ETV Bharat / state

ಪೆಟ್ರೋಲಿಯಂ ಉತ್ಪನ್ನ ಜಿಎಸ್​ಟಿಗೆ ಒಳಪಟ್ಟರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನ: ಹೆಚ್​ಡಿಕೆ

author img

By

Published : Mar 7, 2021, 12:25 PM IST

ರಾಜ್ಯಗಳು ಜಿಎಸ್​ಟಿ ವ್ಯವಸ್ಥೆಗೆ ಒಪ್ಪಿಗೆ ನೀಡಿದ ನಂತರ ನೀಡಬೇಕಿದ್ದ ಪಾಲು, ಪರಿಹಾರವನ್ನು ಕೇಂದ್ರ ಈವರೆಗೆ ಸರಿಯಾಗಿ ಕೊಟ್ಟೇ ಇಲ್ಲ. ಸಾವಿರಾರು ಕೋಟಿ ರೂ. ಬಾಕಿಯನ್ನು ಇನ್ನೂ ಉಳಿಸಿಕೊಂಡಿದೆ. ಬಾಕಿಗಾಗಿ ರಾಜ್ಯಗಳು ಕೇಂದ್ರವನ್ನು ಬೇಡಾಡಿ ಬಸವಳಿದಿವೆ. ಈಗ ಪೆಟ್ರೋಲಿಯಂ ಆದಾಯವನ್ನು ಕೇಂದ್ರಕ್ಕೆ ಒಪ್ಪಿಸಿದರೆ ರಾಜ್ಯಗಳ ಪಾಡು ಶೋಚನೀಯವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

Petroleum Product to GST latest news  ಪೆಟ್ರೋಲಿಯಂ ಉತ್ಪನ್ನ ಜಿಎಸ್​ಟಿಗೆ
ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ತೈಲ ದರ ಏರಿಕೆ ವಿರುದ್ಧ ಜನರ ಆಕ್ರೋಶವನ್ನೇ ಬಳಸಿಕೊಂಡು, ದರ ಇಳಿಸುವ ನೆಪದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್​ಟಿಗೆ ಸೇರಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ನಡೆಸುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಪೆಟ್ರೋಲಿಯಂ ಉತ್ಪನ್ನಗಳೇನಾದರೂ ಜಿಎಸ್​ಟಿ ವ್ಯಾಪ್ತಿಗೆ ಒಳಪಟ್ಟರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ. ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್‌ ರಾಜ್ಯಗಳ ಪ್ರಮುಖ ಆದಾಯದ ಮೂಲಗಳಲ್ಲೊಂದು. ಕೇಂದ್ರ ಸರ್ಕಾರ ಮಿತಿ ಮೀರಿದ ತೆರಿಗೆ ವಿಧಿಸುತ್ತದೆ ಮತ್ತು ರಾಜ್ಯಗಳಿಗಿಂತಲೂ ಅಧಿಕ ಆದಾಯವನ್ನು ಸಂಗ್ರಹಿಸುತ್ತದೆ. ಈಗ ಅದೂ ಸಾಲದು ಎಂಬಂತೆ ಪೆಟ್ರೋಲಿಯಂನ್ನು ಜಿಎಸ್​ಟಿಗೆ ತಂದು ರಾಜ್ಯಗಳು ಪಡೆಯುತ್ತಿರುವ ಆದಾಯವನ್ನೂ ಲಪಟಾಯಿಸುವ ತಂತ್ರವನ್ನು ಮಾಡಿದೆ ಎಂದು ಹೇಳಿದ್ದಾರೆ.

  • ತೈಲ ದರ ಏರಿಕೆ ವಿರುದ್ಧ ಜನರ ಆಕ್ರೋಶವನ್ನೇ ಬಳಸಿಕೊಂಡು, ದರ ಇಳಿಸುವ ನೆಪದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು GSTಗೆ ಸೇರಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ನಡೆಸುತ್ತಿದೆ. ಈ ಬಗೆಗಿನ ಚರ್ಚೆಗಳನ್ನು ಹುಟ್ಟುಹಾಕುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳೇನಾದರೂ GSTಗೆ ಒಳಪಟ್ಟರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ.
    1/6

    — H D Kumaraswamy (@hd_kumaraswamy) March 7, 2021 " class="align-text-top noRightClick twitterSection" data=" ">

