ETV Bharat / state

ತೆನೆ ಹೊತ್ತವಳಿಗೆ ಬಲ ತುಂಬಲು ಮುಂದಾದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ! - ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಮೈತ್ರಿ ಸರ್ಕಾರ ಪತನವಾಗಿರುವ ಚಿಂತೆಗಿಂತ ಮುಂದಿನ ದಿನಗಳಲ್ಲಿ ತಮ್ಮ ಪಕ್ಷ ಸಂಘಟನೆ ಯಾವ ರೀತಿ ಮಾಡಬೇಕೆಂಬುದರ ಕುರಿತು ಶಾಸಕರಿಗೆ ಮತ್ತು ಪಕ್ಷದ ಮುಖಂಡರಿಗೆ ಪಾಠ ಮಾಡಲು ಮಾಜಿ ಸಿಎಂ ಹೆಚ್​ಡಿಕೆ ಮುಂದಾಗಿದ್ದಾರೆ. ಮುಂಬರುವ ಉಪ ಚುನಾವಣೆ ಮತ್ತು ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ತಯಾರಿ ಮಾಡುವುದರ ಬಗ್ಗೆ ಚಿಂತನೆ ನಡೆಸಿರುವ ಹೆಚ್‌ಡಿಕೆ, ಪಕ್ಷ ಸಂಘಟನೆಗೆ ಪಣ ತೊಟ್ಟಿದ್ದಾರೆ.

HD Kumaraswamy, ಹೆಚ್.ಡಿ.ಕುಮಾರಸ್ವಾಮಿ
author img

By

Published : Sep 6, 2019, 3:09 PM IST

ಬೆಂಗಳೂರು : ರಾಜ್ಯದಲ್ಲಿ ಮೈತ್ರಿ ಸರ್ಕಾರ ಉರುಳಿ ಹೋಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಒಂದೆಡೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿ ಅಧಿಕಾರ ನಡೆಸುತ್ತಿದ್ರೇ, ಇನ್ನೊಂದೆಡೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರೆಯುತ್ತಾ ಅಥವಾ ಬ್ರೇಕ್ ಬೀಳುತ್ತಾ ಎಂಬುದು ಇನ್ನೂ ನಿಗೂಢವಾಗಿದೆ. ಮೈತ್ರಿ ಬೇಕೇ, ಬೇಡವೇ? ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಬೇಕಿದೆ.

ಈ ಮಧ್ಯೆ ಮೈತ್ರಿ ಸರ್ಕಾರ ಬೀಳೋಕೆ ಸಿದ್ದರಾಮಯ್ಯ ಕಾರಣ ಅನ್ನೋ ಆರೋಪವನ್ನ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾಡಿದ್ದರು. ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯನವರು ತಕ್ಕ ಪ್ರತ್ಯುತ್ತರವನ್ನೂ ಸಹ ನೀಡಿದ್ದಾರು. ಇಂತಹ ಪರಿಸ್ಥಿತಿಯಲ್ಲಿ ಮೈತ್ರಿ ಮುಂದುವರೆಯುವುದು ದೂರದ ಮಾತು ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು. ಈಗ ಕಾಂಗ್ರೆಸ್​ಗಿಂತಲೂ ಹೆಚ್ಚು ಜೆಡಿಎಸ್ ಚಿಂತೆಗೀಡಾದಂತಿದೆ. ಜೆಡಿಎಸ್​ಗೆ ಮುಂದಿನ ಭವಿಷ್ಯದ ಕುರಿತು ಕಾರ್ಮೋಡ ಆವರಿಸಿದಂತಾಗಿದೆ. ಹಾಗಾಗಿ ಮಾಜಿ ಪಿಎಂ ದೇವೇಗೌಡರು ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರು ತಮ್ಮ ಶಾಸಕರೊಂದಿಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

