ETV Bharat / state

ರಾಮನಗರ ಜೈಲಿಗೆ ಗಲಭೆಕೋರರು ಶಿಫ್ಟ್​​: ಮುಂದೆ ಅನಾಹುತವಾದರೆ ಸರ್ಕಾರವೇ ಹೊಣೆ ಎಂದ ಹೆಚ್​ಡಿಕೆ

ಪಾದರಾಯನಪುರದ ಗಲಭೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮದ ವಿರುದ್ಧ ಕಿಡಿಕಾರಿರುವ ಮಾಜಿ ಸಿಎಂ ಕುಮಾರಸ್ವಾಮಿ, ರಾಮನಗರ ಜಿಲ್ಲೆಯ ಸ್ವಾಸ್ಥ್ಯ ಹದಗೆಡುತ್ತದೆ ಎಂಬ ಕನಿಷ್ಠ ಪ್ರಜ್ಞೆ ಸಹ ಸರ್ಕಾರಕ್ಕೆ ಬೇಡವೇ ಎಂದು ಪ್ರಶ್ನಿಸಿದ್ದಾರೆ.

hd kumaraswamy
ಮಾಜಿ ಸಿಎಂ ಕುಮಾರಸ್ವಾಮಿ
author img

By

Published : Apr 21, 2020, 10:49 PM IST

ಬೆಂಗಳೂರು: ನಗರದ ಪಾದರಾಯನಪುರದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾದ 54 ಮಂದಿಯನ್ನು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಇರಿಸುವುದರಿಂದಾಗುವ ಮುಂದಿನ ಅನಾಹುತಗಳಿಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕೊರೊನಾ ಸೋಂಕಿನ ವಿಷಯದಲ್ಲಿ ಹಸಿರು ವಲಯವಾಗಿರುವ ರಾಮನಗರದಲ್ಲಿ ಕ್ವಾರಂಟೈನ್​ಗೆ ಒಳಗಾಗಬೇಕಿದ್ದ ಗಲಭೆಕೋರರನ್ನು ರಾಮನಗರ ಜೈಲಿನಲ್ಲಿರಿಸುವುದು ವಿವೇಕಯುತ ನಿರ್ಧಾರವಲ್ಲ. ರಾಮನಗರ ಜೈಲಿನ ಕೈದಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಿ, ಪಾದರಾಯನಪುರದ 15 ಮಂದಿ ಗಲಭೆಕೋರರನ್ನು ರಾಮನಗರದ ಕಾರಗೃಹದಲ್ಲಿ ಒಂದೇ ಕೊಠಡಿಯಲ್ಲಿರಿಸುವ ಮೂಲಕ ಕೊರೊನಾ ಭೀತಿ ಎದುರಾಗಿದೆ. ಜಿಲ್ಲೆಯ ಜನತೆ ಭಯಗೊಂಡಿದ್ದಾರೆ. ಸರ್ಕಾರ ತಕ್ಷಣವೇ ತನ್ನ ನಿರ್ಧಾರ ಬದಲಿಸಬೇಕು ಎಂದು ಹೆಚ್​ಡಿಕೆ ಆಗ್ರಹಿಸಿದ್ದಾರೆ.

ನಿನ್ನೆ ನ್ಯಾಯಾಂಗ ಬಂಧನಕ್ಕೆ ಒಳಗಾದವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ಇರಿಸುವುದನ್ನು ಬಿಟ್ಟು ರಾಮನಗರ ಜಿಲ್ಲಾ ಕಾರಾಗೃಹದಲ್ಲಿರಿಸುವ ನಿರ್ಧಾರ ತಗೆದುಕೊಂಡವರು ಯಾರು? ನನಗಿರುವ ಮಾಹಿತಿ ಪ್ರಕಾರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಇಂತಹದ್ದೊಂದು ದುಡುಕು ನಿರ್ಧಾರಕ್ಕೆ ಕಾರಣರಾಗಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಗೃಹ ಕಾರ್ಯದರ್ಶಿ ಅವರೊಂದಿಗೆ ಎರಡೆರಡು ಬಾರಿ ದೂರವಾಣಿಯಲ್ಲಿ ಚರ್ಚಿಸಿದ್ದೇನೆ. ರಾಮನಗರ ಜಿಲ್ಲೆಯ ಜನರು ಮತ್ತು ಜನಪ್ರತಿನಿಧಿಗಳು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಯಾವುದೇ ಪ್ರತಿಭಟನೆಗೆ ಇಳಿಯದಂತೆ ಅವರ ಮನವೊಲಿಸಿದ್ದೇನೆ. ಇದನ್ನು ಸರ್ಕಾರದ ಗಮನಕ್ಕೂ ತರಲಾಗಿದೆ ಎಂದು ಕುಮಾರಸ್ವಾಮಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಾದರಾಯನಪುರ ಗಲಭೆ ಸಂಬಂಧ ಒಟ್ಟು ಈವರೆಗೂ ನೂರಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ನ್ಯಾಯಾಂಗ ಬಂಧನಕ್ಕೆ ಒಳಗಾಗುವ ಈ ಎಲ್ಲರನ್ನೂ ಬೆಂಗಳೂರಿನ ಯಾವುದಾದರೂ ಸರ್ಕಾರಿ ಆಸ್ಪತ್ರೆ, ಹಾಸ್ಟೆಲ್ ಅಥವಾ ಯಾವುದಾದರೂ ಕಟ್ಟಡದಲ್ಲಿ ಸೂಕ್ತ ಬಂದೋಬಸ್ತ್​ನೊಂದಿಗೆ ಇಡುವುದು ಸೂಕ್ತ. ಸರ್ಕಾರ ಇಂತಹ ಸೂಕ್ಷ್ಮ ವಿಚಾರದಲ್ಲಿ ಜನರೊಂದಿಗೆ ಚೆಲ್ಲಾಟವಾಡದೇ ತಕ್ಷಣವೇ ತುರ್ತು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ರಾಮನಗರ ಕಾರಾಗೃಹದಲ್ಲಿ ಅಡುಗೆಯವರು ಮತ್ತು ಶುಚಿತ್ವದ ಸಿಬ್ಬಂದಿ ವಾಸಿಸುತ್ತಿದ್ದು, ಜನರೊಂದಿಗೆ ಸಂಪರ್ಕದಲ್ಲಿರುತ್ತಾರೆ. ಗಲಭೆಕೋರರಿಂದ ಅಕಸ್ಮಾತ್ ಸೋಂಕು ತಗುಲಿದರೆ ಜಿಲ್ಲೆಯ ಸ್ವಾಸ್ಥ್ಯ ಹದಗೆಡುತ್ತದೆ ಎಂಬ ಕನಿಷ್ಠ ಪ್ರಜ್ಞೆ ಸರ್ಕಾರಕ್ಕೆ ಬೇಡವೇ ಎಂದು ಕಿಡಿಕಾರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.