ರಾಜ್ಯಗಳು ಜಿಎಸ್​ಟಿ ವ್ಯವಸ್ಥೆಗೆ ಒಪ್ಪಿಗೆ ನೀಡಿದ ನಂತರ ನೀಡಬೇಕಿದ್ದ ಪಾಲು, ಪರಿಹಾರವನ್ನು ಕೇಂದ್ರ ಈ ವರೆಗೆ ಸರಿಯಾಗಿ ಕೊಟ್ಟೇ ಇಲ್ಲ. ಸಾವಿರಾರು ಕೋಟಿ ಬಾಕಿಯನ್ನು ಇನ್ನೂ ಉಳಿಸಿಕೊಂಡಿದೆ. ಬಾಕಿಗಾಗಿ ರಾಜ್ಯಗಳು ಕೇಂದ್ರವನ್ನು ಬೇಡಾಡಿ ಬಸವಳಿದಿವೆ. ಈಗ ಪೆಟ್ರೋಲಿಯಂ ಆದಾಯವನ್ನು ಕೇಂದ್ರಕ್ಕೆ ಒಪ್ಪಿಸಿದರೆ ರಾಜ್ಯಗಳ ಪಾಡು ಶೋಚನೀಯವಾಗಲಿದೆ. ರಾಜ್ಯಗಳು ಆದಾಯವಿಲ್ಲದೇ, ಅಭಿವೃದ್ಧಿ ಕಾರ್ಯಗಳಿಗೆ ಅನುದಾನವಿಲ್ಲದೇ ಸಂಕಷ್ಟ ಅನುಭವಿಸಬೇಕಾಗುತ್ತದೆ. ಕೊನೆಗೆ ಕೊರತೆ ಬಜೆಟ್‌ ಮಂಡಿಸಬೇಕಾಗುತ್ತದೆ. ಬಜೆಟ್‌ ಗಾತ್ರವನ್ನೇ ಇಳಿಸಬೇಕಾದ ಸಂದರ್ಭ ಬರಲಿದೆ. ಇದು ಅಭಿವೃದ್ಧಿ ವಿಚಾರದಲ್ಲಿ ಹಿಂದಕ್ಕೆ ಓಡಿದಂತೆ. ಪ್ರತಿಯೊಬ್ಬ ಪ್ರಜೆಯೂ ಇದರ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕಾಳಗಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳಲ್ಲಿ ಕೊರೊನಾ ಪತ್ತೆ ಪ್ರಕರಣ: ಶಿಕ್ಷಕರು ಸೇರಿ 172 ಜನರಿಗೆ ಬಿಗ್​ ರಿಲೀಫ್​​

ತೈಲ ಬೆಲೆ ಇಳಿಸುವ ಕಾಳಜಿ ಕೇಂದ್ರಕ್ಕೆ ಇದ್ದಲ್ಲಿ ತಾನು ವಿಧಿಸುತ್ತಿರುವ ತೆರಿಗೆಯನ್ನು ಈ ಕೂಡಲೇ ತಗ್ಗಿಸಲಿ. ನಂತರ ರಾಜ್ಯಗಳಿಗೂ ತೆರಿಗೆ ತಗ್ಗಿಸಲು ಹೇಳಲಿ. ಅದು ಬಿಟ್ಟು ರಾಜ್ಯಗಳ ಪಾಲಿನ ಹಣಕ್ಕೂ ಕೇಂದ್ರ ಸರ್ಕಾರ ಕೈ ಇಡಬಾರದು. ರಾಜ್ಯಗಳು ಚೆನ್ನಾಗಿದ್ದರೆ, ದೇಶವೂ ಚೆನ್ನಾಗಿರುತ್ತದೆ. ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲಾಗುತ್ತದೆಯೇ?. ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದಕ್ಕೆ ಹಲವು ರಾಜ್ಯಗಳು ಈಗಾಗಲೇ ವಿರೋಧ ವ್ಯಕ್ತಪಡಿಸಿವೆ. ರಾಜ್ಯದ ಮುಖ್ಯಮಂತ್ರಿಗಳೂ ಈ ವಿಚಾರದಲ್ಲಿ ಆಕ್ಷೇಪಣಾ ಮನೋಭಾವ ತಳೆಯಬೇಕು. ರಾಜ್ಯದ ಪ್ರಮುಖ ನಾಯಕರೂ ಈ ವಿಚಾರವಾಗಿ ಈಗಿನಿಂದಲೇ ಪ್ರತಿರೋಧ ವ್ಯಕ್ತಪಡಿಸಬೇಕು. ಇಲ್ಲವಾದರೆ, ಜಿಎಸ್‌ಟಿ ಕುಣಿಕೆ ನಮ್ಮನ್ನು ಕಾಡಲಿದೆ ಎಂದು ಎಚ್ಚರಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.