Bangalore
ಪಕ್ಷದ ಸಭೆ ನಡೆಯುವ ದಿನಾಂಕದ ಪಟ್ಟಿ

ಮೈತ್ರಿ ಸರ್ಕಾರ ಪತನವಾಗಿರುವ ಚಿಂತೆಗಿಂತ ಮುಂದಿನ ದಿನಗಳಲ್ಲಿ ತಮ್ಮ ಪಕ್ಷ ಸಂಘಟನೆ ಯಾವ ರೀತಿ ಮಾಡಬೇಕೆಂಬುದರ ಕುರಿತು ಶಾಸಕರಿಗೆ ಮತ್ತು ಪಕ್ಷದ ಮುಖಂಡರಿಗೆ ಪಾಠ ಮಾಡಲು ಮಾಜಿ ಸಿಎಂ ಹೆಚ್​ಡಿಕೆ ಮುಂದಾಗಿದ್ದಾರೆ. ಮೈತ್ರಿ ಸರ್ಕಾರ ಉರುಳಿದ ನಂತರ ರಾಜಕೀಯದಿಂದ ಸ್ವಲ್ಪಮಟ್ಟಿಗೆ ದೂರವೇ ಉಳಿದಿದ್ದರು ಹೆಚ್‌ಡಿಕೆ. ಇದೀಗ ಮುಂಬರುವ ಉಪ ಚುನಾವಣೆ ಮತ್ತು ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ತಯಾರಿ ಮಾಡುವುದರ ಬಗ್ಗೆ ಚಿಂತನೆ ನಡೆಸಿರುವ ಹೆಚ್‌ಡಿಕೆ, ಪಕ್ಷ ಸಂಘಟನೆಗಾಗಿ ತಮ್ಮನ್ನ ಹೆಚ್ಚು ತೊಡಗಿಸಿಕೊಳ್ಳಲಿದ್ದಾರೆ.

ಪಕ್ಷದ ಸಂಘಟನೆಯ ಗುರಿ:
ಮುಂದಿನ ದಿನಗಳಲ್ಲಿ ಉಪ ಚುನಾವಣೆಗಳು ಎದುರಾಗುತ್ತವೆ. ಅಷ್ಟರಲ್ಲಿ ಜೆಡಿಎಸ್ ಪಕ್ಷವನ್ನು ಬಲಿಷ್ಠಗೊಳಿಸಬೇಕು. ಪಕ್ಷವನ್ನು ಸಂಘಟಿಸಬೇಕು. ಸದ್ಯದ ಪರಿಸ್ಥಿತಿ ನೋಡಿದರೆ ಮಧ್ಯಂತರ ಚುನಾವಣೆ ಯಾವುದೇ ಸಮಯದಲ್ಲಾದರೂ ಬರಬಹುದು. ಅದಕ್ಕಾಗಿ ನಾವು ಸಿದ್ಧತೆ ಮಾಡಿಕೊಳ್ಳಬೇಕಿದೆ. ಮೈತ್ರಿ ವಿಚಾರವಾಗಿ ಎಲ್ಲಿಯೂ ಹೇಳಿಕೆ ನೀಡಬಾರದು. ಮೈತ್ರಿ ಸರ್ಕಾರದ ಹದಿನಾಲ್ಕು ತಿಂಗಳ ಕಾರ್ಯ ವೈಖರಿಯನ್ನು ಮುಂದಿಟ್ಟು ಪಕ್ಷ ಸಂಘಟಿಸಬೇಕೆಂದು ತಮ್ಮ ಶಾಸಕರ ಬಳಿ ಕುಮಾರಸ್ವಾಮಿ ಅವರು ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಕ್ಷ ಸಂಘಟನೆಗೆ ಸಭೆ :
ಪಕ್ಷದ ಜಿಲ್ಲಾವಾರು ಮುಖಂಡರ ಸಭೆಯನ್ನು ಸೆಪ್ಟೆಂಬರ್‌ 16ರಿಂದ 20ರವರೆಗೆ ಕರೆಯಲಾಗಿದೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಕರೆಯಲಾಗಿರುವ ಈ ಸಭೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಇತರ ಮುಖಂಡರು ಭಾಗವಹಿಸಲಿದ್ದಾರೆ. ಸೆ.16 ರಂದು ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲಾ ಮುಖಂಡರ ಸಭೆ ನಡೆಯಲಿದೆ. ಸೆ.17 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು. ಹಾಗೂ ಸೆ.18 ರಂದು ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಸೆ.19 ರಂದು ವಿಜಯಪುರ, ಬಾಗಲಕೋಟೆ, ಬೆಳಗಾವಿ, ಚಿಕ್ಕೋಡಿಯಲ್ಲಿ ಪಕ್ಷದ ಮುಖಂಡರ ಜತೆಗೆ ಹೆಚ್‌ಡಿಕೆ ಸಭೆ ನಡೆಸಲಿದ್ದಾರೆ. ಸೆ.20 ರಂದು ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗನಲ್ಲಿ ಸಭೆ ನಡೆಯಲಿವೆ.

