ETV Bharat / state

'ಬಿಜೆಪಿ ಸಂಸ್ಥಾಪನಾ ದಿನ ಪ್ರಯುಕ್ತ ಜನರ ಕೈಯಲ್ಲಿ ಮೋದಿ ದೀಪ ಬೆಳಗಿಸುತ್ತಿದ್ದಾರಾ?': ಹೆಚ್ಡಿಕೆ - ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್

ದೇಶದ ಸಂಕಟವನ್ನು ಬಗೆಹರಿಸುವ ಯಾವುದೇ ಮಾರ್ಗೋಪಾಯಗಳನ್ನು ದೇಶಕ್ಕೆ ಹೇಳದೇ ಪ್ರಧಾನಿ ಮೋದಿ, ಏಪ್ರಿಲ್ 5ರ ದಿನವನ್ನೇ ದೀಪ ಬೆಳಗಿಸಲು ಆಯ್ದುಕೊಂಡಿರುವ ಹಿಂದಿನ ಮರ್ಮವೇನು? ದೀಪ ಹಚ್ಚುವ ಯೋಚನೆಯ ಹಿಂದಿನ ವೈಜ್ಞಾನಿಕ, ವೈಚಾರಿಕ ಕಾರಣವನ್ನು ಅವರು ಸ್ಪಷ್ಟಪಡಿಸಬೇಕು ಎಂದು ಕುಮಾರಸ್ವಾಮಿ ಟ್ವೀಟ್‌ ಮೂಲಕ ಆಗ್ರಹಿಸಿದ್ದಾರೆ.

hd kumaraswamy
ಮಾಜಿ ಸಿಎಂ ಕುಮಾರಸ್ವಾಮಿ
author img

By

Published : Apr 5, 2020, 11:13 AM IST

Updated : Apr 5, 2020, 11:20 AM IST

ಬೆಂಗಳೂರು: ಬಿಜೆಪಿ ಪಕ್ಷದ ಸಂಸ್ಥಾಪನಾ ದಿನಾಚರಿಸಲು ಕೊರೊನಾ ಸಂಕಷ್ಟವನ್ನು ಪ್ರಧಾನಿ ಮೋದಿ ದುರುಪಯೋಗ ಮಾಡಿಕೊಂಡರೇ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

  • ದೇಶದ ಸಂಕಟವನ್ನು ಬಗೆ ಹರಿಸುವ ಯಾವುದೇ ಮಾರ್ಗೋಪಾಯಗಳನ್ನು ದೇಶಕ್ಕೆ ಹೇಳದೇ ಪ್ರಧಾನಿ ಏಪ್ರಿಲ್ 5 ನ್ನೇ ಆಯ್ದುಕೊಂಡದ್ದಕ್ಕೆ ಬೇರೆ ಏನು ವೈಜ್ಞಾನಿಕ, ವೈಚಾರಿಕ ಕಾರಣ ಎಂಬುದನ್ನು ಸ್ಪಷ್ಟ ಪಡಿಸಬೇಕು.
    ದೇಶ ಹಿಂದೆಂದೂ ಕಂಡರಿಯದ ಕಷ್ಟದ ದಿನಗಳಲ್ಲಿ ಇರುವಾಗ ದೀಪ ಬೆಳಗಿಸಿ ಒಗ್ಗಟ್ಟು ಪ್ರದರ್ಶಿಸುವ ನೆಪದಲ್ಲಿ ಈ ತರದ ತೋರಿಕೆಯ ಸಂಭ್ರಮ ಬೇಕೇ?
    3/4

    — H D Kumaraswamy (@hd_kumaraswamy) April 5, 2020 " class="align-text-top noRightClick twitterSection" data=" ">
  • ತನ್ನ ಸಂಸ್ಥಾಪನಾ ದಿನದ ಸಂಭ್ರಮೋತ್ಸವವನ್ನು ಕೊರೋನ ಸಂಕಷ್ಟದ ದಿನಗಳಲ್ಲಿ ನೇರಾ ನೇರ ಆಚರಿಸಲು ಹಿಂಜರಿದ ಬಿಜೆಪಿ ಪರೋಕ್ಷವಾಗಿ ಇಡೀ ದೇಶದ ಜನತೆಯ ಕೈಯಲ್ಲಿ ದೀಪ ಬೆಳಗಿಸಿ ತನ್ನ ಭಂಡತನವನ್ನು ಮೆರೆಯುತ್ತಿದೆಯೇ?
    2/4

