುಮಾರಸ್ವಾಮಿ ಕಿಡಿ

ರಾಜ್ಯದ ಖಜಾನೆ ಖಾಲಿಯಾಗಿದೆ, ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಧಾನಿ ವಿರುದ್ಧ ಟ್ವೀಟ್ ಮೂಲಕ ತೀವ್ರ ವಾಗ್ದಾಳಿ ನಡೆಸಿದ್ದಾರೆ.

HD Kumaraswamy expressed his outrage against the PM Modi
ಚಂದಮಾಮ ತೋರಿಸಿದ ಪ್ರಧಾನಿ ಮೋದಿ : ಕುಮಾರಸ್ವಾಮಿ ಕಿಡಿ
author img

By

Published : Jan 2, 2020, 4:14 PM IST

Updated : Jan 2, 2020, 4:26 PM IST

ಬೆಂಗಳೂರು: ರಾಜ್ಯದ ಖಜಾನೆ ಖಾಲಿಯಾಗಿದೆ, ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಧಾನಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ಮುದ್ರಾಂಕ ಮತ್ತು ನೋಂದಣಿ, ಮೋಟಾರು ವಾಹನ ಕ್ಷೇತ್ರ, ವಾಣಿಜ್ಯ ತೆರಿಗೆ ಬಹುದೊಡ್ಡ ಆದಾಯದ ಮೂಲವಾದರೂ ಅವುಗಳಿಂದ ಸಂಪನ್ಮೂಲ ಬಂದಿಲ್ಲ, ಅದಕ್ಕೆ ಕಾರಣವೇನು? ಕೇಂದ್ರದ ಕೆಟ್ಟ ಆರ್ಥಿಕ‌ ನೀತಿ, ಜಿಡಿಪಿ, ದೇಶದ ಅಭಿವೃದ್ಧಿ ನುಂಗಿದ ಕೇಂದ್ರದ ನೀತಿಗಳು ಈಗ ರಾಜ್ಯದ ಮೇಲೂ ಪರಿಣಾಮ ಬೀರಿದೆ ಎಂದು ಕಿಡಿಕಾರಿದ್ದಾರೆ.

ತೆರಿಗೆಯಲ್ಲಿ ರಾಜ್ಯಕ್ಕೆ ನೀಡಬೇಕಾದ ಪಾಲನ್ನೂ ಕೇಂದ್ರ ವಂಚಿಸಿದೆ‌, ರಾಜ್ಯಕ್ಕೆ ಬರಬೇಕಿದ್ದ ಪಾಲಿನಲ್ಲಿ ಶೇ. 5.44 ರಷ್ಟು ಇನ್ನೂ ಬಂದಿಲ್ಲ. ಇದು ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ಕೇಂದ್ರದ ಮಲತಾಯಿ ಧೋರಣೆ. ಲೋಕಸಭೆ ಸ್ಥಾನಗಳ ಮೇಲೆ ಮಾತ್ರ ಕಣ್ಣಿಡುವ ಕೇಂದ್ರ ಇಲ್ಲಿನ ಬೇಕು ಬೇಡಗಳನ್ನು ನಿರ್ಲಕ್ಷಿಸುತ್ತದೆ. ಮೋದಿ ಈ ಬಗ್ಗೆ ತುಮಕೂರಿನಲ್ಲಿ ಇಂದು ಮಾತಾಡಲಿ ಎಂದು ಒತ್ತಾಯಿಸಿದ್ದಾರೆ.