ಆಯಾ ಜಿಲ್ಲಾವಾರು ಸಭೆಗೆ ಪಕ್ಷದ ಜಿಲ್ಲಾಧ್ಯಕ್ಷರು, ಕಾರ್ಯಾಧ್ಯಕ್ಷರು, ಮಹಾಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರು, ಪಕ್ಷದ ಮುಖಂಡರು, ಮಾಜಿ ಸಚಿವರು, ಹಾಲಿ ಹಾಗೂ ಮಾಜಿ ಸಂಸದರು, ವಿಧಾನಸಭಾ, ವಿಧಾನ ಪರಿಷತ್ ಸದಸ್ಯರು, ರಾಜ್ಯ ಪದಾಧಿಕಾರಿಗಳು, ವಿವಿಧ ವಿಭಾಗಗಳ ಅಧ್ಯಕ್ಷರು, 2018 ರ ಸಾರ್ವತ್ರಿಕ ವಿಧಾನಸಭಾ ಹಾಗೂ 2019 ರ ಸಾರ್ವತ್ರಿಕ ಲೋಕಸಭಾ ಮತ್ತು ಇನ್ನಿತರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ತಪ್ಪದೇ ಈ ಸಭೆಗಳಲ್ಲಿ ಭಾಗವಹಿಸುವಂತೆ ಸಂಬಂಧಪಟ್ಟ ಜಿಲ್ಲಾಧ್ಯಕ್ಷರು ಸೂಚನೆ ನೀಡಬೇಕೆಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಸೂಚಿಸಿದ್ದಾರೆ.