  • ಬಿಜೆಪಿಯ ಸಂಸ್ಥಾಪನಾ ದಿನ ಆಚರಿಸಲು ಕೊರೋನ ಸಂಕಷ್ಟವನ್ನು ಪ್ರಧಾನಿ ದುರುಪಯೋಗ ಮಾಡಿಕೊಂಡರೇ?
    6 ಎಪ್ರಿಲ್ 1980 ಬಿಜೆಪಿ ಸಂಸ್ಥಾಪನಾ ದಿನ. ಇಂದಿನ ದಿನ 5-04-2020ಕ್ಕೆ ಬಿಜೆಪಿಗೆ ನಲವತ್ತು ವರ್ಷ ತುಂಬುತ್ತವೆ.
    1/4

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಏಪ್ರಿಲ್ 6, 1980 ಬಿಜೆಪಿ ಸಂಸ್ಥಾಪನಾ ದಿನ. ಬಿಜೆಪಿ ಪಕ್ಷ ಸ್ಥಾಪನೆಯಾಗಿ ಇಂದಿಗೆ 40 ವರ್ಷ ತುಂಬುತ್ತಿದೆ. ತನ್ನ ಸಂಸ್ಥಾಪನಾ ದಿನದ ಸಂಭ್ರಮೋತ್ಸವವನ್ನು ಕೊರೊನಾ ಸಂಕಷ್ಟದ ದಿನಗಳಲ್ಲಿ ನೇರಾನೇರ ಆಚರಿಸಲು ಹಿಂಜರಿದ ಬಿಜೆಪಿ ಪರೋಕ್ಷವಾಗಿ ಇಡೀ ದೇಶದ ಜನತೆಯ ಕೈಯಲ್ಲಿ ದೀಪ ಬೆಳಗಿಸಿ ತನ್ನ ಭಂಡತನ ಮೆರೆಯುತ್ತಿದೆಯೇ? ಎಂದು ಪ್ರಶ್ನಿಸಿದ್ದಾರೆ.
  • ಜಗತ್ತು ಕೊರೋನಾ ಮಹಾಮಾರಿಯಿಂದ ತತ್ತರಿಸುವ ಸಂದರ್ಭದಲ್ಲಿ ಇಂತಹ ರಹಸ್ಯ ಕಾರ್ಯಸೂಚಿ ಅರ್ಥಾತ್ ಪರದೆ ಹಿಂದಿನ ಸತ್ಯ ಮರೆಮಾಚಿ ಅಕಾಲಿಕ ದೀಪಾವಳಿ ಮಾಡಬೇಕೆ?

    ಕರುಣಾಳು ಬಾ ಬೆಳಕೆ
    ಮುಸುಕಿದೀ ಮಬ್ಬಿನಲಿ..
    ಕೈ ಹಿಡಿದು
    ನಡೆಸೆನ್ನನು.....

    4/4

ದೇಶ ಹಿಂದೆಂದೂ ಕಂಡರಿಯದ ಕಷ್ಟದ ದಿನಗಳಲ್ಲಿದೆ. ಹೀಗಿರುವಾಗ ದೀಪ ಬೆಳಗಿಸಿ ಒಗ್ಗಟ್ಟು ಪ್ರದರ್ಶಿಸುವ ನೆಪದಲ್ಲಿ ಈ ರೀತಿಯ ತೋರಿಕೆಯ ಸಂಭ್ರಮ ಬೇಕೇ?. ಜಗತ್ತು ಕೊರೊನಾ ಮಹಾಮಾರಿಯಿಂದ ತತ್ತರಿಸುವ ಸಂದರ್ಭದಲ್ಲಿ ಇಂತಹ ರಹಸ್ಯ ಕಾರ್ಯಸೂಚಿ ಅರ್ಥಾತ್ ಪರದೆ ಹಿಂದಿನ ಸತ್ಯ ಮರೆಮಾಚಿ ಅಕಾಲಿಕ ದೀಪಾವಳಿ ಮಾಡಬೇಕೆ? ಎಂದು ಕುಟುಕಿದ್ದಾರೆ.
ಜೊತೆಗೆ ಕರುಣಾಳು ಬಾ ಬೆಳಕೆ, ಮುಸುಕಿದೀ ಮಬ್ಬಿನಲಿ, ಕೈ ಹಿಡಿದು ನಡೆಸೆನ್ನನು ಎಂಬ ಪದೋಕ್ತಿ ಬರೆದು ಕೇಂದ್ರದ ನಡೆಯನ್ನು ಮಾಜಿ ಸಿಎಂ ಟೀಕಿಸಿದ್ದಾರೆ.

Last Updated : Apr 5, 2020, 11:20 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.