  • ಪ್ರಮಾಣವಚನ ಸ್ವೀಕರಿಸಿದ ಮರುದಿನ ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ ಎಂದಿದ್ದರು ಬಿಎಸ್ವೈ.ಆದರೀಗ ಪರಿಸ್ಥಿತಿ ವಿಷಮವಾಗಿದೆ.ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಬರ ಪರಿಹಾರ,ಅನುದಾನ, ತೆರಿಗೆ ಹಂಚಿಕೆಗಳನ್ನು ದಿಟ್ಟತನದಿಂದ ಕೇಳುವ ಶಕ್ತಿ ಬಿಎಸ್ವೈ ಅವರಿಗಿಲ್ಲ.ನ್ಯಾಯವಾಗಿ ಬರಬೇಕಾದ್ದನ್ನು ಪಡೆಯಲಾಗದ ಬಿಎಸ್ವೈ ಅವರು ದುರ್ಬಲ ಸಿಎಂ.
    3/4

    — H D Kumaraswamy (@hd_kumaraswamy) January 2, 2020 " class="align-text-top noRightClick twitterSection" data=" ">

ಸಿಎಂ ಬಿ.ಎಸ್ ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕರಿಸಿದ ಮರುದಿನ ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ ಎಂದಿದ್ದರು. ಆದರೀಗ ಪರಿಸ್ಥಿತಿ ವಿಷಮವಾಗಿದೆ. ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಬರ ಪರಿಹಾರ, ಅನುದಾನ, ತೆರಿಗೆ ಹಂಚಿಕೆಗಳನ್ನು ದಿಟ್ಟತನದಿಂದ ಕೇಳುವ ಶಕ್ತಿ ಬಿಎಸ್​ವೈ ಅವರಿಗಿಲ್ಲ. ನ್ಯಾಯವಾಗಿ ಬರಬೇಕಾದ್ದನ್ನು ಪಡೆಯಲಾಗದ ಯಡಿಯೂರಪ್ಪ ಅವರು ದುರ್ಬಲ ಸಿಎಂ ಎಂದು ವ್ಯಂಗ್ಯವಾಡಿದ್ದಾರೆ.

  • ರಾಜ್ಯದಿಂದ 25 ಸಂಸದರನ್ನು ಪಡೆದಿರುವ ಮೋದಿಯವರು, ಕೇಂದ್ರದ ಚಂದಮಾಮನನ್ನು ತೋರಿಸಿ 'ಅನರ್ಹ ಸರ್ಕಾರ' ರಚಿಸಿಕೊಂಡ ಬಿಎಸ್ವೈ ಅವರು ಶಿವಕುಮಾರ ಸ್ವಾಮೀಜಿಗಳು ಐಕ್ಯರಾಗಿರುವ ತುಮಕೂರಿನ ನೆಲದಲ್ಲಿ ನಿಂತು ಇವೆಲ್ಲಕ್ಕೂ ಉತ್ತರ ಕೊಡುವರೇ?
    4/4

ರಾಜ್ಯದಿಂದ 25 ಸಂಸದರನ್ನು ಪಡೆದಿರುವ ಮೋದಿಯವರು, ಕೇಂದ್ರದ ಚಂದಮಾಮನನ್ನು ತೋರಿಸಿ 'ಅನರ್ಹ ಸರ್ಕಾರ' ರಚಿಸಿಕೊಂಡ ಬಿಎಸ್​ವೈ ಅವರು, ಶಿವಕುಮಾರ ಸ್ವಾಮೀಜಿಗಳು ಐಕ್ಯರಾಗಿರುವ ತುಮಕೂರಿನ ನೆಲದಲ್ಲಿ ನಿಂತು ಇವೆಲ್ಲಕ್ಕೂ ಉತ್ತರ ಕೊಡುವರೇ? ಎಂದು ಟ್ವೀಟ್ ಮೂಲಕ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