Intro:ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಉರುಳಿ ಹೋಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಒಂದೆಡೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಿ ಕೇಕೆ ಹಾಕುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರೆಯುತ್ತಾ, ಬ್ರೇಕ್ ಆಗುತ್ತಾ? ಎಂಬುದು ಇನ್ನೂ ನಿಗೂಢವಾಗಿಯೇ ಇದೆ. ಮೈತ್ರಿ ಬೇಕೇ, ಬೇಡವೇ? ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಬೇಕಿದೆ.Body:ಈ ಮಧ್ಯೆ ಮೈತ್ರಿ ಸರ್ಕಾರದಲ್ಲಿ ಆದ ಘಟನಾವಳಿಗಳ ಕುರಿತು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಹೊರಹಾಕಿದ್ದೂ ಆಗಿದೆ. ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯನವರು ಪ್ರತ್ಯುತ್ತರ ಸಹ ನೀಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮೈತ್ರಿ ಮುಂದುವರೆಯುವುದು ದೂರದ ಮಾತು ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.
ಹಾಗಾಗಿ, ಕಾಂಗ್ರೆಸ್ ಗಿಂತಲೂ ಹೆಚ್ಚು ಜೆಡಿಎಸ್ ಚಿಂತೆಗೀಡಾಗಿದೆ. ಜೆಡಿಎಸ್ ಗೆ ಮುಂದಿನ ಭವಿಷ್ಯದ ಚಿಂತೆಯಾಗಿರುವ ಹಿನ್ನೆಲೆಯಲ್ಲಿ ಮುಂದಿನ ನಡೆಯ ಕುರಿತು ತಮ್ಮ ಶಾಸಕರೊಂದಿಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ಮೈತ್ರಿ ಸರ್ಕಾರ ಪತನವಾಗಿರುವ ಚಿಂತೆಗಿಂತ ಮುಂದಿನ ದಿನಗಳಲ್ಲಿ ತಮ್ಮ ಪಕ್ಷ ಸಂಘಟನೆ ಯಾವ ರೀತಿ ಮಾಡಬೇಕೆಂಬುದರ ಕುರಿತು ಶಾಸಕರಿಗೆ ಮತ್ತು ಪಕ್ಷದ ಮುಖಂಡರಿಗೆ ಪಾಠ ಮಾಡಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಮುಂದಾಗಿದ್ದಾರೆ.
ಮೈತ್ರಿ ಸರ್ಕಾರ ಉರುಳಿದ ನಂತರ ರಾಜಕೀಯದಿಂದ ಸ್ವಲ್ಪಮಟ್ಟಿಗೆ ದೂರವೇ ಉಳಿದಿದ್ದ ಕುಮಾರಸ್ವಾಮಿ ಅವರು, ವಿದೇಶಕ್ಕೂ ಹೋಗಿ ಬಂದಿದ್ದಾರೆ. ಇದೀಗ ಮುಂಬರುವ ಉಪ ಚುನಾವಣೆ ಮತ್ತು ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ತಯಾರಿ ಮಾಡುವುದರ ಬಗ್ಗೆ ಚಿಂತನೆ ನಡೆಸಿರುವ ಹೆಚ್ ಡಿಕೆ, ಪಕ್ಷ ಸಂಘಟನೆಯ ಅಖಾಡಕ್ಕೆ ಇಳಿಯಲಿದ್ದಾರೆ.
ಮುಂದೆ ಏನು ಮಾಡುವುದು ಎಂಬುದರ ಚರ್ಚೆಗಳು ಮಾಜಿ ದೋಸ್ತಿ ನಾಯಕರ ಮಧ್ಯೆ ನಡೆಯುತ್ತಿವೆ. ಈ ನಡುವೆ ಕುಮಾರಸ್ವಾಮಿ ಅವರು ಬೇರೆಯದ್ದೇ ಲೆಕ್ಕಾಚಾರ ಹಾಕುತ್ತಿದ್ದಾರೆ.
ಮುಂದಿನ ದಿನಗಳಲ್ಲಿ ಉಪ ಚುನಾವಣೆಗಳು ಎದುರಾಗುತ್ತವೆ. ಅಷ್ಟರಲ್ಲಿ ಜೆಡಿಎಸ್ ಪಕ್ಷವನ್ನು ಬಲಿಷ್ಠಗೊಳಿಸಬೇಕು. ಪಕ್ಷವನ್ನು ಸಂಘಟಿಸಬೇಕು. ಸದ್ಯದ ಪರಿಸ್ಥಿತಿ ನೋಡಿದರೆ ಮಧ್ಯಂತರ ಚುನಾವಣೆ ಯಾವುದೇ ಸಮಯದಲ್ಲಾದರೂ ಬರಬಹುದು. ಅದಕ್ಕಾಗಿ ನಾವು ಸಿದ್ಧತೆ ಮಾಡಿಕೊಳ್ಳಬೇಕಿದೆ. ಮೈತ್ರಿ ವಿಚಾರವಾಗಿ ಎಲ್ಲಿಯೂ ಹೇಳಿಕೆ ನೀಡಬಾರದು. ಮೈತ್ರಿ ಸರ್ಕಾರದ ಹದಿನಾಲ್ಕು ತಿಂಗಳ ಕಾರ್ಯವೈಖರಿಯನ್ನು ಮುಂದಿಟ್ಟು ಪಕ್ಷ ಸಂಘಟಿಸಬೇಕೆಂದು ತಮ್ಮ ಶಾಸಕರ ಬಳಿ ಕುಮಾರಸ್ವಾಮಿ ಅವರು ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಕ್ಷ ಸಂಘಟನೆಗೆ ಸಭೆ : ಪಕ್ಷದ ಜಿಲ್ಲಾವಾರು ಮುಖಂಡರ ಸಭೆಯನ್ನು ಸೆ.16 ರಿಂದ 20 ರವರೆಗೆ ಕರೆಯಲಾಗಿದೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಕರೆಯಲಾಗಿರುವ ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇತರ ಮುಖಂಡರು ಭಾಗವಹಿಸಲಿದ್ದಾರೆ.
ಸೆ.16 ರಂದು ಸೋಮವಾರ ಬೆಳಗ್ಗೆ 11 ಗಂಟೆಯಿಂದ ಆರಂಭವಾಗುವ ಸಭೆಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲಾ ಮುಖಂಡರ ಸಭೆ ನಡೆಯಲಿದೆ.
ಸೆ.17 – ಬೆಳಗ್ಗೆ 11 ಗಂಟೆಯಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು.
ಸೆ.18- ಬೆಳಗ್ಗೆ 11 ರಿಂದ ರಾಯಚೂರು, ಯಾದಗಿರಿ, ಕಲಬುರಗಿ.
ಸೆ.19- ಬೆಳಗ್ಗೆ 11 ರಿಂದ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಚಿಕ್ಕೋಡಿ.
ಸೆ.20- ಬೆಳಗ್ಗೆ 11 ರಿಂದ ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ.
ಆಯಾ ಜಿಲ್ಲಾವಾರು ಸಭೆಗೆ ಪಕ್ಷದ ಜಿಲ್ಲಾಧ್ಯಕ್ಷರು, ಕಾರ್ಯಾಧ್ಯಕ್ಷರು, ಮಹಾಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪದಾಧಿಕಾರಿಗಳು, ಕ್ಷೇತ್ರ ತಾಲೂಕು ಅಧ್ಯಕ್ಷರು, ಪಕ್ಷದ ಮುಖಂಡರು, ಮಾಜಿ ಸಚಿವರು, ಹಾಲಿ ಹಾಗೂ ಮಾಜಿ ಸಂಸದರು, ವಿಧಾನಸಭಾ, ವಿಧಾನ ಪರಿಷತ್ ಸದಸ್ಯರು, ರಾಜ್ಯ ಪದಾಧಿಕಾರಿಗಳು, ವಿವಿಧ ವಿಭಾಗಗಳ ಅಧ್ಯಕ್ಷರು, 2018 ರ ಸಾರ್ವತ್ರಿಕ ವಿಧಾನಸಭಾ ಹಾಗೂ 2019 ರ ಸಾರ್ವತ್ರಿಕ ಲೋಕಸಭಾ ಮತ್ತು ಇನ್ನಿತರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ತಪ್ಪದೇ ಭಾಗವಹಿಸುವಂತೆ ಸಂಬಂಧಪಟ್ಟ ಜಿಲ್ಲಾಧ್ಯಕ್ಷರು ಸಭೆಯಲ್ಲಿ ಭಾಗವಹಿಸುವಂತೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸೂಚನೆ ನೀಡಿದ್ದಾರೆ. Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.