Intro:ಬೆಂಗಳೂರು : ರಾಜ್ಯದ ಖಜಾನೆ ಖಾಲಿಯಾಗಿದೆ. ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.Body:ಈ ಕುರಿತು ಟ್ವೀಟ್ ಮಾಡಿರುವ ಅವರು, ಮುದ್ರಾಂಕ ಮತ್ತು ನೋಂದಣಿ, ಮೋಟಾರು ವಾಹನ ಕ್ಷೇತ್ರ, ವಾಣಿಜ್ಯ ತೆರಿಗೆ ಬಹುದೊಡ್ಡ ಆದಾಯದ ಮೂಲವಾದರೂ ಅವುಗಳಿಂದ ಸಂಪನ್ಮೂಲ ಬಂದಿಲ್ಲ‌. ಕಾರಣವೇನು? ಕೇಂದ್ರದ ಕೆಟ್ಟ ಆರ್ಥಿಕ‌ ನೀತಿ. ಜಿಡಿಪಿ,ದೇಶದ ಅಭಿವೃದ್ಧಿ ನುಂಗಿದ ಕೇಂದ್ರದ ನೀತಿಗಳು ಈಗ ರಾಜ್ಯದ ಮೇಲೂ ಪರಿಣಾಮ ಬೀರಿದೆ ಎಂದು ಕಿಡಿಕಾರಿದ್ದಾರೆ.
ತೆರಿಗೆಯಲ್ಲಿ ರಾಜ್ಯಕ್ಕೆ ನೀಡಬೇಕಾದ ಪಾಲನ್ನೂ ಕೇಂದ್ರ ವಂಚಿಸಿದೆ‌. ರಾಜ್ಯಕ್ಕೆ ಬರಬೇಕಿದ್ದ ಪಾಲಿನಲ್ಲಿ ಶೇ. 5.44 ರಷ್ಟು ಇನ್ನೂ ಬಂದಿಲ್ಲ. ಇದು ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ಕೇಂದ್ರದ ಮಲತಾಯಿ ಧೋರಣೆ. ಲೋಕಸಭೆ ಸ್ಥಾನಗಳ ಮೇಲೆ ಮಾತ್ರ ಕಣ್ಣಿಡುವ ಕೇಂದ್ರ ಇಲ್ಲಿನ ಬೇಕು ಬೇಡಗಳನ್ನು ನಿರ್ಲಕ್ಷಿಸುತ್ತದೆ. ಮೋದಿ ಈ ಬಗ್ಗೆ ತುಮಕೂರಿನಲ್ಲಿ ಇಂದು ಮಾತಾಡಲಿ ಎಂದು ಒತ್ತಾಯಿಸಿದ್ದಾರೆ.
ಪ್ರಮಾಣವಚನ ಸ್ವೀಕರಿಸಿದ ಮರುದಿನ ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ ಎಂದಿದ್ದರು ಸಿಎಂ ಬಿ.ಎಸ್. ಯಡಿಯೂರಪ್ಪನವರು. ಆದರೀಗ ಪರಿಸ್ಥಿತಿ ವಿಷಮವಾಗಿದೆ. ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಬರ ಪರಿಹಾರ, ಅನುದಾನ, ತೆರಿಗೆ ಹಂಚಿಕೆಗಳನ್ನು ದಿಟ್ಟತನದಿಂದ ಕೇಳುವ ಶಕ್ತಿ ಬಿಎಸ್ ವೈ ಅವರಿಗಿಲ್ಲ. ನ್ಯಾಯವಾಗಿ ಬರಬೇಕಾದ್ದನ್ನು ಪಡೆಯಲಾಗದ ಯಡಿಯೂರಪ್ಪ ಅವರು ದುರ್ಬಲ ಸಿಎಂ ಎಂದು ವ್ಯಂಗ್ಯವಾಡಿದ್ದಾರೆ.
ರಾಜ್ಯದಿಂದ 25 ಸಂಸದರನ್ನು ಪಡೆದಿರುವ ಮೋದಿಯವರು, ಕೇಂದ್ರದ ಚಂದಮಾಮನನ್ನು ತೋರಿಸಿ 'ಅನರ್ಹ ಸರ್ಕಾರ' ರಚಿಸಿಕೊಂಡ ಬಿಎಸ್ ವೈ ಅವರು, ಶಿವಕುಮಾರ ಸ್ವಾಮೀಜಿಗಳು ಐಕ್ಯರಾಗಿರುವ ತುಮಕೂರಿನ ನೆಲದಲ್ಲಿ ನಿಂತು ಇವೆಲ್ಲಕ್ಕೂ ಉತ್ತರ ಕೊಡುವರೇ? ಎಂದು ಟ್ವೀಟ್ ಮೂಲಕ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.Conclusion:
Last Updated : Jan 2, 2020, 4:26 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.